Prajwal Revanna Case: ಅಶ್ಲೀಲ ವಿಡಿಯೊ ಪ್ರಕರಣ; ಲಿಖಿತ್ ಗೌಡ, ಚೇತನ್‌ಗೆ ಜಾಮೀನು ನಿರಾಕರಣೆ - Vistara News

ಕರ್ನಾಟಕ

Prajwal Revanna Case: ಅಶ್ಲೀಲ ವಿಡಿಯೊ ಪ್ರಕರಣ; ಲಿಖಿತ್ ಗೌಡ, ಚೇತನ್‌ಗೆ ಜಾಮೀನು ನಿರಾಕರಣೆ

Prajwal Revanna Case: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಚೇತನ್ ಹಾಗೂ ಲಿಖಿತ್‌ ಬಂಧನವಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಅವರಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಿಸಿದೆ.

VISTARANEWS.COM


on

Prajwal Revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Prajwal Revanna Case) ವಿಡಿಯೊ ವೈರಲ್ ಮಾಡಿದ ಆರೋಪದಲ್ಲಿ ಬಂಧನವಾಗಿರುವ ಲಿಖಿತ್ ಗೌಡ ಹಾಗೂ ಚೇತನ್‌ಗೆ ಜಾಮೀನು ತಿರಸ್ಕೃತಗೊಂಡಿದೆ. ಹಾಸನದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದೆ.

ಮೇ 12 ರಂದು ಎಸ್ಐಟಿ ಅಧಿಕಾರಿಗಳು ತಂಡ ಲಿಖಿತ್, ಚೇತನ್‌ರನ್ನು ಬಂಧಿಸಿತ್ತು. ಮೇ 12ರಂದು ಈ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು. ಆದರೆ, ಇದೀಗ ಆರೋಪಿಗಳಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಿಸಿದೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ​ ವಿಡಿಯೊಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಿತ್ತು. ಸದ್ಯ ಅಶ್ಲೀಲ ವಿಡಿಯೊ ಹರಿಬಿಟ್ಟವರನ್ನು ವಶಕ್ಕೆ ಪಡೆಯುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡ, ಆರೋಪಿಗಳಾದ ಚೇತನ್​ ಹಾಗೂ ಲಿಖಿತ್​ನನ್ನು ಬಂಧಿಸಿದ್ದರು. ಇನ್ನುಳಿದ ನವೀನ್ ಗೌಡ ಮತ್ತು ಪುಟ್ಟರಾಜುಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿಗಳಾದ ಲಿಖಿತ್​ ಗೌಡ ಮತ್ತು ಚೇತನ್, ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾಗಿದ್ದಾರೆ. ಮೊದಲಿಗೆ ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿದ್ದ ಕೇಸ್‌ನಲ್ಲಿ ಈ ಇಬ್ಬರ ಹೆಸರು ಇರಲಿಲ್ಲ. ನಂತರ ಈ ಇಬ್ಬರ ಮೇಲೆ ವಿಡಿಯೊ ಹಂಚಿಕೆ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ | CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

HD Revanna released from jail Revanna Go straight to HD Deve Gowda house

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Bail) ಅವರಿಗೆ ಸೋಮವಾರ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಂಗಳವಾರ (ಮೇ 14) ಬಿಡುಗಡೆ (HD Revanna Released) ಮಾಡಲಾಗಿದೆ.

ಇದರಿಂದಾಗಿ ಒಟ್ಟು 11 ದಿನಗಳ ವನವಾಸದಿಂದ ಎಚ್.ಡಿ. ರೇವಣ್ಣ ಮುಕ್ತರಾದರು. ಈ ವೇಳೆ ರೇವಣ್ಣ ಪರ ವಕೀಲರು ಜಾಮೀನು ಷರತ್ತುಗಳನ್ನು ಪೂರೈಸಿದರು. ರೇವಣ್ಣ ಪಾಸ್ ಪೋರ್ಟ್, ಇಬ್ಬರು ಶ್ಯೂರಿಟಿ, ಐದು ಲಕ್ಷ ರೂಪಾಯಿ ಬಾಂಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ವಕೀಲರು ಸಲ್ಲಿಸಿದ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಯಿತು.

