Site icon Vistara News

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Prajwal Revanna Case

ಹಾಸನ: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ (Prajwal Revanna Case) ಬಂಧನವಾಗಿರುವ ವಕೀಲ ದೇವರಾಜೇಗೌಡಗೆ ವಿಧಿಸಿದ್ದ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಿಸಿದ್ದು, ಇನ್ನೂ 14 ದಿನ ಜೈಲೇ ಗತಿಯಾಗಿದೆ. ಜೂನ್ 7 ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ಹೊಳೆನರಸೀಪುರ ನ್ಯಾಯಾಲಯ ಆದೇಶ ಹೊರಡಿಸಿದೆ.

ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಕೇಸ್ ಹಿನ್ನೆಲೆ ಮೇ‌ 11 ರಂದು ಐಪಿಸಿ ಸೆಕ್ಷೆನ್ 376 ಅಡಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಅದೇ ರೀತಿ ಏಪ್ರಿಲ್ 1 ರಂದು ಐಪಿಸಿ ಸೆಕ್ಷೆನ್ 354 A, 354 C, 448, 504,506 ಅಡಿ ದಾಖಲಾಗಿದ್ದ ಪ್ರಕರಣ ದಾಖಲಾಗಿತ್ತು. ಹೀಗಾಗಿ ಏಪ್ರಿಲ್ 10ರಂದು ಹಿರಿಯೂರಿನಲ್ಲಿ ದೇವರಾಜೇಗೌಡರನ್ನು ಬಂಧಿಸಲಾಗಿತ್ತು. ನಂತರ ಏಪ್ರಿಲ್ 11 ರಂದು ಹೊಳೆನರಸೀಪುರದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಅವರಿಗೆ ಏಪ್ರಿಲ್ 24ರ ವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ವೇಳೆ ಹೊಳೆನರಸೀಪುರ ಪೊಲೀಸರ ಕಸ್ಟಡಿಗೆ ನಾಲ್ಕು ದಿನ, ಎಸ್‌ಐಟಿ ಕಸ್ಟಡಿಗೆ ಮೂರು ದಿನ ನೀಡಲಾಗಿತ್ತು

14 ದಿನದ ನ್ಯಾಯಾಂಗ ಬಂಧನ ಮುಗಿದಿದ್ದರಿಂದ ಶುಕ್ರವಾರ ಹೊಳೆನರಸೀಪುರ ನ್ಯಾಯಾಲಯಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಇದೇ ತಿಂಗಳು 28ಕ್ಕೆ ನಡೆಯಲಿರುವ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ | Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ವಕೀಲ ದೇವರಾಜೇಗೌಡ ಬಂಧನವಾಗಿರುವುದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿದೆ.

Exit mobile version