ಧಾರವಾಡ: ಮುಸ್ಲಿಮರು ಮಾಡಿರುವ ಲಕ್ಷಾಂತರ ಕೊಲೆಗಳಿಗೆ ನಾವು ತಿರುಗಿ ಬಿದ್ದರೆ ದೇಶದಲ್ಲಿ ಒಬ್ಬನೂ ಮುಸ್ಲಿಂ ಇರಲಾರ. ಆದರೆ ಆ ಮಾನಸಿಕ ಸ್ಥಿತಿ ನಮ್ಮಲ್ಲಿ ಇರಬಾರದು. ಕೊಲೆಗೆ ಕೊಲೆಯೇ ಉತ್ತರವಲ್ಲ. ನ್ಯಾಯಕ್ಕೆ ನ್ಯಾಯಾಲಯ, ಪೊಲೀಸ್ ಠಾಣೆ ಇದೆ. ಸಂವಿಧಾನ ಬದ್ಧವಾದ ಹೋರಾಟಕ್ಕೆ ಅವಕಾಶ ಇದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದು, ಪ್ರವೀಣ್ (Praveen Nettaru) ಹತ್ಯೆಯನ್ನು ನಾವು ಖಂಡಿಸುತ್ತೇವೆ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ.
ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಧಾರವಾಡದಲ್ಲಿ ಮಾತನಾಡಿದ ಅವರು, ಮುಲ್ಲಾ ಮೌಲ್ವಿಗಳು, ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಯನ್ನು ಹದ್ದುಬಸ್ತಿನಲ್ಲಿ ಇಡುವ ಕೆಲಸವನ್ನು ಸರ್ಕಾರ ಕೂಡಲೇ ಮಾಡಬೇಕು. ಇಲ್ಲದೇ ಹೋದಲ್ಲಿ ಮತ್ತಷ್ಟು ಹಿಂದುಗಳ ಬಲಿಯನ್ನು ಕಾಣಬೇಕಾಗುವ ಸ್ಥಿತಿ ಬರಲಿದೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಈ ಕೌರ್ಯ ಹದ್ದುಬಸ್ತಿನಲ್ಲಿಡುವ ಕಾರ್ಯ ಸರ್ಕಾರ ಕೂಡಲೇ ಮಾಡಬೇಕು. ಹಿಂದುಗಳ ರಕ್ಷಣೆಯಲ್ಲಿ ಸರ್ಕಾರ ವಿಫಲ ಆಗುತ್ತಿದೆ ಎಂದಿದ್ದಾರೆ. ಕೊಲೆ, ಹಲ್ಲೆ, ಗಲಾಟೆ ನಡೆದಾಗ ಉಗ್ರವಾದ ಹೇಳಿಕೆಗಳು ಬರುತ್ತವೆ. ಆದರೆ, ಮುಂದೆ ಏನು? ಈವರೆಗೆ ಯಾವುದೇ ರೀತಿಯ ಕಠಿಣ ಪ್ರಕ್ರಿಯೆ ನಡೆದಿಲ್ಲ, ಇದೇ ಕಾರಣಕ್ಕೆ ಪ್ರವೀಣ್ ಹತ್ಯೆ ನಡೆದಿದೆ ಎಂದು ಮುತಾಲಿಕ್ ಆರೋಪಿಸಿದರು.
ಬಿಜೆಪಿಗೆ ಹಿಂದುಗಳ ಸುರಕ್ಷತೆ ಕಾಳಜಿಯಿದ್ದಲ್ಲಿ ಶಾಂತಿ-ಸೌಹಾರ್ದತೆ ಬೇಕಾದರೆ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ಬ್ಯಾನ್ ಮಾಡಬೇಕು. ಇಲ್ಲದೇ ಹೋದಲ್ಲಿ ಹಿಂದು ಸಮಾಜ ತಿರುಗಿ ಬೀಳುತ್ತದೆ. ಸ್ವಯಂ ರಕ್ಷಣೆಗೆ ಹಿಂದು ಸಮಾಜ ಸಿದ್ಧವಾಗಬೇಕಿದೆ. ಇಲ್ಲದಿದ್ದರೆ ಸರ್ಕಾರ, ಕಾನೂನು ಏನು ಮಾಡಲು ಆಗುವುದಿಲ್ಲ ಎಂದು ಮುತಾಲಿಕ್ ಹೇಳಿದ್ದಾರೆ.
