Site icon Vistara News

Pralhad Joshi: ಜಿಎಸ್‌ಟಿ ಬಾಕಿ ಬಗ್ಗೆ ಸಿದ್ದರಾಮಯ್ಯ ಸುಳ್ಳು ಪ್ರಚಾರ: ಪ್ರಲ್ಹಾದ್‌ ಜೋಶಿ ಕಿಡಿ

Union Minister Pralhad Joshi latest statement in Bengaluru

ಹುಬ್ಬಳ್ಳಿ: ಕರ್ನಾಟಕಕ್ಕೆ ಯಾವುದೇ ಜಿಎಸ್‌ಟಿ ತೆರಿಗೆ ಹಂಚಿಕೆ ಬಾಕಿ ಉಳಿದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ರಾಜಕೀಯಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಬರ ಪರಿಹಾರ ಹಾಗೂ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಜಿಎಸ್‌ಟಿ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವು ಆಗಿಲ್ಲ, ಬಾಕಿಯೂ ಉಳಿದಿಲ್ಲ. ಈ ಹಿಂದೆ ಸಿಎಂ ಸಿದ್ದರಾಮಯ್ಯ ಟೀಂ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಲ್ಲಾ ದಾಖಲೆಗಳ ಸಮೇತ ಉತ್ತರ ಕೊಟ್ಟಿದ್ದಾರೆ ಎಂದು ಜೋಶಿ ಸ್ಪಷ್ಟಪಡಿಸಿದರು.

ಕೇಂದ್ರದಿಂದ ಜಿಎಸ್‌ಟಿ ಹಣ ಬಾಕಿ ಉಳಿಸಿಕೊಂಡಿಲ್ಲ. ಎಸ್‌ಡಿಆರ್‌ಎಫ್ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದೇವೆ. ಹಾಗಿದ್ದರೂ ಸಿಎಂ ಪಡೆ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಲ್ಲದೆ, ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದು ಲೋಕಸಭೆ ಚುನಾವಣೆ ವೇಳೆ ಒಂದು ರಾಜಕೀಯ ನಡೆಯಾಗಿದೆ ಎಂದು ದೂರಿದರು.

ಇದನ್ನೂ ಓದಿ | Lok Sabha Election 2024: ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರಲಿದ್ದಾರೆ ಸೆಲೆಬ್ರಿಟಿಗಳು; ಕಿಚ್ಚ ಸುದೀಪ್‌ ಎಂಟ್ರಿ?

ಕೇಂದ್ರ ಹಣಕಾಸು ಸಚಿವರಿಗೆ ಚರ್ಚೆಗೆ ಬರಲು ಸಿಎಂ ಸವಾಲು ಹಾಕಿದ್ದಾರೆ. ಆದರೆ, ಭಾರತ ಸರ್ಕಾರದ ಮಂತ್ರಿಯಾಗಿ ಹೇಳುತ್ತಿದ್ದೇನೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬರ ಪರಿಹಾರ, ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ ಎಂದು ಜೋಶಿ ಸ್ಪಷ್ಟ ಪಡಿಸಿದರು.

ಹಣಕಾಸು ಆಯೋಗದ ಯಾವುದೇ ಶಿಫರಸು ಇಲ್ಲ

ಕರ್ನಾಟಕಕ್ಕೆ ವಿಶೇಷ ಅನುದಾನಕ್ಕಾಗಿ ಹಣಕಾಸು ಆಯೋಗದಿಂದ ಯಾವುದೇ ಶಿಫಾರಸು ಇಲ್ಲ. ಕೇಂದ್ರ ಸರ್ಕಾರದಿಂದ ಹಣಕಾಸು ಆಯೋಗದ ಶಿಫಾರಸು ಉಲ್ಲಂಘನೆಯೂ ಆಗಿಲ್ಲ. ಹಣಕಾಸು ಆಯೋಗ ಪ್ರತಿ 5 ವರ್ಷಕ್ಕೊಮ್ಮೆ ಬದಲಾವಣೆ ಕಾಣುತ್ತದೆ. ಈಗ ಅದರ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಹಣಕಾಸು ಆಯೋಗದ ಮುಂದೆ ಸಮರ್ಥ ವಾದ ಮಂಡಿಸಲಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ | Lok Sabha Election 2024: ರೆಸಾರ್ಟ್‌ನಲ್ಲಿ ಮೂರು ರಾತ್ರಿ, ಎರಡು ಹಗಲು ಸಿಎಂ ಸಿದ್ದರಾಮಯ್ಯ ಮಾಡಿದ್ದೇನು?

ರಾಜ್ಯ ಸರ್ಕಾರ ವಿಫಲ

ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಬಹುತೇಕ ಕಡೆಗೆ ಕುಡಿಯುವ ನೀರಿಗೆ ತತ್ವಾರ ಇದೆ. ಇದನ್ನೆಲ್ಲ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ, ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗಿದ್ದು, ಈ ನಡೆ ತೀವ್ರ ಖಂಡನೀಯ, ಇದು ದ್ವೇಷದ ರಾಜಕಾರಣ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹರಿಹಾಯ್ದರು.

Exit mobile version