Site icon Vistara News

ಪ್ರವೀಣ್‌ ಹತ್ಯೆ ಪ್ರಕರಣದ ಆರೋಪಿ ಸಹೋದರನಿಂದ ಬೆದರಿಕೆ: ಹಿಂದು ಕಾರ್ಯಕರ್ತರ ಪ್ರತಿಭಟನೆ

ಪ್ರವೀಣ್‌ ಹತ್ಯೆ

ಮಂಗಳೂರು: ಹಿಂದು ಕಾರ್ಯಕರ್ತನಿಗೆ ಬೆದರಿಕೆ ಹಾಕಿರುವ, ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು‌ ಹತ್ಯೆ ಆರೋಪಿಯ ಸಹೋದರನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆ ಎದುರು ಹಿಂದು ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿ ಶಫೀಕ್ ಸಹೋದರ ಸಫ್ರೀದ್‌ ಹಿಂದು ಕಾರ್ಯಕರ್ತನಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಹಿಂದು ಕಾರ್ಯಕರ್ತರು ಆರೋಪಿಸಿದ್ದು, ಕೂಡಲೇ ಆರೋಪಿ ಸಹೋದರನನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಜುಲೈ 26ರಂದು ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿತ್ತು. ಪ್ರಕರಣವನ್ನು ಖಂಡಿಸಿ ರಾಜ್ಯಾದ್ಯಂತ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈಗಾಗಲೇ ಹತ್ತು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Theft Case | ಮಡ್ಲಕ್ಕಿ ಸೇವೆ ಅಂತಾ ಬರ್ತಾನೆ ಚಿನ್ನಾಭರಣ ಕದ್ದೊಯ್ತಾನೆ; ಟೆಂಪಲ್ ಕಳ್ಳ ಅರೆಸ್ಟ್!

Exit mobile version