ಬೆಂಗಳೂರು: ಅಮಾಯಕರೊಬ್ಬರ ಕೊಲೆಯಾದಾಗ ಆಕ್ರೋಶ ಇದ್ದೇ ಇರುತ್ತದೆ. ಎಲ್ಲರಿಗೂ ಶಾಂತಿ ಸಹನೆಯಿಂದ ಇರಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru Murder) ವಿಚಾರವಾಗಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಕೇರಳ ಗಡಿದಾಟಿಯಾದದರೂ ಕೊಲೆಗಾರರನ್ನು ಹಿಡಿಯುತ್ತೇವೆ ಎಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿರುದ್ಧ ಆಕ್ರೋಶ ಇದ್ದೇ ಇರುತ್ತದೆ. ಸರ್ಕಾರ ಮುಂದಿನ ಕ್ರಮ ಕೈಗೊಳ್ಳುತ್ತದೆ. ಗೃಹ ಸಚಿವರು ಪೊಲೀಸ್ ವರಿಷ್ಠಾಧಿಕಾರಿಗೆ ಎಲ್ಲ ರೀತಿಯ ಸೂಚನೆ ನೀಡಿದ್ದು, ಆದಷ್ಟು ಬೇಗ ಕೊಲೆಗಡುಕರನ್ನು ಬಂಧಿಸಲು ಸೂಚನೆ ನೀಡಲಾಗಿದೆ ಎಂದರು.
ಕೇರಳ ಗಡಿಯಲ್ಲಿ ಹತ್ಯೆ ಆಗಿರುವುದರಿಂದ ಕೇರಳಕ್ಕೆ ಹೋಗಿಯಾದರೂ ಕಾರ್ಯಾಚರಣೆ ಮಾಡಲು ಸೂಚಿಸಲಾಗಿದೆ. ಕೆಲವೊಂದು ವಿಚಾರವನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ, ಹಿಂದಿನಿಂದ ಬಂದು ಮೋಸ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇದೊಂದು ವ್ಯವಸ್ಥಿತ ಸಂಚಾಗಿದ್ದು, ಆರೋಪಿಗಳನ್ನು ಸೆರೆಹಿಡಿಯುವ ಕೆಲಸ ನಮ್ಮದು. ಆ ಕೆಲಸವನ್ನು ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ | Praveen Nettaru Murder | ಹುಟ್ಟೂರಿನತ್ತ ಪ್ರವೀಣ್ ಮೃತ ದೇಹ, ಅಂತ್ಯಕ್ರಿಯೆಗೆ ಸಿದ್ಧತೆ