ಬಳ್ಳಾರಿ: ವಿಧಾನಸಭಾ ಚುನಾವಣೆ (karnataka election 2023) ಹಿನ್ನೆಲೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಮೇ 5ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಬಳ್ಳಾರಿಗೆ ಭೇಟಿ ನೀಡಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಲಕ್ಷ್ಮಣ ಹೇಳಿದರು.
ನಗರದ ಹೊರವಲಯದ ಕಪ್ಪಗಲ್ ರಸ್ತೆಯ ಸಮಾವೇಶ ನಡೆಯುವ ಸ್ಥಳದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಐದು ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.
ಇದನ್ನೂ ಓದಿ: Gold rate : ಬಂಗಾರದ ದರದಲ್ಲಿ 880 ರೂ. ಜಿಗಿತ, ಬೆಳ್ಳಿ ದರ 1,300 ರೂ. ಹೆಚ್ಚಳ
ಒಂದು ಲಕ್ಷಕ್ಕೂ ಅಧಿಕ ಜನ ಭಾಗಿ
ಒಂದು ಲಕ್ಷಕ್ಕೂ ಅಧಿಕ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಎಂಭತ್ತು ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಅಂದು ಮಧ್ಯಾಹ್ನ ಎರಡು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ತುಮಕೂರಿಗೆ ತೆರಳಲಿದ್ದಾರೆ ಎಂದ ಅವರು, ಈಗಾಗಲೇ ಸಮಾವೇಶಕ್ಕೆ ಬೃಹತ್ ಪೆಂಡಾಲ್ ಅನ್ನು ಹಾಕಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್‌ಗೆ ಅಸೂಯೆ
ವಿಶ್ವ ಮೆಚ್ಚಿದ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷದ ಹಾವು ಎಂದು ಟೀಕಿಸಿದರೆ, ಶಾಸಕ ಪ್ರಿಯಾಂಕ್ ಖರ್ಗೆ ನಾಲಾಯಕ್ ಎಂದು ಟೀಕಿಸುತ್ತಿದ್ದಾರೆ. ಬಿಜೆಪಿ ಅಭಿವೃದ್ಧಿ ನೋಡಿ ಕಾಂಗ್ರೆಸ್‌ನವರು ಅಸೂಯೆ ಪಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: Karnataka Election: ಮೊಳಕಾಲ್ಮೂರಿನಲ್ಲಿ 6.39 ಕೋಟಿ ರೂ. ಮೌಲ್ಯದ ಚಿನ್ನ, ವಜ್ರಾಭರಣ ವಶ
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮುರಹರಿಗೌಡ, ಮಾಜಿ ಸಂಸದ ಜಿತೇಂದ್ರ ರೆಡ್ಡಿ, ಸಿದ್ದೇಶ ಯಾದವ್, ರಾಜೀವ್ ತೊಗರಿ ಹಾಗೂ ಇತರರಿದ್ದರು.