ಇದನ್ನೂ ಓದಿ | ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ
ಸರ್ಕಾರಕ್ಕೆ ಗಟ್ಸ್ ಇಲ್ಲ
ಹತ್ಯೆ ಹಿಂದೆ ಕೇರಳ ಕೈವಾಡವಿದೆ ಎಂದು ಹೇಳುತ್ತಿದ್ದು, ವಾರದ ಹಿಂದೆ ನಡೆದ ಹತ್ಯೆ ಸೇಡಿಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸರ್ಕಾರದ ಹದ್ದಿನ ಕಣ್ಣು ಎಲ್ಲಿದೆ? ಬಿಗಿಯಾದ ಕ್ರಮ ಇಲ್ಲ. ಇದೇ ಕಾರಣಕ್ಕೆ ಇದೆಲ್ಲ ಆಗುತ್ತಿದೆ. ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಗಟ್ಸ್ ಇಲ್ಲ. ಆ ಧೈರ್ಯ, ಮಾನಸಿಕ ಸ್ಥಿತಿ ರಾಜ್ಯ ಸರ್ಕಾರಕ್ಕೆ ಇಲ್ಲ. ಮುಸ್ಲಿಂ ವೋಟ್‌ಗಾಗಿ ಎಲ್ಲೋ ಒಂದು ಕಡೆ ಆತಂಕ, ಭಯ ಇದೆ ಎಂದು ಮುತಾಲಿಕ್ ಕಿಡಿಕಾರಿದರು.
ಸಂಘಟನೆ ಬ್ಯಾನ್ ಮಾಡಲಿ ಇಲ್ಲವೇ ಸಿಎಂ ರಾಜೀನಾಮೆ ನೀಡಲಿ- ಮುತಾಲಿಕ್
ದಕ್ಷಿಣ ಕನ್ನಡ ಜಿಲ್ಲೆ, ಶಿವಮೊಗ್ಗ ಬಿಜೆಪಿಯ ಭದ್ರ ಕೋಟೆಯಾಗಿದ್ದು, ಅವರ ಭದ್ರಕೋಟೆಯಲ್ಲೇ ಹಿಂದುಗಳ ಕೊಲೆಯಾಗುತ್ತಿದೆ. ಹಾಗಾದರೆ ಭದ್ರ ಕೋಟೆ ಛಿದ್ರವಾಗುತ್ತಿದೆಯಲ್ಲವೇ? ಹಿಂದುಗಳ ಕೊಲೆ ಮಾಡಿದರೂ ಏನೂ ಮಾಡಲು ಆಗುವುದಿಲ್ಲ ಎಂಬ ಸಂದೇಶ ಕೊಡುತ್ತಿದ್ದಾರೆ. ಎಸ್‌ಡಿಪಿಐ, ಪಿಎಫ್ಐ ಬ್ಯಾನ್ ಮಾಡಬೇಕು, ಇಲ್ಲವೇ ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಬೇಕು ಎಂದು ಮುತಾಲಿಕ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ | ಕೇರಳ ರಿಜಿಸ್ಟ್ರೇಷನ್ ಬೈಕ್‌ನಲ್ಲಿ ಬಂದಿದ್ದ 3 ದುಷ್ಕರ್ಮಿಗಳಿಂದ ಪ್ರವೀಣ್ ನೆಟ್ಟಾರು ಹತ್ಯೆ