Site icon Vistara News

Prajwal Revanna Case: ಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿಕೆ ದಾಖಲು

Prajwal Revanna Case

ಹಾಸನ: ಹಾಸನ ಪೆನ್‌ ಡ್ರೈವ್‌ ಕೇಸ್‌ (Prajwal Revanna Case) ಸಂಬಂಧಿಸಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಚ್‌.ಡಿ. ರೇವಣ್ಣ ವಿರುದ್ಧ ತಲಾ ಎರಡು ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆ ಸಮ್ಮುಖದಲ್ಲಿ ಶುಕ್ರವಾರ ಹೊಳೆನರಸೀಪುರದ ರೇವಣ್ಣ ಅವರ ನಿವಾಸದಲ್ಲಿ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು.

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮತ್ತು ಎಚ್‌.ಡಿ. ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದಲ್ಲಿ 2 ಕೇಸ್‌ ದಾಖಲಾಗಿವೆ. ಪ್ರಕರಣದಲ್ಲಿ ಈಗಾಗಲೇ ಸಿಆರ್‌ಪಿಸಿ ಸೆಕ್ಷೆನ್ 164 ಅಡಿ ನ್ಯಾಯಾಧೀಶರ ಮುಂದೆ ಸಂತ್ರಸ್ತ ಮಹಿಳೆಯರು ಹೇಳಿಕೆ ನೀಡಿದ್ದಾರೆ. ಹೀಗಾಗಿ ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ಮಹಜರು ನಡೆಸಲಾಗಿದೆ.

ಸಂತ್ರಸ್ತೆಯೊಂದಿಗೆ ಡಿವೈಎಸ್ಪಿ, ಇಬ್ಬರು ಇನ್‌ಸ್ಪೆಪೆಕ್ಟರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಆಗಮಿಸಿ, ಎಸ್‌ಐಟಿ ತಂಡಕ್ಕೆ ಸಾಥ್ ನೀಡಿದರು. ಸ್ಥಳ ಮಹಜರು ಬಳಿಕ ಸಂತ್ರಸ್ತೆಯ ಹೇಳಿಕೆಯನ್ನು ಎಸ್‌ಐಟಿ ಅಧಿಕಾರಿಗಳು ದಾಖಲಿಸಿಕೊಂಡಿದ್ದು, ಎಲ್ಲವನ್ನೂ ವಿಡಿಯೊ ಮಾಡಿಕೊಂಡಿದ್ದಾರೆ. ಮನೆಯ ಬಾಗಿಲು ಬಳಿಯಿಂದ ಮೂಲೆ‌ ಮೂಲೆಯಲ್ಲೂ ಪರಿಶೀಲನೆ ನಡೆಸಲಾಗಿದ್ದು, ಯಾವ ಸ್ಥಳ ಏನಾಗಿತ್ತು ಎಂಬ ಬಗ್ಗೆ ಸಂತ್ರಸ್ತೆಯಿಂದ ಮಾಹಿತಿ ಪಡೆಯಲಾಗಿದೆ.

ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ ಈ ಮೂರು ಕಡೆ ದೌರ್ಜನ್ಯ ನಡೆಸಿದ್ದರು ಎಂದು ಸಂತ್ರಸ್ತೆ ಆರೋಪ ಮಾಡಿದ್ದರು. ಸತತ 3:46 ಗಂಟೆ ಕಾಲ ಅಧಿಕಾರಿಗಳು ಮಹಜರು ನಡೆಸಿ, ಅಗತ್ಯ ಮಾಹಿತಿ, ಸಾಕ್ಷ್ಯಗಳನ್ನು ಕಲೆಹಾಕಿದರು.

ಇದನ್ನೂ ಓದಿ | Prajwal Revanna Case: ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದ ನಿಖಿಲ್‌ ಕುಮಾರಸ್ವಾಮಿ!

