Site icon Vistara News

Praveen Nettaru | ತನಿಖೆಗೆ ಆರು ತಂಡ; 15 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

yuva morcha leader

ಮಂಗಳೂರು: ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ೧೫ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಸುಳ್ಯದಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆಗಾಗಿ ಆರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ವಶಕ್ಕೆ ಪಡೆದವರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದು, ತನಿಖೆಯ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ಹಂತಕರನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್‍ಕುಮಾರ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದು, ಅಗತ್ಯವಿರುವ ಎಲ್ಲ ಶಂಕಿತರನ್ನು ವಶಕ್ಕೆ ಪಡೆದು ಆದಷ್ಟು ಬೇಗ ಹಂತಕರನ್ನು ಬಂಧಿಸಬೇಕೆಂದು ಸೂಚಿಸಿದ್ದಾರೆ. ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಿ ಎಂದು ಅವರು ಪೊಲೀಸರಿಗೆ ಹೇಳಿದ್ದಾರೆ.

ನಿಷೇಧಾಜ್ಞೆ ಜಾರಿ

ಜಿಲ್ಲೆಯಲ್ಲಿ ಉದ್ರಿಕ್ತ ಪರಿಸ್ಥಿತಿ ಮುಂದುವರಿದಿದ್ದು, ಐದು ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಸುಳ್ಯ, ಕಡಬಾ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿಯಲ್ಲಿ ಜುಲೈ ೨೯ರ ಮಧ್ಯರಾತ್ರಿಯ ವರೆಗೆ ನಿಷೇಧಾಜ್ಷೆ ಜಾರಿಗೆ ತಂದು ಜಿಲ್ಲಾಧಿಕಾರಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | Praveen Nettaru | ಜನಸಾಗರ ನಡುವೆ ಪ್ರವೀಣ್‌ ಅಂತ್ಯ ಸಂಸ್ಕಾರ, ಮುಗಿಲು ಮುಟ್ಟಿದ ಆಕ್ರಂದನ

Exit mobile version