Pratap Simha seeks Deve Gowda blessings Netizens say election calculations New Parliament Building Loksabha 2024: ಎಚ್‌.ಡಿ. ದೇವೇಗೌಡರ ಆಶೀರ್ವಾದ ಪಡೆದ ಪ್ರತಾಪ್‌ ಸಿಂಹ; ಲೋಕಸಭೆ ಚುನಾವಣಾ ಲೆಕ್ಕಾಚಾರವೆಂದ ನೆಟ್ಟಿಗರು! - Vistara News

ಕರ್ನಾಟಕ

Loksabha 2024: ಎಚ್‌.ಡಿ. ದೇವೇಗೌಡರ ಆಶೀರ್ವಾದ ಪಡೆದ ಪ್ರತಾಪ್‌ ಸಿಂಹ; ಲೋಕಸಭೆ ಚುನಾವಣಾ ಲೆಕ್ಕಾಚಾರವೆಂದ ನೆಟ್ಟಿಗರು!

New Parliament Building: ನೂತನ ಸಂಸತ್‌ ಭವನದ ಲೋಕಾರ್ಪಣೆ ಸಮಾರಂಭಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿ, ಎಚ್.ಡಿ. ದೇವೇಗೌಡ ಅವರ ಆಶೀರ್ವಾದವನ್ನು ಸಂಸದ ಪ್ರತಾಪ್‌ ಸಿಂಹ ಪಡೆದುಕೊಂಡರು.

VISTARANEWS.COM


on

Pratap Simha and Deve Gowda in new Parliament house
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೂತನ ಸಂಸತ್‌ ಭವನವು (New Parliament Building) ಭಾನುವಾರ ಲೋಕಾರ್ಪಣೆಗೊಂಡಿದೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಗಣ್ಯರು ಸಾಕ್ಷಿಯಾಗಿದ್ದರು. ಈ ಸಮಾರಂಭದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರೂ ಪಾಲ್ಗೊಂಡಿದ್ದರು. ಈ ವೇಳೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್‌ ಸಿಂಹ ಅವರು ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರು. ಇದಕ್ಕೆ ನೆಟ್ಟಿಗರು ಸಹ ಖುಷಿಯಿಂದಲೇ ಅವರ ಕಾಲೆಳೆಯುವ ಪ್ರಯತ್ನವನ್ನೂ ಮಾಡಿದ್ದಾರೆ. ಮುಂದಿನ ಲೋಕಸಭಾ ಚುಣಾವಣೆಯ (Loksabha 2024) ಲೆಕ್ಕಾಚಾರ ಎಂದು ಹೇಳಿದ್ದಾರೆ!

ನೂತನ ಸಂಸತ್‌ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹಲವು ವಿರೋಧ ಪಕ್ಷಗಳು ಬಹಿರಂಗವಾಗಿಯೇ ಅಸಮಾಧಾನವನ್ನು ವ್ಯಕ್ತಪಡಿಸಿದ್ದಲ್ಲದೆ, ಸಮಾರಂಭವನ್ನು ಬಹಿಷ್ಕಾರ ಮಾಡಿದ್ದರು. ಆದರೆ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರು ಮಾತ್ರ ಇದಕ್ಕೆ ಪ್ರತಿರೋಧ ತೋರದೆ, ಹೊಸ ಸಂಸತ್‌ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ನವ ದೆಹಲಿಗೆ ಆಗಮಿಸಿದ್ದರು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಸಹ ಎಚ್.ಡಿ. ದೇವೇಗೌಡ ಮೇಲೆ ವಿಶೇಷವಾದ ಗೌರವವನ್ನು ಇಟ್ಟುಕೊಂಡಿದ್ದೂ ಸಹ ಇದಕ್ಕೊಂದು ಕಾರಣ ಎಂದೂ ಹೇಳಲಾಗುತ್ತಿದೆ.

ಇದನ್ನೂ ಓದಿ: EPFO Nomination update : ಇಪಿಎಫ್‌ಒ ನಾಮಿನೇಶನ್‌ ಬಾಕಿ ಇದೆಯೇ? ಹೀಗೆ ಮಾಡಿ…

ಈ ವೇಳೆ ಸಮಾರಂಭವನ್ನು ವೀಕ್ಷಿಸುತ್ತಿದ್ದ ಎಚ್.ಡಿ. ದೇವೇಗೌಡರ ಬಳಿ ಬಂದ ಪ್ರತಾಪ್‌ ಸಿಂಹ, ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು. ಅಲ್ಲದೆ, ದೇವೇಗೌಡರಿಂದ ಆಶೀರ್ವಾದವನ್ನೂ ಪಡೆದುಕೊಂಡರು. ಬಳಿಕ ಈ ಫೋಟೊವನ್ನು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಪೋಸ್ಟ್‌ ಮಾಡಿದ್ದು, “ಹೊಸ ಸಂಸತ್ ಭವನದ ಉದ್ಘಾಟನೆ ಸಂದರ್ಭದಲ್ಲಿ ಹಿರಿಯ ಚೇತನ, ಮಾಜಿ ಪ್ರಧಾನಿ ದೇವೇಗೌಡರಿಂದ ಆಶೀರ್ವಾದ ಪಡೆದುಕೊಳ್ಳಲಾಯಿತು” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಹಲವಾರು ಕಮೆಂಟ್‌ಗಳು ಬಂದಿದ್ದು, ಕೆಲವರು ಶುಭ ಹಾರೈಸಿದರೆ, ಮತ್ತೆ ಕೆಲವರು ಮುಂದಿನ ಚುನಾವಣೆಯ ತಯಾರಿ ಎಂದು ಕಾಲೆಳೆದಿದ್ದಾರೆ.