ಗುಳಿಕ ಕಾಲದಲ್ಲಿಯೇ ರೇವಣ್ಣ ಜೈಲಿನಿಂದ ರಿಲೀಸ್

ಮಧ್ಯಾಹ್ನ 3:22 ರಿಂದ 5 ಗಂಟೆಯವರೆಗೆ ರಾಹುಕಾಲ ಇರುವ ಹಿನ್ನೆಲೆಯಲ್ಲಿ ಬಿಡುಗಡೆ ಪ್ರಕ್ರಿಯೆಯನ್ನು ಬೇಗ ಮಾಡಲಾಗಿದೆ. ಮಧ್ಯಾಹ್ನ 12.5 ರಿಂದ 1:39ರವರೆಗೆ ಗುಳಿಕ ಕಾಲ ಇದ್ದರಿಂದ 1.30ಕ್ಕೆ ರೇವಣ್ಣ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ರೇವಣ್ಣ ಜೈಲಿನಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು ಜೈಕಾರ ಹಾಕಿದ್ದಾರೆ. ಆದರೆ, ಅಲ್ಲಿ ಕ್ಷಣವೂ ನಿಲ್ಲದ ಎಚ್‌.ಡಿ. ರೇವಣ್ಣ ಸೀದಾ ಪದ್ಮನಾಭನಗರದಲ್ಲಿರುವ ಎಚ್‌.ಡಿ.ದ ದೇವೇಗೌಡ ಅವರ ನಿವಾಸಕ್ಕೆ ಹೊರಟಿದ್ದಾರೆ.

ಇದನ್ನೂ ಓದಿ | HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

ಎಚ್.ಡಿ. ರೇವಣ್ಣಗೆ ಜಾಮೀನು ಸಿಗುವುದಕ್ಕೆ ಕಾರಣಗಳೇನು?

  • ರೇವಣ್ಣ ಅವರೇ ಕಿಡ್ನ್ಯಾಪ್ ಮಾಡಿಸಿದ್ದು ಎನ್ನುವುದಕ್ಕೆ ಸಾಕ್ಷಿ ಇಲ್ಲ.
  • ಸಿಆರ್‌ಪಿಸಿ ಅಡಿ ಸಂತ್ರಸ್ತೆ ನೀಡಿದ್ದ ಹೇಳಿಕೆಯಲ್ಲೂ ಪ್ರಸ್ತಾಪ ಇಲ್ಲ.
  • ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಸಾಕ್ಷಿ ಒದಗಿಸಲು ಎಸ್‌ಐಟಿ ವಿಫಲವಾಗಿದೆ.
  • ಎಚ್‌.ಡಿ. ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್ ಅನ್ನಲು ಸಾಕ್ಷಿ ಇಲ್ಲ.
  • ರೇವಣ್ಣ ಅವರಿಗೆ ಏಕೆ ಜಾಮೀನು ಕೊಡಲಾಗುತ್ತಿದೆ ಎಂಬುದಾಗಿ ಈ ಮೇಲಿನ ಕಾರಣಗಳನ್ನು ಉಲ್ಲೇಖಿಸಿ, ನ್ಯಾಯಾಧೀಶರು ಸ್ಪಷ್ಟವಾಗಿ ಆದೇಶಿಸಿದ್ದಾರೆ. ಆದರೆ, ಕೆಲವು ಷರತ್ತುಗಳನ್ನು ನ್ಯಾಯಾಲಯವು ವಿಧಿಸಿದೆ.

8 ಷರತ್ತುಗಳನ್ನು ವಿಧಿಸಿ ಬೇಲ್ ಕೊಟ್ಟ ಕೋರ್ಟ್!

  • 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ಕೊಡಬೇಕು
  • ಇಬ್ಬರ ಶ್ಯೂರಿಟಿಯನ್ನು ಒದಗಿಸಿಕೊಡಬೇಕು
  • ಯಾವ ಕಾರಣಕ್ಕೂ ದೇಶ ಬಿಟ್ಟು ಹೋಗಬಾರದು
  • ಕೇಸ್ ಆಗಿರುವ ಕೆ.ಆರ್.ನಗರಕ್ಕೆ ಹೋಗಬಾರದು
  • ಎಸ್‌ಐಟಿ ತನಿಖೆಗೆ ಸೂಕ್ತ ಸಹಕಾರ ನೀಡಲೇಬೇಕು
  • ಯಾವುದೇ ರೀತಿಯ ಸಾಕ್ಷ್ಯ ನಾಶ ಮಾಡಬಾರದು
  • ಪಾಸ್ ಪೋರ್ಟ್ ಅನ್ನು ಕೋರ್ಟ್‌ಗೆ ಸಲ್ಲಿಸಬೇಕು.
  • ನ್ಯಾಯಾಲಯದ ಅನುಮತಿ ಇಲ್ಲದೇ ರಾಜ್ಯದಿಂದ ಹೊರಹೋಗುವಂತಿಲ್ಲ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Electric shock : ಬಟ್ಟೆ ಒಣ ಹಾಕಲು ಹೋದಾಗ ಕರೆಂಟ್‌ ಶಾಕ್‌ನಿಂದ ವಿದ್ಯಾರ್ಥಿ ಸಾವು

