ಮಂಗಳೂರು: ಪುತ್ತೂರು ಆಸ್ಪತ್ರೆಯಿಂದ ಹುಟ್ಟೂರಿಗೆ ಪ್ರವೀಣ್ ನೆಟ್ಟಾರು (Praveen Nettaru Murder) ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿದೆ. ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಆಂಬ್ಯುಲೆನ್ಸ್ ಮುಂದೆ ಕೇಸರಿ ಧ್ವಜ ಹಿಡಿದ ಕಾರ್ಯಕರ್ತರು ಬೈಕ್ ರ‍್ಯಾಲಿ ಕೈಗೊಂಡಿದ್ದಾರೆ.
ಮೆರವಣಿಗೆ ಸಾಗುವ ದಾರಿಯಲ್ಲಿ ಗೌರವ ನೀಡಲು ಕಾರ್ಯಕರ್ತರು ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಮೆರವಣಿಗೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇಂಧನ ಸಚಿವ ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿ ಜಿಲ್ಲಾ ನಾಯಕರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ | ಕೇರಳ ರಿಜಿಸ್ಟ್ರೇಷನ್ ಬೈಕ್‌ನಲ್ಲಿ ಬಂದಿದ್ದ 3 ದುಷ್ಕರ್ಮಿಗಳಿಂದ ಪ್ರವೀಣ್ ನೆಟ್ಟಾರು ಹತ್ಯೆ