ಬೆಂಗಳೂರು: ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 29ರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಕೆ.ಆರ್.ನಗರ ಸಂತ್ರಸ್ಥ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದರಿಂದ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ನಾಳೆಗೆ ವಿಚಾರಣೆ ಮುಂದೂಡಿದೆ.
ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಸೋಮವಾರ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿ ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಧೀಶರು ನೋಟೀಸ್ ನೀಡಿದ್ದರು. ಭವಾನಿ ರೇವಣ್ಣ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ಮತ್ತೊಂದೆಡೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
ಇದನ್ನೂ ಓದಿ | Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ
ಈ ಪ್ರಕರಣದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ಅರ್ಹವಾಗಿದೆ. ಅಕ್ಷೇಪಣೆ ಸಲ್ಲಿಸುವವರೆಗೂ ಬಂಧನದಿಂದ ರಕ್ಷಣೆ ನೀಡಬೇಕು. ಇವತ್ತು ಬಂಧನ ಮಾಡಿದರೆ ಏನು ಮಾಡಲು ಆಗುತ್ತೆ. ಹೀಗಾಗಿ ನನ್ನ ಕಕ್ಷಿದಾರರಿಗೆ ಕಾನೂನು ರಕ್ಷಣೆ ಕೊಡಬೇಕು ಎಂದು ಭವಾನಿ ಪರ ವಕೀಲರು ಮನವಿ ಮಾಡಿದ್ದಾರೆ. ಇನ್ನು ಪ್ರಕರಣದಲ್ಲಿ ದಿನೇ ದಿನೇ ಆರೋಪಿಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. ಕೆಎಂಎಫ್ ಮಾಜಿ ಅಧ್ಯಕ್ಷರನ್ನು ಈ ಪ್ರಕರಣದಲ್ಲಿ 7ನೇ ಆರೋಪಿಯನ್ನಾಗಿ ಸೇರಿಸಿದ್ದಾರೆ ಎಂದು ತಿಳಿಸಿದ್ದಾರೆ. ವಾದ-ಪ್ರತಿ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ.
4 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಜೂ.3ಕ್ಕೆ ವಿಚಾರಣೆ ಮುಂದೂಡಿಕೆ
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ನವೀನ್ ಗೌಡ, ಎಚ್.ಪಿ. ಪುಟ್ಟರಾಜು, ಕಾರ್ತಿಕ್ ಹಾಗೂ ಚೇತನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂನ್ 3 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.
ನಾಲ್ವರು ಆರೋಪಿಗಳ ಪೈಕಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆಂದು ಮಂಗಳವಾರ ಹೈಕೋರ್ಟ್‌ಗೆ ಬಂದಿದ್ದ ಚೇತನ್ ಹಾಗೂ ನವೀನ್‌ಗೌಡನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಕೋರ್ಟ್‌ಗೆ ಹಾಜರುಪಡಿಸಲು ಹಾಸನಕ್ಕೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ | Gurmeet Ram Rahim: 22ವರ್ಷಗಳ ಹಳೆಯ ಕೊಲೆ ಕೇಸ್; ಗುರ್ಮೀತ್ ರಾಮ್ ರಹೀಮ್ ಖುಲಾಸೆ
ಹೈಕೋರ್ಟ್ ನ್ಯಾ. ಎಂ.ಜಿ. ಉಮಾ ಅವರಿದ್ದ ಪೀಠದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು,
ಎಸ್ಐಟಿ ಅಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಜೂನ್ 3ಕ್ಕೆ ನ್ಯಾಯಾಧೀಶೆ ಮುಂದೂಡಿದ್ದಾರೆ.