Site icon Vistara News

Praveen Nettaru | ಸಿನಿಮಾ ಸ್ಟೈಲ್‌ನಲ್ಲಿ ಪೋಸ್ಟರ್ ಬಿಡುಗಡೆ: ಬಿಜೆಪಿಗೆ ವ್ಯಂಗ್ಯ

praveen cm poster

ಬೆಂಗಳೂರು: ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತ ಪ್ರವೀಣ್‌ ಹತ್ಯೆ (Praveen Nettaru) ಪ್ರಕರಣ ಸಂಬಂಧ ಬಿಜೆಪಿ ಸರ್ಕಾರದ ವಿರುದ್ಧ ಕಿಚ್ಚು ಹೆಚ್ಚಿದೆ. ಈ ಮಧ್ಯೆ ಕೆಲ ಬಿಜೆಪಿ ವಿರುದ್ಧದ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ಸಹ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಶೇರ್‌ ಮಾಡಿಕೊಳ್ಳುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ಪೋಸ್ಟರ್‌

ವೈರಲ್‌ ಆಗುತ್ತಿರುವ ಪೋಸ್ಟರ್‌ನಲ್ಲಿ ಪ್ರಮುಖವಾಗಿ “ಕರ್ನಾಟಕ ರಾಜ್ಯ ಬಿಜೆಪಿ ಅರ್ಪಿಸುವ ‌ಕಠಿಣ ಕ್ರಮ ಕೈಗೊಳ್ಳಲಾಗುವುದು” coming soon ಎಂದು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸಿನಿಮಾ ಸ್ಟೈಲ್‌ನಲ್ಲಿ ಪೋಸ್ಟರ್ ಬಿಡುಗಡೆ ಮಾಡಿ ವ್ಯಂಗ್ಯ ಮಾಡಿರುವ ನೆಟ್ಟಿಗರು, “ಕೇಂದ್ರವೂ ನಮ್ಮದೇ, ರಾಜ್ಯವೂ ನಮ್ಮದೇ ಕೊನೆಗೆ ಸಾವು ಕೂಡ ನಮ್ಮದೇ” ಎಂದು ಪೋಸ್ಟರ್‌ ಅನ್ನು ಹಂಚಿಕೊಳ್ಳುವ ಮೂಲಕ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

ಈ ವ್ಯಂಗ್ಯಭರಿತ ಪೋಸ್ಟರ್‌ಗಳು ವೈರಲ್‌ ಆಗುತ್ತಿದ್ದಂತೆ ಇತ್ತ ಕಾಂಗ್ರೆಸ್‌ ಕಾರ್ಯಕರ್ತರ ಸೋಶಿಯಲ್‌ ಮೀಡಿಯಾಗಳಲ್ಲಿ ಹೆಚ್ಚು ಹೆಚ್ಚು ಶೇರ್‌ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ | Praveen Nettaru | ನೆಟ್ಟೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ; ಸಿಎಂ ತುರ್ತು ಸಭೆ

Exit mobile version