ಸಂಸದ ಪ್ರತಾಪ ಸಿಂಹ, ದಿನೇಶ್‌ ಅಮೀನ್‌ ಮಟ್ಟು ನಡುವೆ ʻರೈಲುʼ ಫೈಟ್‌: ಸೋಷಿಯಲ್‌ ಮೀಡಿಯಾದಲ್ಲಿ ಬೈದಾಟ - Vistara News

ಕರ್ನಾಟಕ

ಸಂಸದ ಪ್ರತಾಪ ಸಿಂಹ, ದಿನೇಶ್‌ ಅಮೀನ್‌ ಮಟ್ಟು ನಡುವೆ ʻರೈಲುʼ ಫೈಟ್‌: ಸೋಷಿಯಲ್‌ ಮೀಡಿಯಾದಲ್ಲಿ ಬೈದಾಟ

ಸಂಸದ ಪ್ರತಾಪ ಸಿಂಹ ಮತ್ತು ದಿನೇಶ್‌ ಅಮೀನ್‌ ಮಟ್ಟು ಅವರ ನಡುವೆ ಜಾಲತಾಣದಲ್ಲಿ ಸಮರ ಶುರುವಾಗಿದೆ. ರೈಲು ವಿಚಾರದಲ್ಲಿ ಆರಂಭಗೊಂಡ ಫೈಟ್‌ ಈಗ ರಾಜಕೀಯಕ್ಕೆ ತಿರುಗಿದೆ.

VISTARANEWS.COM


on

dinesh amin mattu-pratap simha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮೈಸೂರು ಸಂಸದ ಪ್ರತಾಪ ಸಿಂಹ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಧ್ಯಮ ಸಲಹೆಗಾರರಾಗಿದ್ದ, ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಮಧ್ಯೆ ಜಾಲತಾಣದಲ್ಲಿ ʻರೈಲುʼ ಫೈಟ್‌ ಆರಂಭಗೊಂಡಿದೆ. ದಿನೇಶ್‌ ಅಮೀನ್‌ ಮಟ್ಟು ಅವರು ಫೇಸ್‌ ಬುಕ್‌ನಲ್ಲಿ ಕೆಣಕ್ಕಿದ್ದಕ್ಕೆ ಪ್ರತಾಪ್‌ ಸಿಂಹ ಅವರು ಟ್ವಿಟರ್‌ನಲ್ಲಿ ಉತ್ತರ ನೀಡಿದ್ದಾರೆ. ಈ ಜಗಳಕ್ಕೆ ಇಬ್ಬರೂ ಬಳಸಿಕೊಂಡಿದ್ದು ಟಿವಿಯಲ್ಲಿ ಬಂದಿರುವ ಸಂದರ್ಶನ, ಮಾತುಕತೆಯ ಕ್ಲಿಪ್‌ಗಳನ್ನು.

