Site icon Vistara News

Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ?

Prajwal Revanna Case

Room And Toilet Not Clean In SIT Custody; Says Prajwal Revanna In Court

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಸಿಲುಕಿ, ಕಳೆದ 34 ದಿನಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರನ್ನು ಕೊನೆಗೂ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Air Port) ಬಂಧಿಸಲಾಗಿದೆ. ದೇವನಹಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌ 2ಗೆ ಆಗಮಿಸುತ್ತಲೇ ಇಮಿಗ್ರೇಷನ್‌ ಅಧಿಕಾರಿಗಳು ವಿಚಾರಣೆ ನಡೆಸಿ, ಸಂಸದನನ್ನು ಎಸ್‌ಐಟಿ ಅಧಿಕಾರಿಗಳಿಗೆ ವಹಿಸಿದ್ದಾರೆ.

ಮುಂದೇನಾಗುತ್ತದೆ?

ಪ್ರಜ್ವಲ್‌ ರೇವಣ್ಣ ಸಂಸದರಾಗಿರುವ ಕಾರಣ, ಅವರ ಬಳಿ ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ ಇರುವ ಕಾರಣ ವಿಮಾನ ನಿಲ್ದಾಣದಲ್ಲಿಯೇ ಇನ್ನಷ್ಟು ಪ್ರಕ್ರಿಯೆ ನಡೆಯಲಿದೆ. ಪ್ರಜ್ವಲ್‌ ರೇವಣ್ಣ ಬಂಧನದ ಕುರಿತು ಲೋಕಸಭೆ ಸ್ಪೀಕರ್‌ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ಸುಮಾರು 45 ಪುಟಗಳ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಇಮಿಗ್ರೇಷನ್‌ ಅಧಿಕಾರಿಗಳ ಬಳಿ ಎಸ್‌ಐಟಿ ಅಧಿಕಾರಿಗಳು ಹಲವು ದಾಖಲೆಗಳ ಪರಿಶೀಲನೆ ಸೇರಿ ವಿವಿಧ ಪ್ರಕ್ರಿಯೆ ನಡೆಯಲಿದೆ. ಇದಾದ ಬಳಿಕವೇ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡಲಾಗುತ್ತದೆ.

ಇಮಿಗ್ರೇಷನ್‌ ಅಧಿಕಾರಿಗಳಿಂದ ಪ್ರಜ್ವಲ್‌ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ನಂತರ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ ಇದೆ. ವೈದ್ಯಕೀಯ ತಪಾಸಣೆ ಬಳಿಕ ಸಿಐಡಿ ಕಚೇರಿಗೆ ಕರೆದೊಯ್ಯಲಿದ್ದಾರೆ. ಬೆಳಗ್ಗೆ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಸಿಐಡಿ ಕಚೇರಿಗೆ ಎದುರು ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ನಾಳೆ ಜಾಮೀನು ಅರ್ಜಿ ವಿಚಾರಣೆ

ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಸೇರಿ ಎಫ್‌ಐಆರ್‌ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ಪ್ರಜ್ವಲ್‌ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 31ರಂದು ಅರ್ಜಿಯ ವಿಚಾರಣೆ ನಡೆಯಲಿದೆ. ಇನ್ನು, ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ತೀರ್ಪು ಕೂಡ ಶುಕ್ರವಾರವೇ ಹೊರಬೀಳಲಿದೆ. ಇದರಿಂದಾಗಿ ಶುಕ್ರವಾರವು ಎಚ್‌.ಡಿ.ರೇವಣ್ಣ ಕುಟುಂಬಕ್ಕೆ ಬಿಗ್‌ ಡೇ ಆಗಿದೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Exit mobile version