ಮಂಡ್ಯ: ಇಲ್ಲಿನ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ(KRS Dam) ಸಂಪೂರ್ಣ ಭರ್ತಿಯಾಗಿದ್ದು, ಭಾನುವಾರ ರಾಜವಂಶಸ್ಥೆ ಪ್ರಮೋದಾದೇವಿ ಭೇಟಿ ನೀಡಿ ಜಲವೈಭವವನ್ನು ಕಣ್ತುಂಬಿಕೊಂಡರು.
ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಮೊದಲ ಬಾರಿಗೆ ಕೆಆರ್‌ಎಸ್ ಅಣೆಕಟ್ಟೆಯಿಂದ ಭಾನುವಾರ ಮಧ್ಯಾಹ್ನ 12 ಗಂಟೆಯಿಂದ ಕಾವೇರಿ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಒಳಹರಿವು 85,247 ಕ್ಯೂಸೆಕ್ ಹಾಗೂ ಹೊರ ಹರಿವು 1,01,211 ಕ್ಯೂಸೆಕ್ ಹೊರಬಿಡಲಾಗುತ್ತಿದೆ. ಪ್ರವಾಹ ಅಂತರ 1.5 ಟಿಎಂಸಿ ಇದೆ.
ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಹೋಗುತ್ತಿರುವಾಗ ಎದುರಿನ ಕಲ್ಲು ಬಂಡೆಗಳಿಗೆ ಡಿಕ್ಕಿಯಾಗಿ ಚಿಮ್ಮುವುದನ್ನು ನೋಡುವುದು ವಿಶೇಷ ಅನುಭವ ನೀಡುತ್ತದೆ.
ಈ ನಿಟ್ಟಿನಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಭೇಟಿ ನೀಡಿ ದೃಶ್ಯವನ್ನು ಕಣ್ತುಂಬಿಕೊಂಡರು. ಬಳಿಕ ಪ್ರತಿಕ್ರಿಯಿಸಿದ ಪ್ರಮೋದಾದೇವಿ, ಹಾಲ್ನೊರೆಯಂತೆ ಭೋರ್ಗರೆಯುತ್ತಿರುವ ಕಾವೇರಿ ನೋಡಲು ಬಂದಿದ್ದೇನೆ. ಇಲ್ಲಿಂದ ವಾಪಸ್ ಹೋಗಲು ಮನಸ್ಸೇ ಬರುತ್ತಿಲ್ಲ. ಡ್ಯಾಂಗೆ ಆಗಾಗ ಬಂದು ಹೋಗುತ್ತಿರುತ್ತೇನೆ. ಬಹಳ ಸಂತೋಷವಾಗುತ್ತೆ. ಅತಿವೃಷ್ಠಿಯಿಂದ ಯಾರಿಗೂ ತೊಂದರೆ ಆಗದಂತೆ ಪ್ರಾರ್ಥಿಸುತ್ತೇನೆ ಎಂದರು.
ಇದನ್ನೂ ಓದಿ | ಕೆಆರ್‌ಎಸ್ ಡ್ಯಾಂ | ಬದಲಾಯಿಸುವ 80 ವರ್ಷದ ಹಳೇ ಗೇಟ್‌ಗಳು ಮ್ಯೂಸಿಯಂಗೆ: ಸಚಿವ ಗೋವಿಂದ ಕಾರಜೋಳ