Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌ - Vistara News

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Prajwal Revanna Case: ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿದೆ.‌ ಎಲ್ಲಿಂದ, ಯಾವಾಗ ಸಂಸದ ಆಗಮಿಸಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Prajwal Revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
VISTARA-EXCLUSIVE

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್‌ಐಟಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ (Vistara Exclusive) ಲಭ್ಯವಾಗಿದೆ.‌ ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು. ಇದೀಗ ಅವರು ಇಂದೇ ದೇಶಕ್ಕೆ ಆಗಮಿಸುವ ಮಾಹಿತಿ ಲಭ್ಯವಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎನ್ನಲಾಗಿದೆ.

ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released first reaction after release will be acquitted of all charges

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇದನ್ನೂ ಓದಿ | HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Harish Poonja: ಪೊಲೀಸರಿಗೆ ಧಮ್ಕಿ ಪ್ರಕರಣ; ಶಾಸಕ ಹರೀಶ್‌ ಪೂಂಜಾ, 40 ಮಂದಿ ವಿರುದ್ಧ ಚಾರ್ಜ್‌ಶೀಟ್‌

Harish Poonja: ಬೆಳ್ತಂಗಡಿ ಶಾಸಕ ಪೂಂಜಾ ಜತೆ ಪೊಲೀಸ್ ಠಾಣೆಗೆ ಹೋಗಿದ್ದವರ 40 ಮಂದಿ ಹೆಸರನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಪೋಲಿಸರಿಗೆ ಧಮ್ಕಿ ಆರೋಪದಲ್ಲಿ ಶಾಸಕನ ವಿರುದ್ಧ ಎರಡು ಪ್ರಕರಣ ದಾಖಲಾಗಿದ್ದವು.

VISTARANEWS.COM


on

Harish Poonja
Koo

ಮಂಗಳೂರು: ಪೋಲಿಸರಿಗೆ ಧಮ್ಕಿ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ 40 ಮಂದಿ ವಿರುದ್ಧ ಪೊಲೀಸರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಶಾಸಕ ಹರೀಶ್‌ ಪೂಂಜಾ (Harish Poonja) ಜತೆ ಪೊಲೀಸ್ ಠಾಣೆಗೆ ಹೋಗಿದ್ದವರ ಹೆಸರನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರಿಗೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ.

ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಮೇ 22ರಂದು ವಿಚಾರಣೆಗೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಹಾಜರಾಗಿದ್ದರು. ಅದಕ್ಕೂ ಮುನ್ನಾ ಅವರ ಬಂಧನಕ್ಕೆ ಬೆಳ್ತಂಗಡಿ ಪೊಲೀಸರು ಮುಂದಾದ ವೇಳೆ ಬಿಜೆಪಿ ಕಾರ್ಯಕರ್ತರು, ಮುಖಂಡರಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ನಂತರ ಶಾಸಕರನ್ನು ಪೊಲೀಸರು ಬಂಧಿಸದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ಅಲ್ಲಿಂದ ತೆರಳಿದ್ದರು.

ಏನಿದು ಪ್ರಕರಣ?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 29ಕ್ಕೆ ಮುಂದೂಡಿಕೆ

Prajwal Revanna Case
ಭವಾನಿ ರೇವಣ್ಣ

ಬೆಂಗಳೂರು: ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 29ರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಕೆ.ಆರ್.ನಗರ ಸಂತ್ರಸ್ಥ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದರಿಂದ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ನಾಳೆಗೆ ವಿಚಾರಣೆ ಮುಂದೂಡಿದೆ.

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಸೋಮವಾರ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿ ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಧೀಶರು ನೋಟೀಸ್ ನೀಡಿದ್ದರು. ಭವಾನಿ ರೇವಣ್ಣ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ಮತ್ತೊಂದೆಡೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ಇದನ್ನೂ ಓದಿ | Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಈ ಪ್ರಕರಣದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ಅರ್ಹವಾಗಿದೆ. ಅಕ್ಷೇಪಣೆ ಸಲ್ಲಿಸುವವರೆಗೂ ಬಂಧನದಿಂದ ರಕ್ಷಣೆ ನೀಡಬೇಕು. ಇವತ್ತು ಬಂಧನ ಮಾಡಿದರೆ ಏನು ಮಾಡಲು ಆಗುತ್ತೆ. ಹೀಗಾಗಿ ನನ್ನ ಕಕ್ಷಿದಾರರಿಗೆ ಕಾನೂನು ರಕ್ಷಣೆ ಕೊಡಬೇಕು ಎಂದು ಭವಾನಿ ಪರ ವಕೀಲರು ಮನವಿ ಮಾಡಿದ್ದಾರೆ. ಇನ್ನು ಪ್ರಕರಣದಲ್ಲಿ ದಿನೇ ದಿನೇ ಆರೋಪಿಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. ಕೆಎಂಎಫ್ ಮಾಜಿ ಅಧ್ಯಕ್ಷರನ್ನು ಈ ಪ್ರಕರಣದಲ್ಲಿ 7ನೇ ಆರೋಪಿಯನ್ನಾಗಿ‌ ಸೇರಿಸಿದ್ದಾರೆ ಎಂದು ತಿಳಿಸಿದ್ದಾರೆ. ವಾದ-ಪ್ರತಿ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ.

