Site icon Vistara News

ಜನವರಿ 12ರಂದು ಕರ್ನಾಟಕಕ್ಕೆ ನರೇಂದ್ರ ಮೋದಿ; ಯುವಜನೋತ್ಸವಕ್ಕೆ ಭರ್ಜರಿ ತಯಾರಿ ಆರಂಭ

preperatiory meeting regarding national youth festival in hubli

ಬೆಳಗಾವಿ: ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ಯವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯಕ್ಕೆ ಈ ಅವಕಾಶ ದೊರೆತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.

ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಕ್ರೀಡಾ ಸಚಿವ ನಾರಾಯಣಗೌಡ, ಕಂದಾಯ ಸಚಿವ ಆರ್. ಅಶೋಕ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಇಲಾಖಾ ಕಾರ್ಯದರ್ಶಿಗಳೂ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕೋವಿಡ್ ನಿಯಂತ್ರಣ- ನಾಳೆ ಸಭೆ :
ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ನಾಳೆ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ | UNESCO List | ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಮೋದಿ ಜನಿಸಿದ ವಡ್ನಗರ್ ಪಟ್ಟಣ!

Exit mobile version