Site icon Vistara News

Praveen Nettaru | ಆರೋಪಿಗಳ ಪತ್ತೆಗೆ 5 ತಂಡ ರಚನೆ; 15 ಮಂದಿ ವಿಚಾರಣೆ

praveen police1

ಮಂಗಳೂರು: ಪ್ರವೀಣ್ ನೆಟ್ಟಾರ್‌ (Praveen Nettaru) ಹತ್ಯೆ ಪ್ರಕರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಕೂಡಲೇ ತಪ್ಪಿತಸ್ಥರ ಬಂಧನಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದೆ. ಆರೋಪಿಗಳ ಪತ್ತೆಗಾಗಿ 5 ತಂಡಗಳ ರಚಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದು, ಈಗಾಗಲೇ ಈ ತಂಡವು ಸುಮಾರು 15 ಜನಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಬುಧವಾರ (ಜುಲೈ 27) ಬೆಳಗ್ಗೆ ಬೆಳ್ಳಾರೆಗೆ ಭೇಟಿ ನೀಡಿದ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಪರಿಸ್ಥಿತಿಯನ್ನು ಅವಲೋಕಿಸಿದರು. ಬಂದೋಬಸ್ತ್ ವ್ಯವಸ್ಥೆಯನ್ನು ಪರಿಶೀಲಿಸಿ ಸ್ಥಳದಲ್ಲಿದ್ದ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು.

ಇದನ್ನೂ ಓದಿ | Praveen Nettaru | ಪ್ರವೀಣ್ ಹತ್ಯೆ ಖಂಡಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಆರೋಪಿಗಳ ಜಾಡು ಹಿಡಿದು ಮೂರು ತಂಡಗಳು ಈಗಾಗಲೇ ಕೇರಳ, ಮಡಿಕೇರಿ, ಹಾಸನಕ್ಕೆ ತೆರಳಿವೆ. ಉಳಿದ 2 ತಂಡವು ಸುತ್ತಮುತ್ತ ತನಿಖೆ ಕೈಗೊಂಡಿದೆ. ಅಲ್ಲದೆ, ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳ ಶೋಧ ನಡೆಸಲಾಗುತ್ತಿದೆ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

15 ಮಂದಿ ಶಂಕಿತರ ವಿಚಾರಣೆ?

ಕೊಲೆ ವಿಚಾರವಾಗಿ ಶಂಕಿತ 15 ಮಂದಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ತನಿಖೆಯನ್ನು ತೀವ್ರಗೊಳಿಸಿದ್ದು, ಶೀಘ್ರವೇ ಕೊಲೆಗಾರರನ್ನು ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Praveen Nettaru | ಬಿಜೆಪಿಯಲ್ಲಿ ಶುರುವಾಯ್ತಾ ರಾಜೀನಾಮೆ ಪರ್ವ?

Exit mobile version