ಕಮೆಂಟ್‌ನಲ್ಲೇನಿದೆ?

“ಮೋದಿಜಿಯವರ ನೂತನ ಸಂಸತ್ತಿನಲ್ಲಿ ಕರ್ನಾಟಕದ ಹಿರಿಯ ಧ್ರುವತಾರೆ ಮತ್ತು ಕಿರಿಯ ಅಭಿವೃದ್ಧಿಯ ನವಚೇತನ ಸಂಗಮ” ಎಂದು ಕಿರಣ್‌ ಬಿ ಗೌಡ ಎಂಬುವವರು ಕಮೆಂಟ್‌ ಮಾಡಿದರೆ, ಯಶ್ವಂತ್‌ ಶೆಟ್ಟಿ ಎಂಬುವವರು, “ಈ ಚಿತ್ರಕ್ಕೆ ನಿಮಗೆ ನೂರಕ್ಕೆ ನೂರು ಅಂಕಗಳು…. ನಮ್ಮ ಭಾರತ ಮಾಜಿ ಪ್ರಧಾನಿಗೆ ಕೊಟ್ಟ ಗೌರವ ಚೆನ್ನಾಗಿದೆ” ಎಂದು ಬರೆದುಕೊಂಡಿದ್ದಾರೆ.

ರಾಜಶೇಖರ್‌ ಮೂರ್ತಿ ಎಂಬುವವರು, “ಅವರ ಆಶೀರ್ವಾದ ಇಲ್ಲ ಎಂದರೆ ನಿನ್ನ ಸೋಲು ಕಟ್ಟಿಟ್ಟ ಬುತ್ತಿ ಸಹೋದರ” ಎಂದು ಬರೆದುಕೊಂಡಿದ್ದಾರೆ. ಮಹಾದೇವಸ್ವಾಮಿ ಕೆ.ಜಿ. ಎಂಬುವವರು, “2024ರ ಚುನಾವಣೆಗೆ ನೀವು ಸಿದ್ಧರಾಗುತ್ತಿದ್ದೀರಾ?” ಎಂದು ಪ್ರಶ್ನೆ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಫೋಟೊ ಹಂಚಿಕೊಂಡ ಸಂಸದ ಪ್ರತಾಪ್‌ ಸಿಂಹ

ಮೈಸೂರು ರಾಜಕೀಯ ಚಿತ್ರಣ ಹೇಗಿದೆ?

ಹಳೇ ಮೈಸೂರು ಸೇರಿದಂತೆ ಮೈಸೂರಿನಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಾರುಪತ್ಯವಿದೆ. ಇಲ್ಲಿ ಬಿಜೆಪಿ ತನ್ನ ಸಂಘಟನೆಯಲ್ಲಿ ಬಹಳವೇ ಹಿಂದಿದೆ. ಆದರೆ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಒಂದಷ್ಟು ಮತಗಳನ್ನು ಸಂಗ್ರಹಿಸುವಲ್ಲಿ ಬಿಜೆಪಿ ಯಶಸ್ವಿಯೂ ಆಗಿದೆ. ಒಟ್ಟಾರೆಯಾಗಿ ರಾಜ್ಯ ಅಥವಾ ಸ್ಥಳೀಯ ರಾಜಕೀಯವೇ ಬೇರೆ, ರಾಷ್ಟ್ರಮಟ್ಟದ ರಾಜಕಾರಣವೇ ಬೇರೆಯಾಗಿದೆ. ಇನ್ನು ಲೋಕಸಭೆ ವಿಚಾರಕ್ಕೆ ಬಂದಾಗ ಮತದಾರ ಇಲ್ಲಿ ಬೇರೆ ರೀತಿಯಾಗಿಯೇ ಚಿಂತನೆ ಮಾಡುತ್ತಾ ಬಂದಿರುವುದರಿಂದ ಫಲಿತಾಂಶವನ್ನು ಹೀಗೇ ಎಂದು ಹೇಳುವುದು ಕಷ್ಟಸಾಧ್ಯವಾಗಿದೆ. ಆದರೆ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಪ್ರತಾಪ್‌ ಸಿಂಹ ಅವರು ಸತತವಾಗಿ 2 ಬಾರಿ ಆರಿಸಿಬಂದಿದ್ದಾರೆ.

