ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಒಟ್ಟಾರೆ (Praveen Nettaru) ಹತ್ಯೆ ಪ್ರಕರಣಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹತ್ಯೆಯನ್ನು ವಿರೋಧಿಸಿ ಟ್ವೀಟ್ ಮಾಡಿದ್ದಾರೆ.
ಹತ್ಯೆ ಬಗ್ಗೆ ಟ್ವೀಟ್ ಮಾಡಿ ಖಂಡಿಸಿದ ಸಿದ್ದರಾಮಯ್ಯ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು” ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಇದನ್ನೂ ಓದಿ | Praveen Nettaru | ನಾವು ತಿರುಗಿ ಬಿದ್ದರೆ ದೇಶದಲ್ಲಿ ಒಬ್ಬ ಮುಸ್ಲಿಂ ಇರಲ್ಲ ಅಂದ್ರು ಪ್ರಮೋದ್ ಮುತಾಲಿಕ್