ಬೆಂಗಳೂರು: ಸಮಾಜ ವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೆರವು ನೀಡುತ್ತೇನೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಇದನ್ನು ನೆರವು ಎಂದು ಹೇಳಲು ಇಷ್ಟಪಡುವುದಿಲ್ಲ. ಇದು ನನ್ನ ಕರ್ತವ್ಯ ಎಂದಿದ್ದಾರೆ. 10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಗದ್ಗದಿತರಾದರು.
ಕಠಿಣ ಕ್ರಮ
ಪ್ರವೀಣ್ ಹತ್ಯೆ ಮಾಡಿದ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರ್ಕಾರಕ್ಕಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.
ಇದನ್ನೂ ಓದಿ | praveen Nettaru| ಪ್ರವೀಣ್ ಕೊಲೆಯಲ್ಲಿ ನೇರವಾಗಿ ಭಾಗಿಯಾದ ಬೆಳ್ಳಾರೆ ಮೂಲದ ವ್ಯಕ್ತಿ ಬಂಧನ?