Site icon Vistara News

Tumkur accident | ಸಂತ್ರಸ್ತರಿಗೆ ಪ್ರಧಾನ ಮಂತ್ರಿ ಪರಿಹಾರ ಘೋಷಣೆ, ಸಂತಾಪ

tumkur

ಬೆಂಗಳೂರು: ತುಮಕೂರು ಬಳಿಯ ಶಿರಾ ಸಮೀಪ ಗುರುವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಅವರು ಈ ಕುರಿತು ಟ್ವೀಟ್‌ ಮಾಡಿದ್ದಾರೆ.

ʻʻಕರ್ನಾಟಕದ ತುಮಕೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತ ಹೃದಯ ತಲ್ಲಣಗೊಳಿಸುವಂಥದು. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಹಾರೈಸುತ್ತೇನೆ. ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF) ಯಿಂದ 2 ಲಕ್ಷ ರೂ.ಗಳನ್ನು ನೀಡುತ್ತೇನೆ. ಗಾಯಾಳುಗಳಿಗೆ ರೂ. 50,000 ನೀಡಲಾಗುತ್ತದೆʼʼ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Tumkur accident | ಶಿರಾ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ, 9 ಕಾರ್ಮಿಕರ ಸಾವು

Exit mobile version