Continue Reading

ಕಲಬುರಗಿ

Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

Fraud Case: ಷೇರು ಮಾರ್ಕೆಟ್‌ನಲ್ಲಿ ಹಣ ಡಬಲ್ ಮಾಡೋದಾಗಿ 30 ಕೋಟಿ ರೂ. ವಂಚಿಸಿ ಪರಾರಿಯಾಗಿದ್ದ ದಂಪತಿ ಮಂಗಳವಾರ ನೇರವಾಗಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. 14 ದಿನ ನ್ಯಾಯಾಂಗ ಬಂಧನಕ್ಕೆ ಪ್ರಿನ್ಸಿಪಲ್ ಜೆಎಂಎಫ್‌ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

VISTARANEWS.COM


on

By

Fraud Case in kalaburagi
Koo

ಕಲಬುರಗಿ : ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿದರೆ, ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿ ಆಗಿದ್ದ ದಂಪತಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಕ್ಯಾಪಿಟಲ್‌ ಗ್ರೋ ಲರ್ನ್ ಟ್ರೇಡಿಂಗ್ ಕಂಪನಿಯ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಇಬ್ಬರು ಕಲಬುರಗಿ JMFC 2 ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಇವರಿಬ್ಬರ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ (Fraud Case) ಆರೋಪ ಕೇಳಿಬಂದಿತ್ತು. ವಂಚನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಕಿಲಾಡಿ ದಂಪತಿ ಪರಾರಿಯಾಗಿದ್ದರು. ಕಳೆದ ಎರಡು ದಿನಗಳ ಹಿಂದೆ ಆರೋಪಿಗಳ ವಿರುದ್ಧ ರೋಜಾ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು. ದಂಪತಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದರು.

14 ದಿನಗಳ ನ್ಯಾಯಾಂಗ ಬಂಧನ

ಕಲಬುರಗಿಯಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿನ್ಸಿಪಲ್ ಜೆಎಂಎಫ್‌ಸಿ ನ್ಯಾಯಾಲಯವು ಇಬ್ಬರಿಗೂ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆನ್ನಲ್ಲೆ ಪೊಲೀಸರು ಆರೋಪಿಗಳಿಗೆ ಮೆಡಿಕಲ್ ಟೆಸ್ಟ್‌ಗೆ ಕರೆದೊಯ್ದಿದ್ದಾರೆ. ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ನಡೆಯಲಿದೆ. ನಂತರ ಕೇಂದ್ರಿಯ ಕಾರಾಗೃಹಕ್ಕೆ ಕರೆ ತರಲಿದ್ದಾರೆ.

Fraud Case in kalaburagi

ಇದನ್ನೂ ಓದಿ: Assault Case : ರೊಚ್ಚಿಗೆದ್ದ ಸ್ಥಳೀಯರು; ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

ಏನಿದು ಪ್ರಕರಣ?