ದಿನೇಶ್‌ ಅಮೀನ್‌ ಮಟ್ಟು ಹೇಳಿದ್ದೇನು?
ವಿಚಾರವನ್ನು ಮೊದಲು ಎತ್ತಿದ್ದು ದಿನೇಶ್‌ ಅಮೀನ್‌ ಮಟ್ಟು. ʻʻಕೊಡಗಿನ ಮಹಾಜನರೇ ದಯವಿಟ್ಟು ನಿಮ್ಮ ಸಂಸದ ಕಾಗೆ ಹಾರಿಸಿದ್ದನ್ನು ಕೇಳಿ ಬಿಡಿ. ಕೊಡಗಿಗೆ ರೈಲು ತರದೆ ಇದ್ದರೆ ಮುಂದಿನ ಚುನಾವಣೆಗೆ ಸ್ಪರ್ಧೆನೇ ಮಾಡೋದಿಲ್ಲ ಎಂದು ಹೇಳಿ ಬೆತ್ತಲಾಗಿದೆ ಸಿಂಹʼʼ ಎನ್ನುವ ವಿವರಣೆಯೊಂದಿಗೆ ಹಳೆಯ ಟಿವಿ ಸಂದರ್ಶನದ ತುಣುಕೊಂದನ್ನು ಇಟ್ಟಿದ್ದಾರೆ. ಈ ಸಂದರ್ಶನದಲ್ಲಿ ಪ್ರತಾಪ್‌ ಸಿಂಹ ಅವರು ʻʻಐದು ವರ್ಷದೊಳಗೆ ಕೊಡಗಿಗೆ ರೈಲು ತರದಿದ್ದರೆ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲʼʼ ಎಂದು ಸವಾಲು ಹಾಕುತ್ತಾರೆ. ಆಗ ಸಂದರ್ಶಕರು ʻʻನೀವು ಜನರ ಮುಂದೆ ಈ ಮಾತು ಹೇಳುತ್ತಿದ್ದೀರಿʼʼ ಎನ್ನುವುದನ್ನು ನೆನಪಿಸುತ್ತಾರೆ. ಆಗಲೂ ಸಂಸದ ಪ್ರತಾಪ್‌ಸಿಂಹ ಅವರು ಈ ಮಾತನ್ನು ಸಮರ್ಥಿಸುತ್ತಾರೆ.

ದಿನೇಶ್‌ ಅಮೀನ್‌ ಮಟ್ಟು ಅವರು ಹಳೆ ಕಥೆಯನ್ನು ನೆನಪಿಸುತ್ತಾ ಪ್ರತಾಪ ಸಿಂಹ ಅವರನ್ನು ಕುಟುಕುತ್ತಾರೆ.

ಪ್ರತಾಪ್‌ ಸಿಂಹ ಪ್ರತಿಕ್ರಿಯೆ ಏನು?
ಇದಕ್ಕೆ ಪ್ರತಿಯಾಗಿ ಪ್ರತಾಪ್‌ ಸಿಂಹ ಅವರು ಟ್ವಿಟರ್‌ನಲ್ಲಿ ಉತ್ತರಿಸಿದ್ದಾರೆ. ʻʻದಿನೇಶ್ ಅಮೀನ್ ಮಟ್ಟು ಎಂಬ ಈ ಮಾಜಿ ಪತ್ರಕರ್ತ “ಪ್ರಜಾವಾಣಿ”ಯಂಥ ಪ್ರತಿಷ್ಠಿತ ಪತ್ರಿಕೆಯಲ್ಲಿ ಕೆಲಸ ಮಾಡಿದ್ದಾರೆಂಬ ಕಾರಣಕ್ಕೆ ಅವರ ಅಜ್ಞಾನವನ್ನು ಹೋಗಲಾಡಿಸಲು ಈ ಸ್ಪಷ್ಟೀಕರಣ ನೀಡುತ್ತಿದ್ದೇನೆ.ʼʼಎಂದು ವಿವರಣೆ ನೀಡಿ ಒಂದು ವಿಡಿಯೊವನ್ನು ಟ್ಯಾಗ್‌ ಮಾಡಿದ್ದಾರೆ. ಇದು ಕೂಡಾ ಒಂದು ಟಿವಿ ಚಾನೆಲ್‌ನಲ್ಲಿ ನಡೆದ ಕಾರ್ಯಕ್ರಮದ ಒಂದು ತುಣುಕು.
ಅದರಲ್ಲಿ ಪ್ರತಾಪ್‌ ಸಿಂಹ ಅವರು ರೈಲು ತರುವುದಕ್ಕೆ ಬೇಕಾದ ಪೂರ್ವ ಸಿದ್ಧತೆಗಳು, ಅನುಮತಿಗಳು, ಭೂಸ್ವಾಧೀನ ಮೊದಲಾದ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಇದುವರೆಗೆ ಆಗಿರುವ ಬೆಳವಣಿಗೆಗಳ ವಿವರಣೆಯನ್ನು ನೀಡಿದ್ದಾರೆ. ೨೦೧೮ರ ಹೊತ್ತಿಗೇ ಕೇಂದ್ರ ಸರಕಾರದಿಂದ ತಾವು ಕೇಂದ್ರದಿಂದ ಅನುಮತಿಯನ್ನು ಪಡೆದಿರುವುದನ್ನು ಉಲ್ಲೇಖಿಸಿದ್ದಾರೆ. ಆದರೆ, ರಾಜ್ಯ ಸರಕಾರದ ವತಿಯಿಂದ ನಡೆಯಬೇಕಾಗಿರುವ ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗಿರುವುದನ್ನು ವಿವರಿಸಿದ್ದಾರೆ. ರಾಜ್ಯ ಸರಕಾರ ಭೂಸ್ವಾಧೀನ ಪ್ರಕ್ರಿಯೆ ಮಾಡಿದರಷ್ಟೇ ರೈಲ್ವೇ ಟ್ರ್ಯಾಕಿಂಗ್‌ ಮತ್ತು ನಿಲ್ದಾಣಗಳ ಸ್ಥಾಪನೆ ಸಾಧ್ಯ ಎಂದು ಹೇಳಿದ್ದಾರೆ. ಇದರ ಮಧ್ಯೆ ತಾವು ಮೈಸೂರಿನಲ್ಲಿ ಇದಕ್ಕೆ ಪೂರಕವಾಗಿ ರೈಲು ನಿಲ್ದಾಣ ನಿರ್ಮಾಣ ಕಾರ್ಯ ಕೈಗೊಂಡಿರುವುದಾಗಿ ವಿವರಿಸಿದ್ದಾರೆ.

