Site icon Vistara News

ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ: ಕುಮಾರಸ್ವಾಮಿ ಕಿಡಿ

HDK has announced an incentive of Rs 2 lakh for women marrying farmers' sons

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ನಡೆಯುತ್ತಿದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿದ್ಯುತ್ ದರ ಏರಿಕೆ ಪ್ರಸ್ತಾಪದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು “”ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನುʼʼ ಎಂದು ಪ್ರಶ್ನಿಸಿದ್ದಾರೆ.

ಮಾಸಿಕ 100 ಯೂನಿಟ್  ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ ಎಂದು ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿಕಾರಿದ್ದಾರೆ.

ಇದನ್ನು ಓದಿ| ಎಲ್ಲರ ಬೆನ್ನಿಗೂ ಚೂರಿ ಹಾಕಿದ್ದು ನಾನೆ, ಏನಿವಾಗ?: ಎಚ್‌.ಡಿ. ಕುಮಾರಸ್ವಾಮಿ

ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನರಿಗೆ ಗೊತ್ತಿದೆ. ಆ  ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ ಎಂದು ಎಚ್​ಡಿಕೆ ಟೀಕಿಸಿದ್ದಾರೆ.

ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ  ಜನಾಂದೋಲನಕ್ಕೆ ಇಳಿಯಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ| ಕಾಂಗ್ರೆಸ್‌ ಪರ ಬ್ಯಾಟಿಂಗ್‌ ಮಾಡಿ ಅಚ್ಚರಿ ಮೂಡಿಸಿದ ಕುಮಾರಸ್ವಾಮಿ

Exit mobile version