Site icon Vistara News

Praveen Nettaru | ನೆಟ್ಟಾರಿನಲ್ಲಿ ಉದ್ವಿಗ್ನ ಪರಿಸ್ಥಿತಿ; ಸಿಎಂ ತುರ್ತು ಸಭೆ

cm basavaraj

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು (Praveen Nettaru) ಹತ್ಯೆ ಖಂಡಿಸಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕರಾವಳಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದಲ್ಲಿ ತುರ್ತು ಸಭೆ ನಡೆಸಿದ್ದಾರೆ.

ಪ್ರಕರಣದ ತನಿಖೆ ಚುರುಕಾಗಬೇಕಿದ್ದು, ಕೊಲೆ ಆರೋಪಿಗಳ ಪತ್ತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಧಿಕಾರಿಗಳ ತಂಡದ ಕಾರ್ಯಾಚರಣೆ ಇನ್ನಷ್ಟು ವೇಗವಾಗಿ ಸಾಗಬೇಕಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯಬೇಕು ಎಂಬಿತ್ಯಾದಿ ಸೂಚನೆಗಳನ್ನು ನೀಡಿರುವ ಸಿಎಂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಉದ್ವಿಗ್ನತೆಯನ್ನು ತಹಬದಿಗೆ ತರುವಂತೆ ಸೂಚಿಸಿದ್ದಾರೆ. ಅಲ್ಲದೆ, ಪ್ರಕರಣದ ತನಿಖೆ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳುವ ಸಂಬಂಧ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ನಡೆಯುತ್ತಿರುವ ಮಹತ್ವದ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ, ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ಭಾಗಿಯಾಗಿದ್ದಾರೆ.

ಇದನ್ನೂ ಓದಿ | ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

Exit mobile version