ಇದಕ್ಕೆ ದಿನೇಶ್‌ ಅಮೀನ್‌ ಮಟ್ಟು ಹೇಳಿದ್ದೇನು?
ರೈಲು ವಿಚಾರದಲ್ಲಿ ಆರಂಭಗೊಂಡ ಪ್ರತಾಪಸಿಂಹ ಮತ್ತು ದಿನೇಶ್‌ ಅಮೀನ್‌ ಮಟ್ಟು ಫೈಟ್‌ ಪ್ರತಾಪಸಿಂಹ ಅವರ ಪ್ರತಿಕ್ರಿಯೆ ಬಳಿಕ ಬೇರೊಂದು ದಿಕ್ಕಿಗೆ ತಿರುಗಿದೆ. ಎರಡನೇ ಪೋಸ್ಟ್‌ನಲ್ಲಿ ಮಟ್ಟು ಅವರು, ರೈಲ್ವೇ ಲೈನ್‌ಗೆ ಸಂಬಂಧಿಸಿ ಪ್ರತಾಪಸಿಂಹ ಅವರು ನೀಡಿದ ಪ್ರತಿಕ್ರಿಯೆಯ ಬಗ್ಗೆ ಹೆಚ್ಚೇನೂ ಮಾತನಾಡಿಲ್ಲ. ಅವರು ತಮ್ಮನ್ನು ಮಾಜಿ ಪತ್ರಕರ್ತ ಎಂದು ಉಲ್ಲೇಖಿಸಿದ್ದಕ್ಕೆ ಸಿಡಿಮಿಡಿಯಾಗಿದ್ದಾರೆ.