ಕಿಲಾಡಿ ದಂಪತಿ ಕಲಬುರಗಿಯಲ್ಲಿ ಶಿಕ್ಷಕ ಸೇರಿ ಹಲವರಿಂದ ಸುಮಾರು 30 ಕೋಟಿ ರೂ. ಪಡೆದು ವಂಚಿಸಿರುವ ಘಟನೆ ನಡೆದಿತ್ತು. ಕಲಬುರಗಿ ತಾಲೂಕಿನ ಕುರಿಕೋಟಾ ಗ್ರಾಮದ ಶಿಕ್ಷಕ ವೀರೇಶ ಭೀಮಾಶಂಕರ ಭಾಗೋಡಿ (24) ಎಂಬುವವರು ನೀಡಿದ ದೂರಿನ ಮೇರೆಗೆ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಅವರು ನಗರದ ಗಾಂಧಿ ನಗರದ ಬಿ.ಎಲ್.ಕಾಂಪ್ಲೆಕ್ಸ್‌ನಲ್ಲಿ ಒಂದು ಆಫೀಸ್ ಮಾಡಿಕೊಂಡಿದ್ದರು. 1 ಲಕ್ಷ ತುಂಬಿದರೆ ಒಂದು ವರ್ಷದಲ್ಲಿ 2 ಲಕ್ಷ ಕೊಡುತ್ತೇವೆ ಎಂದು ಹೇಳಿದ್ದರು. ಇದನ್ನು ನಂಬಿ ಹಂತ ಹಂತವಾಗಿ ವೀರೇಶ ಭೀಮಾಶಂಕರ ಭಾಗೋಡಿ ಅವರು 5.5 ಲಕ್ಷ ರೂ. ನೀಡಿದ್ದರು. ಇವರಂತೆ ಮಹ್ಮದ್ ಇಬ್ರಾಹಿಂ, ಗುಂಡಪ್ಪ ವಾರದ, ಚಂದ್ರಕಾಂತ ರಾಠೋಡ್, ಸುನಿತಾ, ಶರಣು ಎಂಬುವವರು ಸೇರಿ ಇತರರು ಸುಮಾರು 30 ಕೋಟಿಗೂ ಹೆಚ್ಚು ಹಣವನ್ನು ಉತ್ಕರ್ಷ ವರ್ಧಮಾನೆ ಅವರಿಗೆ ನೀಡಿದ್ದರು.

ಈ ಹಣವನ್ನು ಉತ್ಕರ್ಷ ವರ್ಧಮಾನೆ ಮತ್ತು ಅವರ ಪತ್ನಿ ಸಾವಿತ್ರಿ ವರ್ಧಮಾನೆ ತೆಗೆದುಕೊಂಡು ಪರಾರಿಯಾಗಿದ್ದರು ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದರು. ಈ ಪ್ರಕರಣದಲ್ಲಿ ವರ್ಧಮಾನೆ ದಂಪತಿಗೆ ಪರಾರಿಯಾಗಲು ಸಹಕರಿಸಿದ ಸಂಬಂಧಿಕರಾದ ಸುಧಾ ಠಾಕೂರ್ ಮತ್ತು ವಿಜಯಸಿಂಗ್ ಹಜಾರೆ ಅವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ರೋಜಾ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು. ಇದೀಗ ಆರೋಪಿಗಳು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Elephant Arjuna: ದಸರಾ ಆನೆ ಅರ್ಜುನ ಸಮಾಧಿ ವಿರೂಪ; ಎಚ್.ಡಿ. ಕೋಟೆಯ ನವೀನ್ ವಿರುದ್ಧ ಎಫ್‌ಐಆರ್

Elephant Arjuna’s Memorial: ದಸರಾ ಆನೆ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಮೀಸಲು ಅರಣ್ಯದೊಳಗೆ ನವೀನ್ ಮತ್ತು ಇತರರು ಅತಿಕ್ರಮ ಪ್ರವೇಶ ಮಾಡಿ ಸಮಾಧಿಯ ಮಣ್ಣು ಬಗೆದ ಆರೋಪ ಕೇಳಿಬಂದಿತ್ತು. ಹೀಗಾಗಿ ಅರಣ್ಯ ಇಲಾಖೆ ಎಫ್‌ಐಆರ್‌ ದಾಖಲಿಸಿದೆ.

VISTARANEWS.COM


on

Elephant Arjuna’s Memorial
Koo

ಹಾಸನ: ದಸರಾ ಆನೆ ಅರ್ಜುನ ಸಮಾಧಿ ವಿರೂಪ ಪ್ರಕರಣದಲ್ಲಿ (Elephant Arjuna) ಅತಿಕ್ರಮ ಪ್ರವೇಶ ಹಾಗೂ ಸಮಾಧಿ ಬಗೆದ ಆರೋಪದಲ್ಲಿ ಎಚ್.ಡಿ. ಕೋಟೆಯ ನವೀನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ತಾವು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡು ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದ್ದ ನವೀನ್ ಮತ್ತು ಇತರರು, ಮೀಸಲು ಅರಣ್ಯ ದೊಳಗೆ ಅತಿಕ್ರಮ ಪ್ರವೇಶ ಮಾಡಿ ಸಮಾಧಿಯ ಮಣ್ಣು ಬಗೆದ ಆರೋಪ ಕೇಳಿಬಂದಿತ್ತು. ಹೀಗಾಗಿ ನವೀನ್‌ ವಿರುದ್ಧ ಸಕಲೇಶಪುರ ತಾಲೂಕಿನ ಯಸಳೂರು ವಲಯ ಅರಣ್ಯಾಧಿಕಾರಿ ಎಫ್‌ಐಆರ್ ದಾಖಲಿಸಿದ್ದಾರೆ.

ಸ್ಮಾರಕ ನಿರ್ಮಾಣಕ್ಕೆ ನಟ ದರ್ಶನ್ ಅವರು ಕಲ್ಲು ಕಳಿಸಿದ್ದಾರೆಂದು ಅಭಿಮಾನಿಗಳು ವಿಡಿಯೊ ಮಾಡಿ ಹಂಚಿಕೊಂಡಿದ್ದರು. ಅಲ್ಲದೇ ಸರ್ಕಾರ, ಅರಣ್ಯ ಇಲಾಖೆ ಅನುಮತಿ ಇಲ್ಲದೆ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದ್ದರಿಂದ ಆಕ್ಷೇಪ ವ್ಯಕ್ತವಾಗಿತ್ತು. ಅನಧಿಕೃತವಾಗಿ ಜನರಿಂದ ಹಣ ವಸೂಲಿ ಮಾಡಿ ಸಮಾಧಿ ಬಗೆದು ವಿರೂಪಗೊಳಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದರು. ಜನರ ಪ್ರಶ್ನೆ ಬಳಿಕ ಅರಣ್ಯ ಇಲಾಖೆಯು ಸೋಮವಾರ ಕೇಸ್ ದಾಖಲಿಸಿಕೊಂಡಿದೆ.

ಕರ್ನಾಟಕ ಅರಣ್ಯ ಕಾಯ್ದೆ 1963 ಸೆಕ್ಷೆನ್ 33 ಹಾಗೂ ಕರ್ನಾಟಕ ಅರಣ್ಯ ನಿಯಮ 1969 ರ ನಿಯಮ 25-43 ರಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ | Suspicious Death : ಕೊಪ್ಪಳದಲ್ಲಿ ತಾಯಿ, ಮಗಳು, ಮೊಮ್ಮಗನ ಅನುಮಾನಾಸ್ಪದ ಸಾವು

ಅರ್ಜುನ ಸ್ಮಾರಕಕ್ಕಾಗಿ ಹಣ ಸಂಗ್ರಹಿಸಿ ಪೇಚಿಗೆ ಸಿಲುಕಿದ ಯುವಕರು

ಮೈಸೂರು: ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣ ವಿವಾದದ ನಡುವೆ ಅರ್ಜುನ ಸ್ಮಾರಕಕ್ಕಾಗಿ ಹಣ ಸಂಗ್ರಹಿಸಿದ್ದ ಯುವಕರು ಇದೀಗ ಪೇಚಿಗೆ ಸಿಲುಕಿದ್ದಾರೆ. ವಿವಾದದ ಬಗ್ಗೆ ಎಚ್.ಡಿ.ಕೋಟೆ ತಾಲೂಕಿನ ಎಚ್.ಎನ್.ನವೀನ್, ಸಿದ್ದಪ್ಪಾಜಿ, ಚೇತನ್ ಸುದ್ದಿಗೋಷ್ಠಿ ನಡೆಸಿದ್ದು, ನಾವು ನಟ ದರ್ಶನ್, ಅರ್ಜುನ ಆನೆ ಹೆಸರು ಬಳಸಿಕೊಂಡು ಹಣ ವಸೂಲಿ ಮಾಡಿಲ್ಲ. ನಾವು ಕಳ್ಳರಲ್ಲ, ಅರ್ಜುನನ ಅಭಿಮಾನಿಗಳು ಎಂದು ಹೇಳಿದ್ದಾರೆ.