ಇದನ್ನೂ ಓದಿ: Karnataka Cabinet: ಬಸ್‌ ಓಡಿಸೋದಿಲ್ಲ ಎಂದಿದ್ದ ರಾಮಲಿಂಗಾರೆಡ್ಡಿ: ಡಿ.ಕೆ. ಬ್ರದರ್ಸ್‌ ʼಗ್ಯಾರಂಟಿಗೆʼ ಸಮ್ಮತಿ

ಇಲ್ಲಿ ಒಕ್ಕಲಿಗ ಸಮುದಾಯದವರ ಪ್ರಾಬಲ್ಯ ಹೆಚ್ಚಿದೆ. ಅಲ್ಲದೆ, ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡರು ಹಾಗೂ ಮತ್ತವರ ಕುಟುಂಬದ ಬಗ್ಗೆ ಜನರಲ್ಲಿ ವಿಶೇಷ ಪ್ರೀತಿಯನ್ನಿಟ್ಟುಕೊಂಡಿದ್ದಾರೆ. ಅಲ್ಲದೆ, ಪ್ರತಾಪ್‌ ಸಿಂಹ ಸಹ ಒಕ್ಕಲಿಗ ಸಮುದಾಯಕ್ಕೆ ಸೇರಿದ್ದಾರೆ. ಈಗ ಮುಂದಿನ ವರ್ಷ (2024) ಲೋಕಸಭಾ ಚುನಾವಣೆ ನಡೆಯುವುದರಿಂದ ಅವರ ಆಶೀರ್ವಾದವನ್ನು ಪಡೆದುಕೊಂಡಿರುವುದನ್ನು ನೆಟ್ಟಿಗರು ತಮ್ಮದೇ ಶೈಲಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯ ತಯಾರಿ ಎಂಬುದಾಗಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: ಮೂರು ಗಂಟೆವರೆಗೆ ಶೇ.50.93 ವೋಟಿಂಗ್‌; ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗುತ್ತಾ?

Lok Sabha Election 2024: ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ತುಮಕೂರು ಹಾಗೂ ಹಾಸನದಲ್ಲಿ ಶರವೇಗದಲ್ಲಿ ಮತದಾನ ನಡೆಯುತ್ತಿರುವುದು ಕಂಡುಬಂದಿದ್ದು, ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ (Lok Sabha Election 2024) ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆವರೆಗೆ ಶೇ. 50.93 ಮತದಾನ ದಾಖಲಾಗಿದೆ. ಮತದಾನ ಮುಕ್ತಾಯಕ್ಕೆ ಇನ್ನು ಎರಡು ಗಂಟೆಗಳು ಮಾತ್ರ ಬಾಕಿ ಉಳಿದಿದ್ದು, ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗಲಿದೆಯೇ ಎಂಬುವುದು ಕುತೂಹಲ ಮೂಡಿಸಿದೆ.

ದಕ್ಷಿಣ ಕನ್ನಡ – 58.76, ಉಡುಪಿ – 57.49, ಮಂಡ್ಯ – 57.44, ತುಮಕೂರು -56.62, ಹಾಸನ – 55.90 ಮತದಾನ ಆಗಿದ್ದು, ಈ ಕ್ಷೇತ್ರದಲ್ಲಿ ಶರವೇಗದಲ್ಲಿ ಮತದಾನ ನಡೆಯುತ್ತಿರುವುದು ಕಂಡುಬಂದಿದೆ. ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಂಜೆ 6 ಗಂಟೆಯವರೆಗೂ ಮತದಾನ ಮಾಡಲು ಅವಕಾಶ ಇದ್ದು, ಬಳಿಕ ಮತಗಟ್ಟೆಯನ್ನು ಚುನಾವಣೆ ಅಧಿಕಾರಿಗಳು ಬಂದ್‌ ಮಾಡಲಿದ್ದಾರೆ.

ಇಲ್ಲಿಯವರೆಗೂ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರನಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದಲ್ಲಿ ದಾಖಲೆಯ ಮತದಾನಕ್ಕೆ ಮೊದಲ ಹಂತದ ಮತದಾನ ಸಾಕ್ಷಿ ಆಗುತ್ತಾ ಎಂಬ ಕುತೂಹಲ ಮೂಡಿದೆ. ಮಧ್ಯಾಹ್ಯ ಗಂಟೆಗೆ ಶೇ. 39 ಮತದಾನ ಆಗಿತ್ತು, ಮೂರು ಗಂಟೆಗೆ ಶೇಕಡಾ 50.93 ಮತದಾನ ಆಗಿದೆ.