ʻʻನಾನು ನಿನ್ನೆ ಶೇರ್ ಮಾಡಿದ್ದ, ಸಂಸದ ಪ್ರತಾಪಸಿಂಹ ಕೊಡಗಿಗೆ ರೈಲು ಬಿಟ್ಟ ವಿಡಿಯೋ ವೈರಲ್ ಆದ ನಂತರ ಅವರು ತನ್ನ ಟ್ವಿಟರ್ ಖಾತೆಯಲ್ಲಿ ಸ್ಪಷ್ಟೀಕರಣ ನೀಡಿದ್ದಾರಂತೆ. ಅದರಲ್ಲಿ ನನ್ನನ್ನು ಮಾಜಿ ಪತ್ರಕರ್ತನೆಂದು ಕರೆದು ತನ್ನ ಆತ್ಮಕ್ಕೆ ತಾನೇ ಶಾಂತಿ‌ಕೋರಿಕೊಂಡಿದ್ದಾರಂತೆ ಇರಲಿ. ನಾನು ಮಾಜಿನೋ, ಹಾಲಿಯೋ ಓದುಗರು ನಿರ್ಧರಿಸುತ್ತಾರೆ. ಆದರೆ ನಾನು ಪ್ರತಾಪ ಸಿಂಹನಂತೆ, ತಾನು‌ ಮಾಡಿದ ವಾಂತಿಯನ್ನು ತಾನೇ ತಿನ್ನುವ ಮಾರಿಕೊಂಡ ಪತ್ರಕರ್ತ ಖಂಡಿತ ಅಲ್ಲ. ತಾನು ಸಂಸದನಾಗುವ ಮೂರು ವರ್ಷ ಮೊದಲು ಈತ ‘ಮೈನಿಂಗ್ ಮಾಫಿಯಾ’ ಎಂಬ ಪುಸ್ತಕ ಬರೆದ. ಅದರಲ್ಲಿ ಯಡಿಯೂರಪ್ಪನವರಿಂದ ಹಿಡಿದು ಅನಂತ್ ಕುಮಾರ್, ಸುಷ್ಮಾ, ರಾಮುಲು, ರೆಡ್ಡಿ, ರೇಣುಕಾಚಾರ್ಯ ಎಲ್ಲರನ್ನೂ ವಾಚಾಮಗೋಚರ ಬೈದು ವಾಂತಿ‌ ಮಾಡಿದ್ದ. ಕೊನೆಗೆ ಅದೇ ಯಡಿಯೂರಪ್ಪ, ಅನಂತಕುಮಾರ್ ಕಾಲು ಹಿಡಿದು ಟಿಕೆಟ್ ಪಡೆದುಕೊಂಡ. ಆ ಪುಸ್ತಕಗಳಲ್ಲಿ ಈತ ಉದುರಿಸಿದ್ದ ಆಣಿಮುತ್ತುಗಳಲ್ಲಿ ಕೆಲವನ್ನು‌ ಇಲ್ಲಿ ಹಾಕಿದ್ದೇನೆ. ಇನ್ನೂ ಇದೆʼ ಎಂದು ಬರೆದುಕೊಂಡು ಪುಸ್ತಕದ ಕೆಲವು ತುಣುಕುಗಳನ್ನು ಹಾಕಿದ್ದಾರೆ. ಇದಕ್ಕೆ ಪ್ರತಾಪ್‌ಸಿಂಹ ಯಾವ ಪ್ರತಿಕ್ರಿಯೆ ನೀಡುತ್ತಾರೆ ಎಂದು ಕಾದು ನೋಡಬೇಕಾಗಿದೆ.

ಇದನ್ನೂ ಓದಿ| ದೇವಸ್ಥಾನಕ್ಕೆ ಮಾಂಸ ಸೇವಿಸಿ ಹೋಗ್ತಾರ ಸಿದ್ದರಾಮಯ್ಯ ಹೆಂಡತಿ?: ಸಂಸದ ಪ್ರತಾಪ್‌ ಸಿಂಹ ಪ್ರಶ್ನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

bigbreaking

20,000 ಕೋಟಿಗೂ ಅಧಿಕ ಹಗರಣ: ಮೂಲ ದಾಖಲೆಗಳೇ ಕಾಣೆಯಾದ ಆರೋಪ – ಪತ್ರಿಕಾಗೋಷ್ಠಿ ಮೂಲಕ ಸ್ಫೋಟಕ ಬಹಿರಂಗ

VISTARANEWS.COM


on

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading

Latest

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

VISTARANEWS.COM


on

ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಈ ಸ್ಫೋಟ ಸಂಭವಿಸಿತ್ತು. ಆರೋಪಿ ಶಾರಿಕ್ ಸ್ಫೋಟಕ ತುಂಬಿದ್ದ ಕುಕ್ಕರ್ ಅನ್ನು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ, ನಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು.

