ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಬರ್ಬರ ಹತ್ಯೆಯನ್ನು ಈಡಿಗ ಬಿಲ್ಲವ ಸಮುದಾಯದ ಗುರುಗಳಾದ ಡಾ. ಶ್ರೀ ಪ್ರಣವಾನಂದ ಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ.
ಬಿಲ್ಲವ ಸಮುದಾಯದ ಕುಲಬಾಂಧವರು, ಕೋಡಿ ಚೆನ್ನಯ್ಯ ದೇವಸ್ಥಾನದ ಸಕ್ರಿಯ ಸೇವಾ ಕಾರ್ಯಕರ್ತರು, ಸಾಮಾಜಿಕ ಕಾರ್ಯಕರ್ತರಾಗಿದ್ದ ಪ್ರವೀಣ್ ನೆಟ್ಟಾರ್ ರವರ ಹತ್ಯೆಯಿಂದ ಇಡೀ ಬಿಲ್ಲವ ಸಮುದಾಯಕ್ಕೆ ಆಘಾತವಾಗಿದೆ ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.
ಕೂಡಲೇ ರಾಜ್ಯ ಸರ್ಕಾರ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು ಹಾಗೂ ಅವರ ಪತ್ನಿಗೆ ಕೂಡಲೇ ಸರ್ಕಾರಿ ನೌಕರಿ ನೀಡಬೇಕೆಂದು ಒತ್ತಾಯಿಸಿರುವ ಶ್ರೀ ಪ್ರಣವಾನಂದ ಸ್ವಾಮೀಜಿ, ಹತ್ಯೆ ಮಾಡಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ಸುಮಾರು 12 ಲಕ್ಷ ಜನಸಂಖ್ಯೆ ಇರುವ ಬಿಲ್ಲವ ಸಮುದಾಯದ ಯುವಕರು ಈ ಹತ್ಯೆ ಪ್ರಕರಣದಿಂದ ಎಚ್ಚೆತ್ತುಕೊಂಡು, ಯಾವುದೇ ಪ್ರಚೋದನೆಗೆ ಒಳಗಾಗದೆ, ಯಾವುದೇ ಪಕ್ಷದಲ್ಲಿದ್ದರೂ ಸಂಯಮದಿಂದ ಇರಬೇಕೆಂದು ಶ್ರೀಗಳು ಸೂಚನೆ ನೀಡಿದ್ದಾರೆ.
ಈ ಹಿಂದೆ ಕೂಡ ಬಿಲ್ಲವ ಸಮಾಜದ ಅನೇಕ ಯುವಕರು ಇದೇ ರೀತಿಯಾಗಿ ಹತ್ಯೆಗೀಡಾಗಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ಈ ರೀತಿ ಹತ್ಯೆಯಾಗಬಾರದು. ನಾವು ಬ್ರಹ್ಮಶ್ರೀ ನಾರಾಯಣ ಗುರುಗಳ ಅಹಿಂಸ ಸಿದ್ಧಾಂತದ ಹಾದಿಯಲ್ಲಿ ಮುಂದುವರಿಯಬೇಕು ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | Praveen Nettaru | ಪಕ್ಷ, ಸಿದ್ಧಾಂತಕ್ಕೆ ಹೋರಾಡುವವರಿಗಿಲ್ಲ ರಕ್ಷಣೆ; ನೂರಾರು ಬಿಜೆಪಿ ಕಾರ್ಯಕರ್ತರ ರಾಜೀನಾಮೆ