ಇದನ್ನೂ ಓದಿ | Lok Sabha Election 2024 : ಬೋಟ್‌ನಲ್ಲಿ ಬಂದು ವೋಟ್‌ ಮಾಡಿದ 150ಕ್ಕೂ ಮತದಾರರು

ಬೆಂಗಳೂರಿನ ಮೂರು ಕ್ಷೇತ್ರಗಳು ಹೊರತುಪಡಿಸಿದರೆ ಉಳಿದ ಹನ್ನೊಂದು ಕ್ಷೇತ್ರಗಳಲ್ಲಿ ಶರವೇಗದ ಮತದಾನ ನಡೆಯುತ್ತಿದ್ದು, ಬೆಳಗ್ಗೆಯಿಂದಲೂ ಮತಗಟ್ಟೆ ಕಡೆ ಉತ್ಸಾಹದಿಂದ ಮತದಾರರು ಆಗಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್‌ಗಳಲ್ಲಿ ಇರೋ ಜನರಿಂದ ಈ ಬಾರಿ ದಾಖಲೆ ಮತದಾನವಾಗಿದೆ. ಡಾಲರ್ಸ್ ಕಾಲೋನಿ, ಸದಾಶಿವನಗರ ಹಾಗೂ ಆರ್‌ಆರ್ ನಗರ, ಆನೇಕಲ್‌ ಬೂತ್ನಲ್ಲಿ 3 ಗಂಟೆವರೆಗೂ ಶೇಕಡಾ ಶೇ.65 ಮತದಾನ ದಾಖಲಾಗಿದೆ.

ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಮತದಾನ ಮಾಡಿದ ರಾಹುಲ್‌ ದ್ರಾವಿಡ್;‌ ವಿಡಿಯೊ ಇಲ್ಲಿದೆ

Rahul Dravid

ಬೆಂಗಳೂರು: ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರ, ಮಾಜಿ ಕ್ರಿಕೆಟಿಗ, ವಾಲ್‌ ಎಂದೇ ಖ್ಯಾತಿಯಾದ ರಾಹುಲ್‌ ದ್ರಾವಿಡ್‌ (Rahul Dravid) ಅವರು ಬೆಂಗಳೂರಿನಲ್ಲಿ (Bengaluru) ಮತದಾನ ಮಾಡಿದ್ದಾರೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಹಿನ್ನೆಲೆಯಲ್ಲಿ ರಾಹುಲ್‌ ಅವರು ಮಲ್ಲೇಶ್ವರಂ ಮತಗಟ್ಟೆಯಲ್ಲಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಹಾಗೆಯೇ, ಜನರಿಂದ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿದೆ.

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಮಧ್ಯಾಹ್ನ 3 ಗಂಟೆ ವೇಳಗೆ ಶೇ.50.93ರಷ್ಟು ಮತದಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.58.76ರಷ್ಟು ಮತದಾನ ದಾಖಲಾಗಿದ್ದು, ಇದೇ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಶೇ.40.10ರಷ್ಟು ಮತದಾನ ನಡೆದಿದ್ದು, ಅತಿ ಕಡಿಮೆ ಮತದಾನ ದಾಖಲಾದ ಜಿಲ್ಲೆ ಎನಿಸಿದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರಿನಲ್ಲೂ ಹೆಚ್ಚಿನ ಜನ ಮತದಾನ ಮಾಡಿದ್ದಾರೆ.

Continue Reading

ಕರ್ನಾಟಕ

Lok Sabha Election 2024 ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಸತ್ಯ; ನಮ್ಮ ಬಳಿ ದಾಖಲೆ ಇದೆ ಎಂದ ಪ್ರಲ್ಹಾದ್‌ ಜೋಶಿ

Lok Sabha Election 2024: ರಾಜ್ಯದಲ್ಲಿ ಒಬಿಸಿ, ಎಸ್ಸಿ, ಎಸ್ಟಿ ಮೀಸಲಾತಿ ಕಬಳಿಸಿ ಮುಸ್ಲಿಮರಿಗೆ ಕೊಡುತ್ತಿರುವುದು ಸತ್ಯ. ನಮ್ಮ ಬಳಿ ಈ ಬಗ್ಗೆ ದಾಖಲೆ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

VISTARANEWS.COM


on

Lok Sabha Election 2024 union minister pralhad joshi statement
Koo

ಹುಬ್ಬಳ್ಳಿ: ರಾಜ್ಯದಲ್ಲಿ ಒಬಿಸಿ, ಎಸ್ಸಿ, ಎಸ್ಟಿ ಮೀಸಲಾತಿ ಕಬಳಿಸಿ ಮುಸ್ಲಿಮರಿಗೆ ಕೊಡುತ್ತಿರುವುದು ಸತ್ಯ. ನಮ್ಮ ಬಳಿ ದಾಖಲೆ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Lok Sabha Election 2024) ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಷನಲ್ ಒಬಿಸಿ ಕಮಿಷನ್‌ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷನರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ಈಗ ಚುನಾವಣೆ ಕಾರಣದಿಂದ, ದಲಿತ ಒಬಿಸಿ ಮೀಸಲಾತಿ ಕಬಳಿಸುತ್ತಿಲ್ಲ. ಮುಸ್ಲಿಂರಿಗೆ ನೀಡುತ್ತಿಲ್ಲ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಚಿವ ಜೋಶಿ ಆರೋಪಿಸಿದರು.