ದೇಶದ ಭದ್ರತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದ ಈ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತು. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು. ತನಿಖೆಯ ವೇಳೆ ಶಾರಿಕ್ ನಿಷೇಧಿತ ಉಗ್ರಗಾಮಿ ಸಂಘಟನೆಗಳಿಂದ ಪ್ರೇರಿತನಾಗಿದ್ದದ್ದು ಮತ್ತು ಡಾರ್ಕ್ ವೆಬ್ ಮೂಲಕ ವಿದೇಶಿ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದು ಬಾಂಬ್ ತಯಾರಿಕಾ ತರಬೇತಿ ಪಡೆದಿದ್ದ ಎಂಬ ಆಘಾತಕಾರಿ ಸತ್ಯಗಳು ಹೊರಬಂದಿದ್ದವು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಎನ್‌ಐಎ ಸಲ್ಲಿಸಿದ್ದ ಸಾಕ್ಷ್ಯಧಾರಗಳನ್ನು ಪುರಸ್ಕರಿಸಿ ಶಾರಿಕ್ ದೋಷಿ ಎಂದು ತೀರ್ಪು ನೀಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೇರಿದಂತೆ ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಆತನಿಗೆ ಶಿಕ್ಷೆ ಪ್ರಕಟಿಸಲಾಗಿದೆ. ಈ ತೀರ್ಪು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗುವವರಿಗೆ ಕಠಿಣ ಸಂದೇಶ ರವಾನಿಸಿದ್ದು, ಸಂತ್ರಸ್ತ ಆಟೋ ಚಾಲಕ ಮತ್ತು ಸಾರ್ವಜನಿಕರಿಗೆ ನ್ಯಾಯ ಸಿಕ್ಕಂತಾಗಿದೆ.

Continue Reading

Latest

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

VISTARANEWS.COM


on

ಹರಿಹರದ ಪಂಚಮಸಾಲಿ ಮಠದಲ್ಲಿ ದಶಕಗಳಿಂದ ಇದ್ದ ಭಿನ್ನಾಭಿಪ್ರಾಯ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಮಠದ ಆಸ್ತಿ, ಭಕ್ತರ ದೇಣಿಗೆ ಮತ್ತು ಸರ್ಕಾರದ ಅನುದಾನದ ಲೆಕ್ಕಾಚಾರದ ವಿಚಾರವಾಗಿ ವಚನಾನಂದ ಸ್ವಾಮೀಜಿ ಹಾಗೂ ಮಠದ ಟ್ರಸ್ಟಿಗಳ ನಡುವೆ ತೀವ್ರ ಜಟಾಪಟಿ ಆರಂಭವಾಗಿದೆ. ಸೋಮವಾರ ಮಠದ ಆವರಣದಲ್ಲಿ ಉಭಯ ಬಣಗಳ ಬೆಂಬಲಿಗರು ಮುಖಾಮುಖಿಯಾಗಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡು, ಪೊಲೀಸರು ಬಿಗಿ ಬಂದೋಬಸ್ತ್ ಮಾಡುವಂತಾಯಿತು.

