ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ನಡೆಸಬೇಕೆಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ದೇವಿ ಮತ್ತು ದೈವಗಳಿರುವ ಕರಾವಳಿಯ ಪುಣ್ಯ ಭೂಮಿಯಲ್ಲಿ ಮತಾಂಧ ಶಕ್ತಿಗಳು ಅಟ್ಟಾಹಾಸ ಮೆರೆಯುತ್ತಿದ್ದು, ಈ
ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಜಿಹಾದಿಗಳಿಂದಲೇ ಇಂತಹ ಘಟನೆಗಳು ಮರುಕಳಿಸುತ್ತಿರುವ ಸಾಧ್ಯತೆ ಅಧಿಕವಾಗಿದೆ. ಹೀಗಾಗಿ ರಾಷ್ಟ್ರೀಯ ತನಿಖಾ ದಳವೇ ತನಿಖೆ ನಡೆಸುವುದು ಸೂಕ್ತ ಎಂದು ಅವರು ಕೇಂದ್ರ ಗೃಹ ಸಚಿವರ ಗಮನ ಸೆಳೆದಿದ್ದಾರೆ.
ಕರಾವಳಿ ಭಾಗದಲ್ಲಿ ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳಿದ್ದು, ಇವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ
ಮನವಿ ಮಾಡಿರುವ ಅವರು, ಇಲ್ಲದಿದ್ದರೆ ಈ ಭಾಗ ನೆಮ್ಮದಿಯಾಗಿರಲು ಸಾಧ್ಯವಿಲ್ಲ ಎಂದಿದ್ದಾರೆ.
ಈಗಾಗಲೇ ಈ ಬೇಡಿಕೆಗಳ ಕುರಿತು ಪ್ರತಿಕ್ರಿಯಿಸಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಲು ಸರ್ಕಾರ ಹಿಂದೇಟೇನೂ ಹಾಕುತ್ತಿಲ್ಲ. ಆದರೆ ಇದಕ್ಕೆ ಕೆಲ ಷರತ್ತುಗಳಿದ್ದು, ಪ್ರಾಥಮಿಕ ತನಿಖೆಯ ನಂತರ ಮುಂದೆ ಈ ಕುರಿತು ತೀರ್ಮಾನಿಸಲಾಗುತ್ತದೆ ಎಂದಿದ್ದಾರೆ.
ಇದನ್ನೂ ಓದಿ|Praveen Nettaru | ಧೈರ್ಯ, ಸಂಯಮ ಕಳೆದುಕೊಳ್ಳಬೇಡಿ; ಹಿಂದೂ ಕಾರ್ಯಕರ್ತರಿಗೆ ಪೇಜಾವರ ಶ್ರೀ ಕರೆ