ಇದನ್ನೂ ಓದಿ: Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

ಸಿಎಂ ಸಿದ್ದರಾಮಯ್ಯ ಸುಳ್ಳಿನ ಸರದಾರರು. ನ್ಯಾಷನಲ್ ಒಬಿಸಿ ಕಮಿಷನ್‌ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಅವರು ಹೇಳಿದರು. ಒಬಿಸಿ ಕಮಿಷನ್‌ಗೆ ಸಿಎಂ ಪತ್ರ ಬರೆದಿಲ್ಲ ಎಂದಾದರೆ ಹಂಸರಾಜ್ ಅವರು ನೀಡಿರುವ ನೋಟೀಸ್‌ಗೆ ಉತ್ತರ ಕೊಡಲಿ ಹಾಗಿದ್ದರೆ ಎಂದು ಜೋಶಿ ಸವಾಲು ಹಾಕಿದರು.

ಅತ್ಯಂತ ಅಪಾಯಕಾರಿ ಬೆಳವಣಿಗೆ

ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕಬಳಿಸಿ ತಮ್ಮ ವೋಟ್ ಬ್ಯಾಂಕ್ ಮುಸ್ಲಿಮರಿಗೆ ಕೊಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದರು.

ಸಂವಿಧಾನದಲ್ಲಿ ಅವಕಾಶವಿಲ್ಲ

ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಸುಪ್ರೀಂ ಕೋರ್ಟ್ ಸಹ ಇದನ್ನು ಸ್ಪಷ್ಟಪಡಿಸಿದೆ ಎಂದು ಜೋ಼ಶಿ ಹೇಳಿದರು.

ಸಿಎಂ ಜನರ ದಾರಿ ತಪ್ಪಿಸುತ್ತಿದ್ದಾರೆ

ಈ ವಿಷಯದಲ್ಲಿ ಸಿಎಂ ಜನರ ದಾರಿ ತಪ್ಪಿಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನವೇ ಮುಸ್ಲಿಂರಿಗೆ ಮೀಸಲಾತಿ ವಾಪಸ್ ಕೊಡುವುದಾಗಿ ಹೇಳಿದ್ದು, ಈಗ ಅದನ್ನು ಸಾಧಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: Lok Sabha Election 2024: ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

ಬಿಜೆಪಿ ಸರ್ಕಾರ ಇದ್ದಾಗ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2 ಪರ್ಸೆಂಟ್ ಮೀಸಲಾತಿ ಕಲ್ಪಿಸಲು ಇವರು ವಿರೋಧಿಸಿದ್ದರು ಎಂದು ಸಚಿವ ಜೋಶಿ ತಿಳಿಸಿದರು.

Continue Reading

Lok Sabha Election 2024

Lok Sabha Election 2024 : ತುಮಕೂರಲ್ಲಿ ಕುದುರೆ ಏರಿ ಬಂದು ಮತದಾನ ಮಾಡಿದ ಡಾಕ್ಟರ್‌

Lok Sabha Election 2024: ಮತದಾನವನ್ನು ಹಬ್ಬದಂತೆ ಆಚರಿಸಲಾಗುತ್ತಿದ್ದು, ತುಮಕೂರಿನಲ್ಲಿ ವೈದ್ಯರೊಬ್ಬರು ವಿಭಿನ್ನವಾಗಿ ಕುದುರೆ ಏರಿ ಬಂದು ಮತದಾನವನ್ನು ಮಾಡಿದ್ದಾರೆ. ಮಂಡ್ಯದಲ್ಲಿ ಲಂಡನ್‌ನಿಂದ ಬಂದ ಮಹಿಳೆಯೊಬ್ಬರು ಹಕ್ಕು ಚಲಾಯಿಸಿದರು. ಚಿಕ್ಕಮಗಳೂರಲ್ಲಿ 80ರ ವೃದ್ಧೆಯೊಬ್ಬರು ಒಂದು ಗಂಟೆ ಮುಂಚೆಯೇ ಮತಗಟ್ಟೆಗೆ ಬಂದಿದ್ದರು.

VISTARANEWS.COM


on

By

Lok Sabha Election 2024
Koo

ತುಮಕೂರು/ಮಂಡ್ಯ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮತದಾನ ಬಿರುಸಿನಿಂದ ಜರುಗುತ್ತಿದ್ದು, ಭಿನ್ನ-ವಿಭಿನ್ನವಾಗಿ ಮತಗಟ್ಟೆಗೆ ಎಂಟ್ರಿ ಕೊಟ್ಟು ಮತದಾರರು ಹಕ್ಕು ಚಲಾಯಿಸುತ್ತಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕುದುರೆ ಏರಿ ಬಂದು ವೈದ್ಯ ಡಾ.ಶ್ರೀಧರ್ ಮತದಾನ ಮಾಡಿದ್ದಾರೆ.

ಡಾ.ಶ್ರೀಧರ್ ಕುದುರೆ ಏರಿ ಬಂದು ಇತರೆ ಮತದಾರರ ಗಮನ ಸೆಳೆದರು. ಸತ್ಯಕುಮಾರ್ ಫೌಂಡೇಶನ್ ಮೂಲಕ ಸಮಾಜ ಸೇವೆ ಮಾಡುತ್ತಿರುವ ಡಾ.ಶ್ರೀಧರ್ ಇದೇ ವೇಳೆ ಮತದಾನ ಮಾಡಲು ಬಂದಿದ್ದ ಮತದಾರರಿಗೆ ಉಚಿತ ಸಮೋಸ ಹಾಗೂ ಟೀ ವಿತರಣೆ ಮಾಡಿದರು. ಆಸ್ಪತ್ರೆ, ಉಚಿತ ದಾಸೋಹ ಸೇರಿದಂತೆ ಹಲವಾರು ಸೇವೆ ಒದಗಿಸುತ್ತಿದ್ದಾರೆ.