ಈ ವಿವಾದದ ಕೇಂದ್ರಬಿಂದು ಸರ್ಕಾರದ 10 ಕೋಟಿ ರೂಪಾಯಿ ಅನುದಾನ. ಮಠದಲ್ಲಿ ವಸತಿಗೃಹ ಮತ್ತು ಹಾಸ್ಟೆಲ್ ನಿರ್ಮಾಣಕ್ಕಾಗಿ ಬಂದಿದ್ದ ಈ ಹಣದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ವಚನಾನಂದ ಶ್ರೀಗಳು ಆರೋಪಿಸಿದ್ದಾರೆ. ಟ್ರಸ್ಟಿಗಳು ನಕಲಿ ಸಹಿ ಮಾಡಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ, ಆದರೆ ಕಟ್ಟಡಗಳೇ ನಿರ್ಮಾಣವಾಗಿಲ್ಲ ಎಂಬುದು ಶ್ರೀಗಳ ವಾದ. ಇದಕ್ಕೆ ಪ್ರತಿಯಾಗಿ ಟ್ರಸ್ಟಿಗಳು, “ನಾವು ಯಾವುದೇ ತಪ್ಪು ಮಾಡಿಲ್ಲ, ಎಲ್ಲವೂ ಪಾರದರ್ಶಕವಾಗಿದೆ” ಎಂದು ಹೇಳುತ್ತಾ 2008 ರಿಂದ 2026ರವರೆಗಿನ ಲೆಕ್ಕಪತ್ರದ ದಾಖಲೆಗಳೊಂದಿಗೆ ಮಠಕ್ಕೆ ಆಗಮಿಸಿ ಶ್ರೀಗಳ ವಿರುದ್ಧವೇ ಹರಿಹಾಯ್ದಿದ್ದಾರೆ.

ಮಠದ ಆವರಣದಲ್ಲಿ ನಡೆದ ಈ ಹೈಡ್ರಾಮಾದಲ್ಲಿ ಟ್ರಸ್ಟಿಗಳು ಶ್ರೀಗಳ ಉಚ್ಚಾಟನೆಗೆ ಪಟ್ಟು ಹಿಡಿದರೆ, ಶ್ರೀಗಳು ಮಾತ್ರ ತಾವು ಮಠ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಮಠದಲ್ಲಿ ನಡೆದಿರುವ ಲೂಟಿಯ ಬಗ್ಗೆ ಪೂರ್ಣ ತನಿಖೆಯಾಗಲಿ” ಎಂದು ಸ್ವಾಮೀಜಿ ಪಟ್ಟು ಹಿಡಿದು ಕುಳಿತಿದ್ದಾರೆ. ಭಕ್ತರ ಆಸ್ತಿಯಾಗಿರುವ ಮಠದಲ್ಲಿ ಈ ರೀತಿ ಲೆಕ್ಕದ ವಿಚಾರವಾಗಿ ಹಗ್ಗಜಗ್ಗಾಟ ನಡೆಯುತ್ತಿರುವುದು ಈಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ

Continue Reading

Latest

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

VISTARANEWS.COM


on

ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಗಳು ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆಯಿದೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮೇ 1ರಂದು ತೈಲ ಕಂಪನಿಗಳು ಹೊಸ ದರಗಳನ್ನು ಪ್ರಕಟಿಸಲಿವೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಪೆಟ್ರೋಲ್, ಡೀಸೆಲ್ ಜೊತೆಗೆ ಗ್ಯಾಸ್ ಬೆಲೆಯೂ ಗಗನಕ್ಕೇರುವ ಮುನ್ಸೂಚನೆ ಸಿಕ್ಕಿದೆ. ಈ ಬೆಲೆ ಏರಿಕೆಯು ಸಾಮಾನ್ಯ ಜನರ ಮನೆ ಬಜೆಟ್ ಮೇಲೆ ನೇರ ಪರಿಣಾಮ ಬೀರಲಿದೆ.