ಅರ್ಜುನ ಪಡೆ ವಾಟ್ಸ್‌ಆ್ಯಪ್‌ ಗ್ರೂಪ್ ಅಡ್ಮಿನ್ ಎಚ್.ಎನ್.ನವೀನ್ ಮಾತನಾಡಿ, ನಾವು ಅರ್ಜುನ ಆನೆ ಅಭಿಮಾನಿಗಳು. ಮಳೆಗಾಲದ ಆರಂಭದಲ್ಲೇ ಸ್ಮಾರಕ ಆಗಬೇಕು ಎಂಬುದು ನಮ್ಮ ಉದ್ದೇಶ ಆಗಿತ್ತು. ಅದಕ್ಕಾಗಿ ಮೇ 1ರಂದು ‘ಅರ್ಜುನ ಪಡೆ’ ಎಂಬ ವಾಟ್ಸ್‌ಆ್ಯಪ್‌ ಗ್ರೂಪ್ ಕ್ರಿಯೇಟ್ ಮಾಡಿದ್ದೆವು. ಅದರಲ್ಲಿ ಸುಮಾರು 900 ಸದಸ್ಯರು ಇದ್ದಾರೆ. ನಟ ದರ್ಶನ್ ಅವರು ಸ್ಮಾರಕ ನಿರ್ಮಿಸಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ನಾನು ಯಾರ ಬಳಿಯೂ ದುಡ್ಡು ಕೇಳಿಲ್ಲ. ಅರ್ಜುನನ ಮೇಲಿನ ಅಭಿಮಾನಕ್ಕೆ ಅರ್ಜುನ ಪಡೆ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿರುವವರು ನನ್ನ ಅಕೌಂಟ್‌ಗೆ ಹಣ ಹಾಕಿದ್ದಾರೆ. ಸುಮಾರು 50 ಸಾವಿರ ರೂ. ಕಲೆಕ್ಟ್ ಆಗಿದೆ ಎಂದು ತಿಳಿಸಿದ್ದಾರೆ.

ನಟ ದರ್ಶನ್ ಕಡೆಯವರಾದ ಸಂಪತ್ ಕಲ್ಲು ಕೊಡಿಸಿದರು. ತಾತ್ಕಾಲಿಕವಾಗಿ ಸ್ಮಾರಕ ನಿರ್ಮಿಸಲು ಎಸಿಎಫ್ ಮೌಖಿಕವಾಗಿ ಅನುಮತಿ ಕೊಟ್ಟಿದ್ದರು. ಕೆಲಸ ಮಾಡಲು ಹೋದಾಗ ಆರ್‌ಎಫ್‌ಒ ತಡೆದರು. ಡಿಸಿಎಫ್ ಜತೆ ಮಾತನಾಡಿ ಅರಣ್ಯ ಇಲಾಖೆಯೇ ಸ್ಮಾರಕ ನಿರ್ಮಿಸುತ್ತೆ ಅಂತ ಹೇಳಿದರು. ಕಲ್ಲು ವಾಪಸ್ ತೆಗೆದುಕೊಂಡು ಹೋಗಿ ಅಂತ ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ವಿವಾದವಾದ ಬಳಿಕ ಅರಣ್ಯ ಇಲಾಖೆಯವರು ತರಾತುರಿಯಲ್ಲಿ ತಾತ್ಕಾಲಿಕವಾಗಿ ಸ್ಮಾರಕ ನಿರ್ಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ಆರ್‌ಎಫ್‌ಒ 30 ಸಾವಿರ ರೂ. ಕಲ್ಲಿನ ಹಣವನ್ನು ನನ್ನ ಅಕೌಂಟ್‌ಗೆ ಹಣ ಹಾಕಿದ್ದಾರೆ. ನಾವು ನಟ ದರ್ಶನ್, ಅರ್ಜುನ ಆನೆ ಹೆಸರು ಬಳಸಿಕೊಂಡು ಹಣ ವಸೂಲಿ ಮಾಡಿಲ್ಲ. ಮಲೆನಾಡು ರಕ್ಷಣಾ ವೇದಿಕೆಯ ಸಾಗರ್ ಪ್ರಚಾರಕ್ಕಾಗಿ ವಿಡಿಯೋದಲ್ಲಿ ಏನೇನೋ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

ಅನುಮತಿ ಕೊಟ್ಟು ಇದೀಗ ಅರಣ್ಯಾಧಿಕಾರಿಗಳು ಉಲ್ಟಾ ಹೊಡೆದ್ರಾ?