ಮತಗಟ್ಟೆಗೆ ಮುಂಚಿತವಾಗಿ ಬಂದ ಅಜ್ಜಿ

ಚಿಕ್ಕಮಗಳೂರು ನಗರದ ಬಸವನಹಳ್ಳಿಯಲ್ಲಿ 80ರ ವೃದ್ಧೆಯೊಬ್ಬರು ಒಂದು ಗಂಟೆ ಮುಂಚೆಯೇ ಮತದಾನ ಮಾಡಲು ಮತಗಟ್ಟೆ ಬಳಿ ಕಾದು ಕುಳಿತಿದ್ದರು. ಸೊಪ್ಪಿನ ವ್ಯಾಪಾರಿ ಆಗಿರುವ ವೃದ್ಧೆ ಕನ್ನಮ್ಮರ ಮತದಾನ ಮಾಡುವ ಹುಮ್ಮಸ್ಸು ಕಂಡು ಅಧಿಕಾರಿಗಳು ಸಂತಸಗೊಂಡರು. ಏಕಾಂಗಿಯಾಗಿ ಬಂದು ಮತದಾನ ಮಾಡಿ ಯುವಕರಿಗೆ ಮಾದರಿಯಾದರು.

Lok Sabha Election 2024

ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು

ವೋಟ್ ಮಾಡಲು ಲಂಡನ್‌ನಿಂದ ಮಂಡ್ಯಕ್ಕೆ ಮಹಿಳೆಯೊಬ್ಬರು ಬಂದಿದ್ದರು. ಮಂಡ್ಯದ ಕಾಳೇನಹಳ್ಳಿ ಗ್ರಾಮದ ಸೋನಿಕಾ ಎಂಬಾಕೆ ಲಂಡನ್‌ನಿಂದ ಬಂದು ಕಾಳೇನ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇದೇ ವೇಳೆ ಮಾತಾನಾಡಿದ ಸೋನಿಕಾ ಎಲ್ಲೆಡೆ ಬರ ಇದೆ ನಮ್ಮ ರಾಜ್ಯಕ್ಕೆ ದೇಶಕ್ಕೆ ಒಳ್ಳೆಯದಾಗಬೇಕು. ಮೋದಿ ನಾಯಕತ್ವದಲ್ಲಿ ದೇಶ ಮುನ್ನಡೆಯುತ್ತಿದೆ ಹಾಗಾಗಿ ಕುಮಾರಸ್ವಾಮಿ ಅವರಿಗೆ ಮತ ಚಲಾಯಿಸಿದ್ದೀನಿ. ನೀವು ಮತದಾನ ಮಾಡಿ, ಮತ ಚಲಾಯಿಸುವುದಕ್ಕಾಗಿಯೇ ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದಿರುವುದಾಗಿ ಹೇಳಿದರು.

ಇದನ್ನೂ ಓದಿ: Lok Sabha Election 2024 : ಬೋಟ್‌ನಲ್ಲಿ ಬಂದು ವೋಟ್‌ ಮಾಡಿದ 150ಕ್ಕೂ ಮತದಾರರು

ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

ಕೋಲಾರ/ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಬಿರುಸಿನ ಮತದಾನ ನಡೆಯುತ್ತಿದ್ದು, ದುಬೈನಿಂದ ಬಂದು ಕೋಲಾರದ ನಿವಾಸಿಯೊಬ್ಬರು ಮತದಾನ ಮಾಡಿದ್ದಾರೆ. ಕೋಲಾರ ನಿವಾಸಿ ಅಬ್ದುಲ್ ಸುಬಾನ್ ಎಂಬುವವರು ಬ್ಯುಸಿನೆಸ್‌ಗೆಂದು ದುಬೈಗೆ ತೆರಳಿದ್ದರು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಚಲಾಯಿಸಲೆಂದು ದುಬೈನಿಂದ ಬಂದಿದ್ದರು. ಕೋಲಾರದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 117ರಲ್ಲಿ ಮತದಾನ ಮಾಡಿದರು.

ಇತ್ತ ಮಂಗಳೂರಿನ ಉಳಾಯಿಬೆಟ್ಟುವಿನ ಜೀವಿತ ಎಂಬುವವರು ದುಬೈನಿಂದ ಬಂದು ಮತದಾನ ಮಾಡಿದ್ದರು. ನಮ್ಮ ಮತ ನಮ್ಮ ಹಕ್ಕು ಎನ್ನುವ ದೃಷ್ಟಿಯಿಂದ ಮತದಾನ ಮಾಡಲು ಬಂದಿದ್ದಾಗಿ ಜೀವಿತ ತಿಳಿಸಿದರು.

