ಮಂಗಳೂರು: ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ದಾಳಿ ನಡೆಸಿದೆ.
ಕೆಲವು ಗಣನೀಯ ಮಾಹಿತಿಗಳ ಆಧಾರದಲ್ಲಿ 32 ಕಡೆ ಮನೆ ಹಾಗೂ ಕೆಲವು ಖಾಸಗಿ ಕಟ್ಟಡಗಳ ಮೇಲೆ ಎನ್‌ಐಎ ದಾಳಿ ಮಾಡಿದೆ. ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರನ್ನು ವಿಚಾರಣೆಗೆ ಒಳಪಡಿಸಿದೆ. ಎನ್‌ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಾಥ್ ನೀಡಿದ್ದಾರೆ.
ಜುಲೈ 26ರ ರಾತ್ರಿ ಪ್ರವೀಣ್ ನೆಟ್ಟಾರು ಹತ್ಯೆ ಬೆಳ್ಳಾರೆಯಲ್ಲಿ ನಡೆದಿತ್ತು. ಸ್ಥಳೀಯ ಬಿಜೆಪಿ ಮುಖಂಡರಾಗಿದ್ದ ಪ್ರವೀಣ್ ಹತ್ಯೆಯಿಂದ ದಕ್ಷಿಣ ಕನ್ನಡದಲ್ಲೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಕ್ಷೋಭೆ ಭುಗಿಲೆದ್ದಿತ್ತು. ತನಿಖೆಯಲ್ಲಿ ಸರ್ಕಾರ ವಿಫಲವಾಗಿದೆ, ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ನೀಡಿದ್ದು, ಪಕ್ಷ ಹಾಗೂ ಸರ್ಕಾರದ ಮುಜುಗರಕ್ಕೂ ಕಾರಣವಾಗಿತ್ತು.
ಇದನ್ನು ಓದಿ | ಪ್ರವೀಣ್ ನೆಟ್ಟಾರು ಹತ್ಯೆ: ಮೂವರು ಪ್ರಧಾನ ಆರೋಪಿಗಳ ಸೆರೆ? ಯಾರಿವರು ಕ್ರಿಮಿನಲ್ಸ್?