Site icon Vistara News

ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ; ಕನ್ನಡದಲ್ಲಿಯೇ ಟ್ವೀಟ್

ಮೋದಿ

ನವ ದೆಹಲಿ: ಕರ್ನಾಟಕದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಕನ್ನಡ ಹಾಡುಗಳು ಮತ್ತು ಸಂಗೀತಾಭಿಮಾನಿಗಳ ಮನೆಮಾತಾಗಿದ್ದರು. ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ ಮತ್ತು ಕನ್ನಡ ಕಾವ್ಯದ ಮುತ್ತುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನಗಳಾಗಿವೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ. ಎಂದು ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಹಿನ್ನೆಲೆ ಗಾಯನಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಕನ್ನಡದ ಮೊದಲ ಗಾಯಕ ಎಂಬ ಹೆಗ್ಗಳಿಕೆ ಸುಬ್ಬಣ್ಣ ಪಡೆದಿದ್ದಾರೆ. ಇದಿಷ್ಟೇ ಅಲ್ಲದೇ ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಇವರು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇಂತಹ ಖ್ಯಾತ ಗಾಯಕರ ಅಗಲಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ, ವಿವಿಧ ಸಚಿವರು ಹಾಗೂ ಚಿತ್ರರಂಗದ ಹಲವರು ಈಗಾಗಲೇ ಸಂತಾಪ ಸೂಚಿಸಿದ್ದಾರೆ.

Exit mobile version