ಚಿತ್ರದುರ್ಗದ ಶಿಕ್ಷಕರ ಕಾಲೋನಿ ನಗರದ ನಿವಾಸಿಯಾಗಿರುವ ಲಿಖಿತ ಅವರು ಫಿಲಿಫೈನ್ಸ್‌ನಿಂದ ಬಂದು ಮತದಾನ ಮಾಡಿದರು. ಫಿಲಿಫೈನ್ಸ್‌ನಲ್ಲಿ ಎಂಬಿಬಿಎಸ್‌ (MBBS) ಓದುತ್ತಿರುವ ಲಿಖಿತ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಬಂದಿದ್ದರು. ಚಿತ್ರದುರ್ಗದ ಜೋಗಿ ಮಟ್ಟಿ ರಸ್ತೆಯಲ್ಲಿರುವ ಮತಗಟ್ಟೆ ಸಂಖ್ಯೆ 230ರಲ್ಲಿ ಮತದಾನ ಮಾಡಿದರು. ಪ್ರತಿ ಬಾರಿ ತಪ್ಪದೆ ಬಂದು ಮತದಾನ ಮಾಡುತ್ತಿರುವುದಾಗಿ ಲಿಖಿತ ತಿಳಿಸಿದರು.

ಇದನ್ನೂ ಓದಿ: Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

ಉಡುಪಿಯಿಂದ ತುಮಕೂರಿಗೆ ಬಂದು ಮತ ಹಾಕಿದ ನ್ಯಾಯಾಧೀಶ

ನ್ಯಾಯಾಧೀಶ ಜೀತು ಆರ್.ಎಸ್ ಅವರು ಉಡುಪಿಯಿಂದ ತುಮಕೂರಿಗೆ ಬಂದು ಮತ ಹಾಕಿದರು. ತುಮಕೂರು ಗ್ರಾಮಾಂತರದ ಕೆ.ಪಾಲಸಂದ್ರದಲ್ಲಿರುವ ಮತಗಟ್ಟೆ ಸಂಖ್ಯೆ 114ರಲ್ಲಿ ಹಕ್ಕು ಚಲಾಯಿಸಿದರು. ನಂತರ ಮಾತನಾಡಿದ ಅವರು ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಸಾಕಷ್ಟು ಜನ ಮಹಾನ್ ಪುರುಷರು ಹೋರಾಡಿದ್ದಾರೆ. ಮತದಾನ ಮಾಡುವ ಮೂಲಕ ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನ ಸಂಭ್ರಮಿಸಬೇಕು. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಇಂತಹ ಪ್ರಾತಃಸ್ಮರಣೀಯರನ್ನು ಗೌರವಿಸಬೇಕು ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Rahul Dravid: ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಮತದಾನ ಮಾಡಿದ ರಾಹುಲ್‌ ದ್ರಾವಿಡ್;‌ ವಿಡಿಯೊ ಇಲ್ಲಿದೆ

Rahul Dravid: Lok Sabha Election: ಮೊದಲ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಬಿಸಿಲನ್ನೂ ಲೆಕ್ಕಿಸದೆ ಜನ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಮತದಾನಕ್ಕೆ ಸಾಥ್‌ ನೀಡುತ್ತಿರುವುದು ಪ್ರಮುಖ ಸಂಗತಿಯಾಗಿದೆ. ಅದರಲ್ಲೂ, ರಾಹುಲ್‌ ದ್ರಾವಿಡ್‌ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿರುವ ವಿಡಿಯೊ ಭಾರಿ ವೈರಲ್‌ ಅಗಿದೆ.

VISTARANEWS.COM


on

Rahul Dravid
Koo

ಬೆಂಗಳೂರು: ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರ, ಮಾಜಿ ಕ್ರಿಕೆಟಿಗ, ವಾಲ್‌ ಎಂದೇ ಖ್ಯಾತಿಯಾದ ರಾಹುಲ್‌ ದ್ರಾವಿಡ್‌ (Rahul Dravid) ಅವರು ಬೆಂಗಳೂರಿನಲ್ಲಿ (Bengaluru) ಮತದಾನ ಮಾಡಿದ್ದಾರೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಹಿನ್ನೆಲೆಯಲ್ಲಿ ರಾಹುಲ್‌ ಅವರು ಮಲ್ಲೇಶ್ವರಂ ಮತಗಟ್ಟೆಯಲ್ಲಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಹಾಗೆಯೇ, ಜನರಿಂದ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿದೆ.

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಮಧ್ಯಾಹ್ನ 3 ಗಂಟೆ ವೇಳಗೆ ಶೇ.50.93ರಷ್ಟು ಮತದಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.58.76ರಷ್ಟು ಮತದಾನ ದಾಖಲಾಗಿದ್ದು, ಇದೇ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಶೇ.40.10ರಷ್ಟು ಮತದಾನ ನಡೆದಿದ್ದು, ಅತಿ ಕಡಿಮೆ ಮತದಾನ ದಾಖಲಾದ ಜಿಲ್ಲೆ ಎನಿಸಿದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರಿನಲ್ಲೂ ಹೆಚ್ಚಿನ ಜನ ಮತದಾನ ಮಾಡಿದ್ದಾರೆ.

