ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಅಲ್ಲಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ.
ಮುಖ್ಯಮಂತ್ರಿಯವರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಸಿ.ಟಿ. ರವಿ ಇದ್ದಾರೆ. ಸಿಎಂ ನೇರವಾಗಿ ನೆಟ್ಟಾರಿಗೆ ಭೇಟಿ ನೀಡಲಿದ್ದಾರೆಯೇ ಅಥವಾ ಮಂಗಳೂರಿನಲ್ಲಿ ಸಭೆ ನಡೆಸಿ ಬಳಿಕ ಭೇಟಿ ನೀಡಲಿದ್ದಾರೆಯೇ ಎಂಬ ಮಾಹಿತಿ ತಿಳಿದುಬಂದಿಲ್ಲ.