ಮೊಮ್ಮಗನ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

HD Deve gowda prajwal revanna case

ಬೆಂಗಳೂರು: ಮೊಮ್ಮಗ, ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಪೆನ್ ಡ್ರೈವ್ ಪ್ರಕರಣ (Pen drive Case) ಉಂಟುಮಾಡಿರುವ ಚಿಂತೆ ಹಾಗೂ ಒತ್ತಡದ ದೆಸೆಯಿಂದ ಮಾಜಿ ಪ್ರಧಾನಿ ದೇವೇಗೌಡರ (hd Deve gowda) ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ದೇವೇಗೌಡ ಕುಟುಂಬದ ಸದಸ್ಯರು ಅಲರ್ಟ್‌ ಆಗಿದ್ದು, ತೀವ್ರ ನಿಗಾ ಇರಿಸಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಹಿರಿಮಗ ಹಾಗೂ ಮೊಮ್ಮಗನ ಹಗರಣಗಳಿಂದಾಗಿ ತೀವ್ರವಾಗಿ ನೊಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಈ ಪ್ರಕರಣದಲ್ಲಿ ಕೈ ತೊಳೆದುಕೊಂಡು ಬೆನ್ನು ಹತ್ತಿರುವುದು ಇನ್ನಷ್ಟು ಚಿಂತೆ ಮೂಡಿಸಿದೆ. ಇದರಿಂದಾಗಿ, ಇತ್ತೀಚೆಗೆ ತಾನೇ ಆಗಿರುವ ಬಿಜೆಪಿ- ಜೆಡಿಎಸ್‌ ಮೈತ್ರಿಯ ಮೇಲೂ ದುಷ್ಪರಿಣಾಮ ಆಗುವ ಸಾಧ್ಯತೆಯೂ ಅವರನ್ನು ಬಾಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಪತ್ನಿ ಚೆನ್ನಮ್ಮ ಆರೋಗ್ಯದ ಬಗ್ಗೆಯೂ ಕುಟುಂಬದ ಸದಸ್ಯರು ತೀವ್ರ ನಿಗಾ ವಹಿಸುತ್ತಿದ್ದಾರೆ. ಹೆಣ್ಣು ಮಕ್ಕಳು ಸಂಪೂರ್ಣ ಮೇಲ್ವಿಚಾರಣೆ ಹೊತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಎರಡೂ ಟೈಮ್ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. “ಟಿವಿ ನೋಡಬೇಡಿ.. ಸಂಪೂರ್ಣ ರೆಸ್ಟ್ ಮಾಡಿ” ಎಂದು ದೇವೇಗೌಡರಿಗೆ ವೈದ್ಯರು ಕೂಡ ಸಲಹೆ ನೀಡಿದ್ದಾರೆ.

ನಿನ್ನೆ ದೇವೇಗೌಡರ ಅಳಿಯ, ಹೃದಯ ತಜ್ಞ ಡಾ. ಸಿ.ಎನ್‌ ಮಂಜುನಾಥ್ ಗೌಡರ ಮನೆಗೆ ಭೇಟಿ ನೀಡಿ ನಿಯಮಿತ ತಪಾಸಣೆ ನಡೆಸಿದ್ದಾರೆ. ಇತರ ನುರಿತ ವೈದ್ಯರಿಂದಲೂ ತಪಾಸಣೆ ನಡೆದಿದೆ. ಪುತ್ರಿಯರು ದೇವೇಗೌಡರ ಮನೆಯಲ್ಲಿಯೇ ಉಳಿದುಕೊಂಡಿದ್ದು, ದೇವೇಗೌಡರ ಕೋಣೆಯಲ್ಲಿ ಒಬ್ಬ ವ್ಯಕ್ತಿಯನ್ನು ಸದಾ ನೋಡಿಕೊಳ್ಳಲು ಇರಿಸಿದ್ದಾರೆ.

ರೇವಣ್ಣ ಕೂಡ ಕಣ್ಮರೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ (Pen Drive Case) ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರನೇ ನೋಟೀಸ್ ಹಾಗೂ ಕೊನೆಗೆ ಲುಕೌಟ್ ನೋಟೀಸ್ (Lookout notice) ಜಾರಿಯಿಂದಾಗಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೇವಣ್ಣ ಅವru ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ (Pen drive case) ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ರೆಡ್ ಕಾರ್ನರ್ ನೊಟೀಸ್ (Red Corner Notice) ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ಮಾಡಿದೆ.

ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

ಹೀಗಾಗಿ ಅವರು ಬಂಧನದ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ಎಸ್ಕೇಪ್ ಆಗಿರಬಹುದು ಎಂದು ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸದ್ಯ ರೇವಣ್ಣ ಅವರಿಗೆ ಬಂಧನದ ಭಯ ಕಾಡುತ್ತಿದೆ. ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ತೀರ್ಪು ನೋಡಿಕೊಂಡು ನಿರ್ಧಾರ ಮಾಡಲಿದ್ದಾರೆ. ಜಾಮೀನು ಸಿಕ್ಕರೆ ಎಸ್ಐಟಿ ಮುಂದೆ ಬರುವುದು, ಇಲ್ಲವೇ ಮೇಲಿನ ಕೋರ್ಟ್ ಮೊರೆ ಹೋಗೋಣ ಎಂದು ರೇವಣ್ಣ ಪರ ವಕೀಲರು ಹೇಳಿದ್ದಾರೆ.

Exit mobile version