Electric shock : ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಯೊಬ್ಬ ಬಟ್ಟೆ ಒಣ ಹಾಕಲು ಹೋದಾಗ ವಿದ್ಯುತ್‌ ತಂತಿ ತಗುಲಿ ದಾರುಣವಾಗಿ ಮೃತಪಟ್ಟಿದ್ದಾನೆ. ಮೃತ ಕುಟುಂಬಸ್ಥರು ಈ ಸಂಬಂಧ ದೂರು ನೀಡಿದ್ದಾರೆ.

VISTARANEWS.COM


on

By

Electric shock
Koo

ದೇವನಹಳ್ಳಿ: ಡಾ.ಬಿಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿ ಕರೆಂಟ್‌ ಶಾಕ್‌ನಿಂದ (Electric shock) ಮೃತಪಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಘಟನೆ ನಡೆದಿದೆ. ಸಾಯಿಭವನ್ (13) ಮೃತ ದುರ್ದೈವಿ.

ಹೊಸಕೋಟೆ ತಾಲೂಕಿನ ಸೂಲಿಬೆಲೆ ನಿವಾಸಿ ಸಾಯಿಭವನ್‌ ಕಳೆದ ಎರಡು ವರ್ಷಗಳಿಂದ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಹಾಸ್ಟೆಲ್‌ನಲ್ಲಿದ್ದ ಸಾಯಿಭವನ್‌ ಭಾನುವಾರ ಬೆಳಗ್ಗೆ ಬಟ್ಟೆ ಒಣ ಹಾಕಲು ಹೋಗಿದ್ದಾನೆ. ಈ ವೇಳೆ ವಸತಿ ನಿಲಯದ ಮೇಲಿನ 11KV ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹೊಸಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

ಫ್ಯಾನ್‌ ಸ್ವಿಚ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌

ಬೆಂಗಳೂರು/ಚಿಕ್ಕಬಳ್ಳಾಪುರ: ಕರೆಂಟ್ ಶಾಕ್ (Electric shock) ಹೊಡೆದು ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಾಡುಗೋಡಿ‌ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬೇನ ಅಗ್ರಹಾರದಲ್ಲಿ ನಡೆದಿದೆ. ಬಿಪುಲ್ ಕುಮಾರ್ (35) ಮೃತ ದುರ್ದೈವಿ.

ಟೈಲ್ಸ್ ಶೋ ರೂಂನಲ್ಲಿ ಕೆಲಸ‌ ಮಾಡುತ್ತಿದ್ದ ಬಿಪುಲ್, ಫ್ಯಾನ್ ಆನ್ ಮಾಡಲು ಹೋಗಿದ್ದಾನೆ. ಈ ವೇಳೆ ಕರೆಂಟ್ ಶಾಕ್ ಬಡಿದಿದ್ದು ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಬಿಪುಲ್‌ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Road Accident : ಮುಖಾಮುಖಿಯಾಗಿ ಬಂದ ಕಾರುಗಳು ಪೀಸ್‌ ಪೀಸ್‌; ಚಾಲಕ ಸ್ಪಾಟ್‌ ಡೆತ್‌

ರಿಪೇರಿ ಮಾಡುವಾಗಲೇ ಪ್ರವಹಿಸಿದ ವಿದ್ಯುತ್‌; ಲೈನ್‌ಮ್ಯಾನ್‌ ಸಾವು

ಚಿಕ್ಕಬಳ್ಳಾಪುರದಲ್ಲಿ ಕಾರು ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ದುರ್ಮರಣ ಬೆನ್ನಲ್ಲೆ ಗೌರಿಬಿದನೂರಿನ ಬಿಸಲಹಳ್ಳಿ ಗ್ರಾಮದಲ್ಲಿ ಮೊತ್ತೊಬ್ಬ ಬೆಸ್ಕಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಾವಣಗೆರೆ ಮೂಲದ ಉದಯ್ ಕುಮಾರ್ (28 ) ಮೃತ ದುರ್ದೈವಿ.

ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಹೋದ ಉದಯ್‌ಗೆ ವಿದ್ಯುತ್‌ ಪ್ರವಹಿಸಿದ್ದು ಕ್ಷಣ ಮಾತ್ರದಲ್ಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇನ್ನೂ ಕಂಬದಲ್ಲೇ ಲೈನ್ ಮ್ಯಾನ್ ಮೃತದೇಹ ನೇತಾಡುತ್ತಿದ್ದು, ದುರ್ಘಟನೆ ಸಂಭವಿಸಿ ಒಂದು ಗಂಟೆ ಕಳೆದರೂ ಸ್ಥಳಕ್ಕೆ ಯಾವೊಬ್ಬ ಬೆಸ್ಕಾ ಅಧಿಕಾರಿಗಳು ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದರು.

ತಡವಾಗಿ ಬಂದ ಅಧಿಕಾರಿಗಳಿಗೆ ತರಾಟೆ

ವಿದ್ಯುತ್ ದುರಸ್ಥಿ ವೇಳೆ ಲೈನ್ ಮ್ಯಾನ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕ ತಡವಾಗಿ ಬಂದ ಬೆಸ್ಕಾ ಅಧಿಕಾರಿಗಳಿಗೆ ಸ್ಥಳೀಯರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ಬಳಿಕ ವಿದ್ಯುತ್‌ ಕಂಬದಲ್ಲಿದ್ದ ಮೃತದೇಹವನ್ನು ಕೆಳಗೆ ಇಳಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

Drowned in water : ಬ್ರಿಡ್ಜ್ ಕಮ್ ಬ್ಯಾರೇಜ್‌ ಮೇಲೆ ಬಂದಾಗ ಟೈಲರ್ ಸಮೇತ ಟ್ರಾಕ್ಟರ್‌ವೊಂದು ನದಿಗೆ ಬಿದ್ದಿದೆ. 12 ಮಂದಿ ಅಪಾಯದಿಂದ ಪಾರಾಗಿದ್ದು, ಓರ್ವ ನೀರಿನ ರಭಸಕ್ಕೆ ಕಣ್ಮರೆಯಾಗಿದ್ದಾನೆ.

VISTARANEWS.COM


on

By

Drowned in water
Koo

ಬೆಳಗಾವಿ: ಭಾರಿ ಮಳೆಗೆ ತುಂಬಿ ಹರಿಯುತ್ತಿದ್ದ ನದಿ ಸೇತುವೆ (Drowned in water) ಮೇಲೆ 13 ಜನರನ್ನು ಹೊತ್ತು ಬರುತ್ತಿದ್ದ ಟ್ರಾಕ್ಟರ್‌ವೊಂದು ಮಗುಚಿಬಿದ್ದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ನಂದಗಾಂವ್ ಬಳಿ ದುರ್ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ನಂದಗಾಂವ್ ಗ್ರಾಮದ ಮಧ್ಯೆ ಇರುವ ಬ್ರಿಡ್ಜ್ ಕಮ್ ಬ್ಯಾರೇಜ್‌ ಮೇಲೆ ಬಂದಾಗ ಟೈಲರ್ ಸಮೇತ ಟ್ರಾಕ್ಟರ್ ನೀರಿಗೆ ಬಿದ್ದಿದೆ. ನೀರಿಗೆ ಬಿದ್ದೊಡನೆ 12 ಮಂದಿ ಈಜಿಕೊಂಡು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಓರ್ವ ನೀರಲ್ಲಿ ಕಣ್ಮರೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ.