ಮೈಸೂರು: ಅರ್ಜುನ ತಾತ್ಕಾಲಿಕ ಸ್ಮಾರಕ‌ ನಿರ್ಮಾಣ ಮಾಡಲು ಮುಂದಾದ ಯುವಕರ‌ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದರಿಂದ ಮೊದಲು ಅನುಮತಿ ಕೊಟ್ಟು ಇದೀಗ ಅರಣ್ಯಾಧಿಕಾರಿಗಳು ಉಲ್ಟಾ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೊದಲಿಗೆ ಮೌಖಿಕವಾಗಿ ಅರಣ್ಯಧಿಕಾರಿಗಳು ಅನುಮತಿ ಕೊಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ವೀಡಿಯೋ ಸಾಕ್ಷಿ ಇಟ್ಟುಕೊಂಡಿರುವ ಸ್ಮಾರಕ ನಿರ್ಮಾಣ ಮಾಡಲು ಮುಂದಾಗಿದ್ದ‌ ಯುವಕರು, ಫೋನ್ ಮೂಲಕ ಪ್ರೊಬೇಷನರಿ ಅಧಿಕಾರಿ ನೇಹಾ ಮತ್ತು ಎಸಿಎಫ್ ಮಹದೇವ್ ಜತೆ ಮಾತನಾಡಿದ್ದಾರೆ ಎನ್ನ‌ಲಾದ ಆಡಿಯೋ, ವೀಡಿಯೋ ಇದೆ.

ಇದನ್ನೂ ಓದಿ | Assault Case : ರೊಚ್ಚಿಗೆದ್ದ ಸ್ಥಳೀಯರು; ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

ಸಿಮೆಂಟ್ ಬಳಸದೆ ಕಲ್ಲಿನಲ್ಲಿ ಕಟ್ಟಲು ಅನುಮತಿ ಕೊಟ್ಟಿರುವುದಾಗಿ ಆಡಿಯೋ ಸಂಭಾಷಣೆಯಲ್ಲಿದೆ. ಈ ಬಗ್ಗೆ ಇಬ್ಬರು ಅಧಿಕಾರಿಗಳ ಜತೆ ನವೀನ್ ಮಾತನಾಡಿದ್ದರು. ಇದಕ್ಕೂ ಮುನ್ನ ತಾತ್ಕಾಲಿಕ ಸ್ಮಾರಕ ನಿರ್ಮಾಣಕ್ಕೆ ಅನುಮತಿ ಕೋರಿ ಯುವಕರು ಮನವಿ ಪತ್ರ ನೀಡಿದ್ದರು. ಅರ್ಜುನ ಪಡೆ ಕರ್ನಾಟಕ ಹೆಸರಿನಲ್ಲಿ ಮನವಿ ಪತ್ರವನ್ನು ಹಾಸನದ ಯಳಸೂರು ವಲಯ ಅರಣ್ಯಧಿಕಾರಿಗೆ ನೀಡಲಾಗಿತ್ತು.

Continue Reading

ವಿಜಯಪುರ

Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

Love Case : ಪ್ರೀತಿಸಿದವಳು ಬೇಕೆ ಬೇಕೆಂದು ಪ್ರೇಯಸಿಯ ಮನೆಗೆ ಹೋದವನಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದರು ಎಂಬ ಆರೋಪ ಕೇಳಿ ಬಂದಿದೆ. ಸುಟ್ಟ ಗಾಯಗಳಿಂದ ಯುವಕ-ಯುವತಿ ಮನೆಯವರು ಆಸ್ಪತ್ರೆ ಪಾಲಾಗಿದ್ದಾರೆ.

VISTARANEWS.COM


on

By

Love Case
Koo

ವಿಜಯಪುರ: ಪ್ರೀತಿ ವಿಚಾರಕ್ಕೆ (Love Case) ಎರಡು ಕುಟುಂಬಗಳು ಠಾಣೆ ಮೆಟ್ಟಿಲೇರಿವೆ. ಪ್ರೀತಿಸಿದ ಹುಡುಗಿಯೇ ಬೇಕು‌ ಎಂದು ಪ್ರೇಯಸಿಯ ಮನೆಗೆ ಹೋದ ಪ್ರಿಯಕರ ಸುಟ್ಟಗಾಯದಿಂದ ಆಸ್ಪತ್ರೆ ಪಾಲಾಗಿದ್ದಾನೆ. ಯುವತಿಯ ಮನೆಯವರೇ ತಲೆಗೆ ರಾಡ್‌ನಿಂದ ಹೊಡೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಘಟನೆ ನಡೆದಿದೆ.

ರಾಹುಲ್ ರಾಮನಗೌಡ ಬಿರಾದಾರ ಹಾಗೂ ಐಶ್ವರ್ಯ ಇಬ್ಬರು ಮೂರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿ ವಿಚಾರ ತಿಳಿದಾಗ ರಾಹುಲ್‌ ಮನೆಯವರಿಗೆ ಐಶ್ವರ್ಯ ತಂದೆ ಬರಲು ಹೇಳಿದ್ದರು. ಆದರೆ ಹುಡುಗನ ಮನೆಯವರು ಬಂದಾಗ ಅವನ ಗುಣ ಸರಿ ಇಲ್ಲ, ನಾನು ಮದುವೆ ಆಗಲ್ಲ ಎಂದು ಐಶ್ವರ್ಯ ನಿರಾಕರಿಸಿದ್ದಳು.

