ಬೆಂಗಳೂರು: ಪ್ರಧಾನ ಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆಯ (ಪಿಎಂಕೆಕೆಕೆವೈ) ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ (ಡಿಎಂಎಫ್)ನಲ್ಲಿ ಆಗಸ್ಟ್ 22ರವರೆಗೆ 1209 ಕೋಟಿ ರೂಪಾಯಿ ಹಣ ಸಂಗ್ರಹಣೆಯಾಗಿದ್ದು, ಇದರಲ್ಲಿ ʼಸಾಮರ್ಥ್ಯʼ ಉದ್ಯೋಗ ಆಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ 13.9 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಪಿಎಂಕೆಕೆಕೆವೈ ಯೋಜನೆಯಿಂದಾಗಿ ಗುಜರಾತ್‌ನ ಗಣಿಗಾರಿಕೆ ಪೀಡಿತ ಪ್ರದೇಶಗಳ ಯುವಕರಿಗೆ ವಸತಿ ಸಹಿತ ಮತ್ತು ವಸತಿ ರಹಿತ ಉದ್ಯೋಗ ತರಬೇತಿ ನೀಡುವ ಮೂಲಕ ಅವರ ಜೀವನ ಮಟ್ಟ ಸುಧಾರಣೆಗೆ ಸಹಾಯವಾಗುತ್ತಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದರು.
ಇದಕ್ಕೆ ಉದ್ಯಮಿ ಮೋಹನ್ ದಾಸ್ ಪೈ ಪ್ರತಿಕ್ರಿಯಿಸಿ, ಪ್ರಲ್ಹಾದ್ ಜೋಶಿ ಅವರೇ, ಈ ಯೊಜನೆಯಡಿ ಎಷ್ಟು ಹಣ ಸಂಗ್ರಹಿಸಲಾಗಿದೆ ಮತ್ತು ಅಭಿವೃದ್ಧಿಗಾಗಿ ಎಷ್ಟು ಹಣ ಖರ್ಚು ಮಾಡಲಾಗಿದೆ. ಯಾವ ಜಿಲ್ಲೆಗಳಲ್ಲಿ ಯೋಜನೆಯಡಿ ಉತ್ತಮ ಕೆಲಸವಾಗಿದೆ ಎಂಬ ಮಾಹಿತಿ ನೀಡಿ ಎಂದು ಕೇಳಿದ್ದರು. ಈ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಸಚಿವರು ಉತ್ತರ ನೀಡಿದ್ದಾರೆ.
ಇದನ್ನೂ ಓದಿ | PFI BANNED | ಪಿಎಫ್‌ಐ ರಾಜ್ಯ ಪ್ರಧಾನ ಕಚೇರಿಗೆ ಬಿಗಿ ಭದ್ರತೆ, ಧಾರ್ಮಿಕ ಮುಖಂಡರ ಜತೆ ಚರ್ಚೆ, ರಾಜ್ಯಾದ್ಯಂತ ಕಟ್ಟೆಚ್ಚರ