ಅವರಾದಿಯಿಂದ ನಂದಗಾಂವ್‌ಗೆ ಕೂಲಿ ಕೆಲಸಕ್ಕೆಂದು‌ ಕಾರ್ಮಿಕರು ಟ್ರಾಕ್ಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ನದಿ ದಾಟುವಾಗ ಆಯತಪ್ಪಿ ಘಟಪ್ರಭಾ ನದಿಗೆ ಟ್ರಾಕ್ಟರ್ ಬಿದ್ದಿತ್ತು. ಸ್ಥಳಕ್ಕೆ ಕುಲಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಕೊಚ್ಚಿ ಹೋದವನಿಗಾಗಿ ಹುಡುಕಾಟ ನಡೆಯುತ್ತಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನೂ ಓದಿ:Car Accident : ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ; ಕಾರು ಬಿಟ್ಟು ಚಾಲಕ ಪರಾರಿ

ಕೋಲಾರದಲ್ಲಿ ಕೃಷಿ ಹೊಂಡಕ್ಕೆ ಜಾರಿ ಬಿದ್ದ ಬಾಲಕ ಸಾವು

ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿದ್ದಾನೆ. ಕೋಲಾರ ತಾಲೂಕಿನ ದಂಡಿಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚರಣ್ (11) ಮೃತ ದುರ್ದೈವಿ.

ಐದನೇ ತರಗತಿಯಲ್ಲಿ ಓದುತ್ತಿದ್ದ ಚರಣ್‌ ಕೃಷಿ ಹೊಂಡದ ಸಮೀಪ ಬಂದಾಗ, ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ. ಪರಿಣಾಮ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಸಾವಿನಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕೋಡಿ

Car Accident : ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ; ಕಾರು ಬಿಟ್ಟು ಚಾಲಕ ಪರಾರಿ

Car Accident : ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಇತ್ತ ಕಾರು ಚಾಲಕ ಪರಾರಿ ಆಗಿದ್ದಾರೆ.

VISTARANEWS.COM


on

By

Car Accident in chikkodi
Koo

ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು.

ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

Car Accident

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಇದನ್ನೂ ಓದಿ: Shivamogga Accident : ತಿರುವಿನಲ್ಲಿ ಖಾಸಗಿ ಬಸ್‌ ಪಲ್ಟಿ; ಉರುಳಿ ಬಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ

ಕಾರಿಗೆ ಬೈಕ್ ಅಡ್ಡ ಹಾಕಿ ಬಾನೆಟ್‌ಗೆ ಒದ್ದ ಬೈಕ್ ಸವಾರ

ಬೆಂಗಳೂರು: ದಾರಿ ಬಿಡುವ ಸಂದರ್ಭದಲ್ಲಿ ಬೈಕ್‌ ಮತ್ತು ಕಾರು ಚಾಲಕನ ಮಧ್ಯೆ ಜಗಳ ನಡೆದಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಮೂಲಕ ನಗರದಲ್ಲಿ ನಡೆಯುತ್ತಿರುವ ರೋಡ್ ರೇಜ್‌ಗೆ ಮತ್ತೊಂದು ಘಟನೆ ಸೇರ್ಪಡೆಯಾದಂತಾಗಿದೆ.

ಜಕ್ಕೂರಿನಲ್ಲಿ ಯೂ ಟರ್ನ್ ಮಾಡುವ ವೇಳೆ ಕಾರು ಚಾಲಕ ಪ್ರವೀಣ್ ಹಾಗೂ ದ್ವಿಚಕ್ರ ವಾಹನ ಸವಾರನ ನಡುವೆ ಕಿರಿಕ್ ನಡೆದಿದೆ. ಈ ವೇಳೆ ಕಾರನ್ನು ಅಡ್ಡ ಹಾಕಿ ಕಾರ್‌ನ ಬಾನೆಟ್‌ಗೆ ಒದ್ದು ಬೈಕ್‌ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಫಾಲೋ ಮಾಡಿಕೊಂಡು ಬಂದಿದ್ದ ದ್ವಿಚಕ್ರ ವಾಹನ ಸವಾರ ಶ್ರೀರಾಮಪುರ ವಿಲೇಜ್ ಬಳಿಯೂ ಕಿರಿಕ್‌ ಮಾಡಿದ್ದಾನೆ. ಕಾರ್ ಡ್ಯಾಷ್ ಕ್ಯಾಮ್‌ ಬೈಕ್‌ ಸವಾರನ ಕೃತ್ಯ ಸೆರೆಯಾಗಿದೆ.

ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್

ಬೆಂಗಳೂರು: ನಗರದಲ್ಲಿ ಹೊಸ ರೀತಿಯ ಕಳ್ಳತನ ಆರಂಭವಾಗಿದೆ. ಇದೀಗ ಕಳ್ಳರು ತುಪ್ಪವನ್ನೇ ಟಾರ್ಗೆಟ್‌ ಮಾಡಿ ಕಾರ್ಯ ಪ್ರವೃತ್ತರಾಗಿದ್ದಾರೆ. ನಂದಿನಿ ಪಾರ್ಲರ್‌ಗಳು, ಸೂಪರ್ ಮಾರ್ಕೆಟ್‌ಗಳೇ ಇವರ ಮುಖ್ಯ ಗುರಿ. ಅದಕ್ಕೆ ಇತ್ತೀಚಿನ ಉದಾಹರಣೆ ಎಂಬಂತೆ ಅನ್ನಪೂರ್ಣೇಶ್ವರಿ ನಗರದಲ್ಲಿ 15 ಲೀಟರ್ ತುಪ್ಪ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ. ತುಪ್ಪ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ (Robbery Case).

ಒಬ್ಬರೇ ಇರುವ ಅಂಗಡಿಗಳನ್ನ ಟಾರ್ಗೆಟ್‌ ಮಾಡುವ ಕಳ್ಳರು ಕೆಜಿಗಟ್ಟಲೇ ತುಪ್ಪ ಖರೀದಿಸುವ ನೆಪದಲ್ಲಿ ಆಗಮಿಸುತ್ತಾರೆ. ವಳಿಕ ಮತ್ತೊಂದು ವಸ್ತು ಕೇಳಿ ಮಾಲೀಕರು ಅತ್ತ ತಿರುಗುವಷ್ಟರಲ್ಲಿ ತಂದಿಟ್ಟ ತುಪ್ಪವನ್ನು ಎತ್ತಿಕೊಂಡು ಪರಾರಿಯಾತ್ತಾರೆ. ಕಳೆದ ಒಂದು ತಿಂಗಳ ಹಿಂದೆ ಇದೇ ರೀತಿ ನಂದಿನಿ ಪಾರ್ಲರ್‌ ಒಂದರಿಂದ 15 ಕೆಜಿ ತುಪ್ಪ ಖರೀದಿಸಿ ಖದೀಮರು ಪಾರಾರಿಯಾಗಿದ್ದರು.

ಅಂದು ಕೆಂಗೇರಿ ಕೊಮ್ಮಘಟ್ಟ ನಂದಿನಿ ಪಾರ್ಲರ್‌ನಲ್ಲಿ ಕೈಚಳಕ ತೋರಿದ್ದ ಕಳ್ಳರು ಪೇಡ ಖರೀದಿ ನೆಪದಲ್ಲಿ ತುಪ್ಪ ಕದ್ದೊಯ್ದಿದ್ದರು. ಇದೀಗ ಅದೇ ರೀತಿಯಲ್ಲಿ ಅನ್ನಪೂರ್ಣೇಶ್ವರಿ ನಗರದಲ್ಲಿ ಕಳ್ಳರು ಕೈ ಚಳಕ ತೋರಿದ್ದಾರೆ. ಅನ್ನಪೂರ್ಣೇಶ್ವರಿ ನಗರದ ಪೇರ್ ಪ್ರೈಸ್ ಎಂಬ ಸೂಪರ್ ಮಾರ್ಕೇಟ್‌ನಲ್ಲಿ ಈ ಘಟನೆ ನಡೆದಿದೆ. ಇಲ್ಲಿಂದಲೂ 15 ಲೀಟರ್ ತುಪ್ಪ ಖರೀದಿಸಿದ ಇಬ್ಬರು ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಟಿವಿ ಕ್ಯಾ,ಮೆರಾದಲ್ಲಿ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Shivamogga Accident : ತಿರುವಿನಲ್ಲಿ ಖಾಸಗಿ ಬಸ್‌ ಪಲ್ಟಿ; ಉರುಳಿ ಬಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ

Heavy Rain : ಭಾರಿ ಮಳೆಯಿಂದಾಗಿ ಬಸ್‌ವೊಂದು ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ (Shivamogga Accident) ಹೊಡೆದಿದೆ. ಬಸ್‌ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

Shivamogga Accident
Koo

ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ವೊಂದು (Shivamogga Accident) ಪಲ್ಟಿಯಾಗಿದೆ. ಪರಿಣಾಮ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ (Road Accident) ಘಟನೆ ನಡೆದಿದೆ.

ಖಾಸಗಿ ಬಸ್‌ ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿತ್ತು. ಮುಂಬಾಳು ತಿರುವಿನಲ್ಲಿ ಬರುವಾಗ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ನೋಡನೋಡುತ್ತಿದ್ದಂತೆ ಬಸ್‌ ಪಲ್ಟಿ ಹೊಡೆದಿದೆ. ಈ ವೇಳೆ ಬಸ್‌ನಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡರು.

