ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ (Pratibha Puraskar) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, 2024ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.
ಅರ್ಜಿ ಸಲ್ಲಿಸಲು ಗಮನಿಸಬೇಕಾದ ಅಂಶಗಳು
- ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು.
- ರಾಜ್ಯ ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ.
- ವಿದ್ಯಾರ್ಥಿಯು 2024ನೇ ಸಾಲಿನ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
- ವಿದ್ಯಾರ್ಥಿ, ತಂದೆ-ತಾಯಿಯ ದೂರವಾಣಿ ಹಾಗೂ ಇ-ಮೇಲ್ ವಿಳಾಸವನ್ನು ಕಡ್ಡಾಯವಾಗಿ ನಮೂದಿಸುವುದು.
- ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಧೃಡಿಕೃತ ಅಂಕಪಟ್ಟಿ, ತಂದೆ, ತಾಯಿಯ ಇಲಾಖಾ ಗುರುತಿನ ಚೀಟಿ ಅಥವಾ ಸೇವಾ ಧೃಢೀಕರಣ ಪ್ರಮಾಣ ಪತ್ರ (KSGEA News Blogನಲ್ಲಿ ಸೇವಾ ದೃಢೀಕರಣ ಪತ್ರದ ಪಿಡಿಎಫ್ ಫೈಲ್ ಲಭ್ಯವಿದೆ) ಮತ್ತು ಪೋಷಕರ ಸಹಿ ಸೇರಿ ಅಗತ್ಯ ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ 5 ಎಂ.ಬಿ. ಸೈಜ್ ಮೀರದಂತೆ ಅಪ್ಲೋಡ್ ಮಾಡುವುದು.
- ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00ವರೆಗೆ ಸಂಪರ್ಕಿಸಿ: ಸುರೇಶ್ ಎನ್. ಕಛೇರಿ ವ್ಯವಸ್ಥಾಪಕರು, 080 22354784/83
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಿ. (https://forms.gle/vRzQ4toZuE7N8c4G9 OR https://bit.ly/ksgea2024pp)
ಸೇವಾ ದೃಢೀಕರಣ ಪತ್ರದ ಪಿಡಿಎಫ್ ಫೈಲ್ ಇಲ್ಲಿದೆ
ಇದನ್ನೂ ಓದಿ | 7th Pay Commission: 7ನೇ ವೇತನ ಆಯೋಗ; ವರದಿ ಜಾರಿಯಾದ್ರೆ ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?