ಯುವತಿಗೆ ಬ್ಲ್ಯಾಕ್‌ಮೇಲ್‌?

ಹುಡುಗಿ ಮದುವೆಗೆ ನಿರಾಕರಣೆ ಮಾಡಿದ್ದಳು ಎಂದು ರಾಹುಲ್‌ ಕುಟುಂಬದವರು ವಾಪಸ್ ಆಗಿದ್ದರು. ಇತ್ತ ಪ್ರೀತಿಸಿದ ಹುಡುಗಿಯೇ ಬೇಕು ಎಂದು ಹಠ ಹಿಡಿದ ರಾಹುಲ್‌ ಮತ್ತೆ ಹುಡುಗಿ ಮನೆಗೆ ಹೋಗಿದ್ದ. ಮದುವೆ ಆಗದಿದ್ದರೆ ನನ್ನೊಟ್ಟಿಗೆ ಇದ್ದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದನಂತೆ. ಇತ್ತ ಐಶ್ವರ್ಯ ತಂದೆ ಮಗಳು ಒಪ್ಪಿದರೆ ಮದುವೆ ಮಾಡಿ ಕೊಡುವುದಾಗಿ ಹೇಳಿ ರಾಜಿ ಪಂಚಾಯ್ತಿ ಮಾಡಿ ವಾಪಸ್ ಕಳುಹಿಸಿದ್ದಾರೆ.

ಹಲವು ಬಾರಿ ರಾಜಿ ಪಂಚಾಯತಿ ಮಾಡಿದರೂ ಮತ್ತೆ ನಿನ್ನೆ ಸೋಮವಾರ ಹುಡುಗಿ ಮನೆಗೆ ಹೋಗಿ ಫೋಟೋ ಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಐಶ್ವರ್ಯ ಮನೆಗೆ ಹೋಗುವಾಗಲೇ ಪೆಟ್ರೋಲ್ ತೆಗೆದುಕೊಂಡು ಹೋಗಿದ್ದನಂತೆ. ನಮ್ಮ ಕುಟುಂಬದವರನ್ನು ಸುಡಲೆಂದೇ ಪೆಟ್ರೋಲ್ ತಂದಿದ್ದ ಎಂದು ಐಶ್ಚರ್ಯ ತಂದೆ ಆರೋಪಿಸಿದ್ದಾರೆ. ಪೆಟ್ರೋಲ್‌ ಎರಚಿ ಸುಡಲು ಬಂದಾಗ ನಮ್ಮ ತಮ್ಮ ಹಾಗೂ ತಮ್ಮನ ಹೆಂಡತಿ, ಮನೆ ಕೆಲಸದವನ ಮಗ ಬಿಡಿಸಲು ಬಂದವನಿಗೂ ಬೆಂಕಿ ತಗುಲಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Physical Abuse: 7ನೇ ಕ್ಲಾಸ್‌ ಹುಡುಗಿ 3 ತಿಂಗಳ ಗರ್ಭಿಣಿ! ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅರೆಸ್ಟ್‌

ಇತ್ತ ರಾಹುಲ್‌ ತಂದೆಯ ಆರೋಪವೇ ಬೇರೆಯಾಗಿದೆ. ನಮ್ಮ ಮಗನನ್ನು ಮನೆಗೆ ಕರೆದು ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮ ಮಗನಿಗೆ ಮೊದಲು ಮೊಬೈಲ್ ಕೊಡು ಎಂದು ಕೇಳಿದ್ದಾರೆ. ಮೊಬೈಲ್ ಕೊಡದೇ ಇದ್ದಾಗ ರಾಡ್‌ನಿಂದ ತಲೆಗೆ ಹೊಡೆದು ಪೆಟ್ರೋಲ್ ಸುರಿದಿದ್ದಾರೆ ಎಂದಿದ್ದಾರೆ.