ಹಸಿಮಣೆ ಏರುವ ಮೊದಲು ಮತದಾನ ಮಾಡಿದ ವರ

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ವರನೊಬ್ಬ ಮತಗಟ್ಟೆಗೆ ಓಡೋಡಿ ಬಂದು ಮತ ಚಲಾಯಿಸಿದ್ದಾರೆ. ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಮತಕೇಂದ್ರಕ್ಕೆ ಓಡೋಡಿ ಹೋದ ವರ ವೋಟ್‌ ಹಾಕಿ ನಿರಾಳರಾದರು. ವರ ಚೇತನ್ ಎಂಬುವವರು ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆದರು. ಚೇತನ್‌ ಅವರು ದೀಪಿಕಾ ಎಂಬುವರ ಜತೆಗೆ ವಿವಾಹವಾಗುತ್ತಿದ್ದು, ತಮ್ಮ ಮುಹೂರ್ತದ ವಸ್ತ್ರದಲ್ಲೇ ಬಂದು ವೋಟ್‌ ಹಾಕಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೊತ್ತುಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧುವೊಬ್ಬರು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ. ಬಳಿಕ ಹಸೆಮಣೆ ಏರಿದ್ದಾರೆ. ಈ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಕುಂದೂರಿನ ತಳವಾರದ ಸೌಮ್ಯಾ ಅವರು ಮೂಡಿಗೆರೆಯ ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Gold Rate Today: ಮತದಾನದ ದಿನ ಬಂಗಾರದ ದರ ತೇಜಿ, ಬೆಂಗಳೂರಿನಲ್ಲಿ 24K ಚಿನ್ನಕ್ಕೆ ₹440 ಏರಿಕೆ

Continue Reading
Advertisement
Lok Sabha Election 2024
ಕರ್ನಾಟಕ2 mins ago

Lok Sabha Election 2024: ಮೂರು ಗಂಟೆವರೆಗೆ ಶೇ.50.93 ವೋಟಿಂಗ್‌; ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗುತ್ತಾ?

IPL 2024
ಪ್ರಮುಖ ಸುದ್ದಿ15 mins ago

IPL 2024 : ಐಪಿಎಲ್ ವಿಕ್ಷಣೆಯಲ್ಲಿ ಹೊಸ ದಾಖಲೆ ಬರೆದ ಡಿಸ್ನಿ ಹಾಟ್​​ಸ್ಟಾರ್​

Mangoes for Health
ಆರೋಗ್ಯ23 mins ago

Mangoes for Health: ದಿನಕ್ಕೆ ಎಷ್ಟು ಮಾವಿನ ಹಣ್ಣು ತಿಂದರೆ ಆರೋಗ್ಯಕ್ಕೆ ಒಳ್ಳೆಯದು?

Lok Sabha Election 2024 union minister pralhad joshi statement
ಕರ್ನಾಟಕ26 mins ago

Lok Sabha Election 2024 ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಸತ್ಯ; ನಮ್ಮ ಬಳಿ ದಾಖಲೆ ಇದೆ ಎಂದ ಪ್ರಲ್ಹಾದ್‌ ಜೋಶಿ

Lok Sabha Election 2024
Lok Sabha Election 202432 mins ago

Lok Sabha Election 2024 : ತುಮಕೂರಲ್ಲಿ ಕುದುರೆ ಏರಿ ಬಂದು ಮತದಾನ ಮಾಡಿದ ಡಾಕ್ಟರ್‌

Rahul Dravid
ಕರ್ನಾಟಕ32 mins ago

Rahul Dravid: ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಮತದಾನ ಮಾಡಿದ ರಾಹುಲ್‌ ದ್ರಾವಿಡ್;‌ ವಿಡಿಯೊ ಇಲ್ಲಿದೆ

Raj B Shetty entry in duniya Vijay Movie
ಸ್ಯಾಂಡಲ್ ವುಡ್32 mins ago

Raj B Shetty: ದುನಿಯಾ ವಿಜಯ್‌ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರಂತೆ ರಾಜ್ ಬಿ ಶೆಟ್ಟಿ!

ದೇಶ34 mins ago

Congress Manifesto: ಮುಸಲ್ಮಾನರಿಗೆ ಸಂಪತ್ತು ಹಂಚಿಕೆ; ಮನಮೋಹನ್‌ ಸಿಂಗ್‌ ಹಳೆಯ ವಿಡಿಯೋ ಶೇರ್‌ ಮಾಡಿದ ಬಿಜೆಪಿ!

Virat Kohli
ಕ್ರೀಡೆ35 mins ago

Virat Kohli : ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್​ ಬಗ್ಗೆ ಬೇಸರ ವ್ಯಕ್ತಪಡಿಸಿದ ಗವಾಸ್ಕರ್; ಏನಂದ್ರು ಅವರು?

Lok Sabha Election 2024 Villagers vandalise polling booth in Chamarajanagar
Lok Sabha Election 202439 mins ago

Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ4 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20245 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20246 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ12 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