ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಫೀಕ್, ಝಾಕೀರ್‌ರನ್ನು ಪುತ್ತೂರು ನ್ಯಾಯಾಲಯಕ್ಕೆ ಬೆಳ್ಳಾರೆ ಪೊಲೀಸರು ಹಾಜರುಪಡಿಸಿದ್ದು, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿಚಾರಣೆ ನಡೆಸಿದ ಪುತ್ತೂರಿನ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯವು ಬಂಧಿತರನ್ನು ಆಗಸ್ಟ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶವನ್ನು ಹೊರಡಿಸಿದೆ. ಶುಕ್ರವಾರ ಬೆಳಗ್ಗೆ ಶಫೀಕ್ ಮತ್ತು ಝಾಕೀರ್‌ರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದರು.
30ಕ್ಕೂ ಹೆಚ್ಚು ಜನರ ವಿಚಾರಣೆ
ಈಗಾಗಲೇ ಮಂಗಳೂರು ಸಿಸಿಬಿ ಪೊಲೀಸರು ಪ್ರವೀಣ್ ನೆಟ್ಟರೂ ಹತ್ಯೆ ಪ್ರಕರಣ ಸಂಬಂಧ 30ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅದರಲ್ಲಿಇಬ್ಬರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿ ಗುರುವಾರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಈಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಇದನ್ನೂ ಓದಿ | Praveen Nettaru| ಮಗನನ್ನು ಕಳೆದುಕೊಂಡ ನೋವಲ್ಲಿರುವ ಪ್ರವೀಣ್ ತಂದೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು