Site icon Vistara News

Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

Prajwal Revanna Case

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿ, 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.

ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಜರಾಗಿದ್ದರು. ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್‌ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಉತ್ತರಿಸಿ, 2 ವಾರಗಳ ಕಾಲ ವಿಚಾರಣೆ ಮುಂದೂಡಿದರು.

ಇದನ್ನೂ ಓದಿ | Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಪುರುಷತ್ವ ಪರೀಕ್ಷೆಯ (virilism test) ವರದಿಯು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಕೈ ಸೇರಿದ್ದು, ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಸಾಧಿಸಲು ಅವರು ಸಮರ್ಥರಿದ್ದಾರೆ ಎಂಬ ಅಂಶ ದೃಢಪಟ್ಟಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ಅವರ ಪುರುಷತ್ವ ಪರೀಕ್ಷಾ ವರದಿ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿದ್ದು, ಅದು ಸಹ ಪ್ರಜ್ವಲ್‌ ವಿರುದ್ಧದ ಸಾಕ್ಷ್ಯವಾಗಲಿದೆ. ಕೆಲವು ದಿನಗಳ ಹಿಂದೆ ಬೌರಿಂಗ್‌ ಆಸ್ಪತ್ರೆಯಲ್ಲಿ ಅವರನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಪದೇ ಪದೆ ಪುರುಷತ್ವ ಪರೀಕ್ಷೆಗೆ ಒಳಪಡಿಸುತ್ತಿರುವುದರಿಂದ ಮುಜುಗರವಾಗುತ್ತಿದೆ ಎಂದು ಈ ಹಿಂದೆ ನ್ಯಾಯಾಲಯದ ಮುಂದೆ ಪ್ರಜ್ವಲ್‌ ಅಳಲು ತೋಡಿಕೊಂಡಿದ್ದರು. ಧ್ವನಿ ಪರೀಕ್ಷೆ ಹಾಗೂ ಇನ್ನಿತರ ಪರೀಕ್ಷೆಗಳ ವರದಿ ಎಫ್‌ಎಸ್‌ಎಲ್‌ನಿಂದ ಬರಬೇಕಿದೆ. ಈ ವರದಿಗಳು ಪೂರಕವಾಗಿದ್ದರೆ ಅವುಗಳು ಕೂಡ ಪ್ರಜ್ವಲ್‌ ವಿರುದ್ಧದ ಪ್ರಬಲ ಸಾಕ್ಷ್ಯಗಳಾಗಲಿವೆ.

ಪ್ರಜ್ವಲ್‌ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ದೂರುದಾರ ಮಹಿಳೆಯರ ಕುರಿತು ತನಿಖಾಧಿಕಾರಿಗಳು ಪ್ರಶ್ನಿಸಿದಾಗ ʼನನಗೇನೂ ಗೊತ್ತಿಲ್ಲ’ ಎಂದು ತಿಳಿಸಿದ್ದರು. ಇತ್ತೀಚೆಗೆ ಪ್ರಜ್ವಲ್‌ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ಬಗ್ಗೆ ವಿಚಾರಿಸಿದಾಗ, ʼನನಗೆ ಅವರು ಯಾರೆಂಬುದೇ ಗೊತ್ತಿಲ್ಲ’ ಎಂದು ಪ್ರಜ್ವಲ್‌ ಹೇಳಿದ್ದಾರೆನ್ನಲಾಗಿದೆ.

ಈ ನಡುವೆ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಜ್ವಲ್‌ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹಾಗಾಗಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ದಾಖಲಿಸಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಲಾಗಿದೆ. ಈ ಅರ್ಜಿಗಳ ವಿಚಾರಣೆ ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಿಗದಿಯಾಗಿದೆ.

ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌

ಪ್ರಜ್ವಲ್ ರೇವಣ್ಣ , (Prajwal Revanna case) ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ (HIV Test) ಮಾಡಿಸಿಕೊಳ್ಳುತ್ತಿದ್ದರು ಎಂಬ ಸಂಗತಿ ಇದೀಗ ಬಯಲಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಸದ್ಯಕ್ಕೆ ಪ್ರಜ್ವಲ್ ಮೇಲೆ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಅದರಲ್ಲಿ ಈ ಎಚ್‌ಐವಿ ಟೆಸ್ಟ್ ವಿಚಾರವೂ ಒಂದು. ಸಾಕಷ್ಟು ಮಹಿಳೆಯರಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ದೂರು ಪ್ರಜ್ವಲ್ ಮೇಲಿದೆ. ಇದರಿಂದ ಎಚ್‌ಐವಿ ಬರಬಹುದು ಎಂಬ ಆತಂಕದಿಂದಲೇ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ಹಲವು ಮಹಿಳೆಯರ ಜೊತೆ ಪ್ರಜ್ವಲ್ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಎಂಬ ಆರೋಪಕ್ಕೆ ಈ ಸಂಗತಿ ಪುಷ್ಟಿ ನೀಡಿದ್ದು, ಇದನ್ನು ಪ್ರಜ್ವಲ್‌ಗೆ ವಿರೋಧ ಸಾಕ್ಷ್ಯವಾಗಿ ಬಳಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಇದು ಪ್ರಜ್ವಲ್ ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿದ್ದಕ್ಕೆ ದಾಖಲೆಗಳಲ್ಲಿ ಒಂದಾಗಲಿದೆ.

Exit mobile version