Shivamogga News

ಧಾರಾಕಾರವಾಗಿ ಸುರಿದ ಮಳೆಯಿಂದ ತಿರುವಿನಲ್ಲಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಸಾಗರ, ಆನಂದಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೂ ರಸ್ತೆಗೆ ಅಡ್ಡಲಾಗಿ ಬಸ್‌ ಬಿದ್ದ ಪರಿಣಾಮ ಸ್ವಲ್ಪ ಸಮಯ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಹೀಗಾಗಿ ಪೊಲೀಸರು ಬಸ್‌ ತೆರವು ಕಾರ್ಯಚಾರಣೆಯಲ್ಲಿ ತೊಡಗಿದ್ದರು. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ.

Shivamogga Accident

ಇದನ್ನೂ ಓದಿ:Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌

ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಸಾವು

ಬೆಳಗಾವಿ ಜಿಲ್ಲೆ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಮೃತ ದುರ್ದೈವಿಗಳು.

ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬ ಡಿಕ್ಕಿ ಹೊಡೆದಿದೆ. ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Electric shock
ಬೆಂಗಳೂರು ಗ್ರಾಮಾಂತರ7 mins ago

Electric shock : ಬಟ್ಟೆ ಒಣ ಹಾಕಲು ಹೋದಾಗ ಕರೆಂಟ್‌ ಶಾಕ್‌ನಿಂದ ವಿದ್ಯಾರ್ಥಿ ಸಾವು

JEE Advanced Result 2024
ಶಿಕ್ಷಣ24 mins ago

JEE Advanced 2024 Result: ಜೆಇಇ ಅಡ್ವಾನ್ಸ್ಡ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ಹೀಗೆ ಚೆಕ್‌ ಮಾಡಿ

IND vs PAK
ಕ್ರಿಕೆಟ್25 mins ago

IND vs PAK: ಮೋದಿಯ ಪ್ರಮಾಣ ವಚನದ ಬದಲು ಭಾರತ-ಪಾಕ್ ಪಂದ್ಯ ವೀಕ್ಷಿಸುವೆ ಎಂದ ​ಶಶಿ ತರೂರ್

Viral Video
ವೈರಲ್ ನ್ಯೂಸ್37 mins ago

Viral Video: ಬಾಲಕಿಯ ಹಿಂಭಾಗ ಮುಟ್ಟಿದ ಮುಸ್ಲಿಂ ಯುವಕ; ಆಮೇಲೆ ನಡೆದಿದ್ದೇ ಬೇರೆ!

Drowned in water
ಬೆಳಗಾವಿ43 mins ago

Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

Radhika Merchant archival Dior dress for her pre-wedding
ಸಿನಿಮಾ47 mins ago

Radhika Merchant: ಪ್ರಿವೆಡ್ಡಿಂಗ್‌ಗೆ ಅಂಬಾನಿ ಸೊಸೆ ಧರಿಸಿದ್ದು 65 ವರ್ಷ ಹಳೆಯ ಸ್ಕರ್ಟ್‌! ಇದರ ಬೆಲೆ?

Car Accident in chikkodi
ಚಿಕ್ಕೋಡಿ1 hour ago

Car Accident : ಚಿಕ್ಕೋಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ; ಕಾರು ಬಿಟ್ಟು ಚಾಲಕ ಪರಾರಿ

Viral Video
ಕ್ರೀಡೆ1 hour ago

Viral Video: ಹೋಟೆಲ್ ಕಾರಿಡಾರ್​ನಲ್ಲಿ ಗಾಲ್ಫ್ ಆಡಿದ ಪಂತ್​-ಸೂರ್ಯಕುಮಾರ್​

Vastu Tips
ಧಾರ್ಮಿಕ1 hour ago

Vastu Tips: ಸಣ್ಣ ವಾಸ್ತು ದೋಷವೇ ಕುಟುಂಬದಲ್ಲಿ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

Shivamogga Accident
ಶಿವಮೊಗ್ಗ1 hour ago

Shivamogga Accident : ತಿರುವಿನಲ್ಲಿ ಖಾಸಗಿ ಬಸ್‌ ಪಲ್ಟಿ; ಉರುಳಿ ಬಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