ಸದ್ಯ ಸುಟ್ಟು ಗಾಯದಿಂದ ಬಳಲುತ್ತಿರುವ ರಾಹುಲ್‌ಗೆ ವಿಜಯಪುರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಹುಲ್‌ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಶೇ 70ರಷ್ಟು ದೇಹ ಸುಟ್ಟು ಹೋಗಿದೆ ಎಂದು ಹೇಳಿದ್ದಾರೆ. ಹುಡುಗಿ ತಂದೆ ಹಾಗೂ ಅವರ ಕುಟುಂಬದವರೇ ನಮ್ಮ ಅಣ್ಣನಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ರಾಹುಲ್‌ ಸಹೋದರ ಐಶ್ವರ್ಯ ಕುಟುಂಬದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಎರಡು ಕುಟುಂಬದವರು ಪರಸ್ಪರ ದೂರು ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್‌ ಠಾಣೆಯಲ್ಲಿ ಎರಡು ಕುಟುಂಬದ ಮೇಲೆ ಎಫ್‌ಐಆರ್ ದಾಖಲಾಗಿದೆ. ಇಬ್ಬರಲ್ಲಿ ತಪ್ಪು ಯಾರದು ಎಂಬುದು ಪೊಲೀಸ್ ತನಿಖೆನಿಂದ ತಿಳಿಯಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Lok Sabha Election
ಪ್ರಮುಖ ಸುದ್ದಿ13 mins ago

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

Harish Poonja
ಕರ್ನಾಟಕ17 mins ago

Harish Poonja: ಪೊಲೀಸರಿಗೆ ಧಮ್ಕಿ ಪ್ರಕರಣ; ಶಾಸಕ ಹರೀಶ್‌ ಪೂಂಜಾ, 40 ಮಂದಿ ವಿರುದ್ಧ ಚಾರ್ಜ್‌ಶೀಟ್‌

Kannada New Movie
ಸ್ಯಾಂಡಲ್ ವುಡ್22 mins ago

Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

Fraud Case in kalaburagi
ಕಲಬುರಗಿ32 mins ago

Fraud Case: ಹಣ ಡಬ್ಲಿಂಗ್‌ ಕೇಸ್‌; ಬಹುಕೋಟಿ ವಂಚನೆ ಮಾಡಿದ್ದ ಆರೋಪಿಗಳು ನ್ಯಾಯಾಲಯಕ್ಕೆ ಶರಣು

Money Guide
ಮನಿ-ಗೈಡ್43 mins ago

Money Guide: ಬ್ಯಾಂಕ್‌ ಖಾತೆ, ಮ್ಯೂಚುವಲ್‌ ಫಂಡ್‌ ಹೊಂದಿದ್ದೀರಾ? ಹಾಗಾದರೆ ಮೊದಲು ಈ ಕೆಲಸ ಮಾಡಿ

Job Alert
ಉದ್ಯೋಗ49 mins ago

Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿದೆ 1,202 ಹುದ್ದೆ: ಐಟಿಐ ಪಾಸಾದವರೂ ಅಪ್ಲೈ ಮಾಡಿ

Lok Sabha Election
Lok Sabha Election 202449 mins ago

Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

Anant Ambani Radhika Merchant Pre Wedding
ಫ್ಯಾಷನ್56 mins ago

Anant Ambani Radhika Merchant Pre Wedding: ಹೀಗಿದೆ ಅಂಬಾನಿ ಫ್ಯಾಮಿಲಿಯ ಲಕ್ಷುರಿ ಕ್ರ್ಯೂಸ್‌ ಪ್ರಿ-ವೆಡ್ಡಿಂಗ್‌ ಸೆಲೆಬ್ರೇಷನ್‌ನ ಡ್ರೆಸ್‌ ಕೋಡ್ಸ್!

Elephant Arjuna’s Memorial
ಕರ್ನಾಟಕ1 hour ago

Elephant Arjuna: ದಸರಾ ಆನೆ ಅರ್ಜುನ ಸಮಾಧಿ ವಿರೂಪ; ಎಚ್.ಡಿ. ಕೋಟೆಯ ನವೀನ್ ವಿರುದ್ಧ ಎಫ್‌ಐಆರ್

WhatsApp Update
ತಂತ್ರಜ್ಞಾನ1 hour ago

WhatsApp Update : ವಾಯ್ಸ್ ನೋಟ್ ಅವಧಿ ಹೆಚ್ಚಿಸಲಿದೆ ವಾಟ್ಸ್ಆ್ಯಪ್; ವಿಸ್ತರಣೆ ಅವಧಿ ಎಷ್ಟು ಗೊತ್ತೇ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

tumkur murder
ತುಮಕೂರು8 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಟ್ರೆಂಡಿಂಗ್‌