ಬೆಲೆ ಏರಿಕೆಯ ಜೊತೆಗೆ ಸರ್ಕಾರವು ಹೊಸ ಎಲ್‌ಪಿಜಿ ಸಂಪರ್ಕ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈಗ ಇರುವ ಗ್ರಾಹಕರಿಗೆ ಸಮರ್ಪಕವಾಗಿ ಗ್ಯಾಸ್ ಪೂರೈಸಲು ಪೆಟ್ರೋಲಿಯಂ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ. ಅಲ್ಲದೆ, ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿಯೂ ಮಹತ್ವದ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ನಗರ ಪ್ರದೇಶದಲ್ಲಿ 25 ದಿನ ಮತ್ತು ಗ್ರಾಮೀಣ ಪ್ರದೇಶದಲ್ಲಿ 45 ದಿನಗಳ ಅಂತರವಿದ್ದರೆ ಮಾತ್ರ ಮರು ಬುಕಿಂಗ್ (Refilling) ಮಾಡಲು ಸಾಧ್ಯವಾಗುತ್ತದೆ. ಇದರಿಂದಾಗಿ ಬೇಕಾಬಿಟ್ಟಿ ಗ್ಯಾಸ್ ಬುಕ್ ಮಾಡುವುದಕ್ಕೆ ಬ್ರೇಕ್ ಬೀಳಲಿದೆ.

ಗ್ಯಾಸ್ ವಿತರಣೆಯಲ್ಲಿ ಪಾರದರ್ಶಕತೆ ತರಲು ‘ಒಟಿಪಿ’ (OTP) ಆಧಾರಿತ ವಿತರಣಾ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಗ್ರಾಹಕರು ಸಿಲಿಂಡರ್ ಪಡೆಯುವಾಗ ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಕೋಡ್ ನೀಡಿದ ನಂತರವೇ ವಿತರಣೆ ಮಾಡಲಾಗುತ್ತದೆ. ಪೂರೈಕೆಯ ಕೊರತೆಯಿಂದಾಗಿ ಈಗಾಗಲೇ ಬೆಂಗಳೂರಿನಂತಹ ನಗರಗಳ ಹೋಟೆಲ್‌ಗಳಲ್ಲಿ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ಇರುವುದು ಒಳಿತು.

Continue Reading
Advertisement
bigbreaking1 minute ago

20,000 ಕೋಟಿಗೂ ಅಧಿಕ ಹಗರಣ: ಮೂಲ ದಾಖಲೆಗಳೇ ಕಾಣೆಯಾದ ಆರೋಪ – ಪತ್ರಿಕಾಗೋಷ್ಠಿ ಮೂಲಕ ಸ್ಫೋಟಕ ಬಹಿರಂಗ

Latest46 minutes ago

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

Latest1 hour ago

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

Latest3 hours ago

ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರಾ? ಪರಮೇಶ್ವರ್ ಮೌನದ ಹಿಂದೆ ಅಡಗಿದೆಯೇ ದೊಡ್ಡ ರಹಸ್ಯ?

Latest5 hours ago

ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ! ಆರ್ಥಿಕ ಶಿಸ್ತಿನ ಬಗ್ಗೆ ಹೆಚ್‌ಡಿಕೆ ಆತಂಕ

Latest5 hours ago

ರಿಷಬ್ ಶೆಟ್ಟಿ ಸಿನಿಮಾದ ತೆಲುಗು ವರ್ಷನ್ ರೆಡಿ: ಟಾಲಿವುಡ್‌ನಲ್ಲಿ ಬಿಡುಗಡೆಗೆ ದಿನಾಂಕ ನಿಗದಿ! ಯಾವುದು ಆ ಸಿನಿಮಾ?

Latest5 hours ago

‘ಕೆಡಿ’ ಹಾಡಿನ ವಿವಾದಕ್ಕೆ ತೆರೆ: ಕ್ಷಮೆಯಾಚಿಸಿ 50 ಬುಡಕಟ್ಟು ಹುಡುಗಿಯರ ಶಿಕ್ಷಣದ ಜವಾಬ್ದಾರಿ ಹೊತ್ತ ಸಂಜಯ್ ದತ್!

Latest6 hours ago

ಜಕಾರ್ತಾದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು, 81 ಜನರಿಗೆ ಗಾಯ! ಅಪಘಾತಕ್ಕೆ ಕಾರಣವಾಯಿತೇ ಟ್ಯಾಕ್ಸಿ?

Latest22 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest23 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