Site icon Vistara News

Bus Accident: ಮಂತ್ರಾಲಯಕ್ಕೆ ತೆರಳಿದ್ದ ಖಾಸಗಿ ಬಸ್ ಅಪಘಾತ; 31ಕ್ಕೂ ಹೆಚ್ಚು ಮಂದಿಗೆ ಗಾಯ

Private bus accident near manvi

#image_title

ರಾಯಚೂರು: ಮಂತ್ರಾಲಯಕ್ಕೆ ತೆರಳಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು (Bus Accident), ಘಟನೆಯಲ್ಲಿ 31ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಬಸ್‌ ಡಿಕ್ಕಿಯಾಗಿದ್ದು, ನಂತರ ರಸ್ತೆ ಪಕ್ಕದ ಜಮೀನಿಗೆ ನುಗ್ಗಿದೆ.

ಬೆಂಗಳೂರು ಮೂಲದ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಾಲಕನಿಗೆ ಹೊಟ್ಟೆ ಮೇಲೆ ಗಂಭೀರ ಗಾಯವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರಿನ ‌ಕುರುಬರಹಳ್ಳಿ ಬಸ್ ಚಾಲಕರ ಸಂಘದ ಸದಸ್ಯರು, ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಮಂತ್ರಾಲಯಕ್ಕೆ ತೆರಳಿದ್ದರು. ರಾಯರ ದರ್ಶನದ ಬಳಿಕ ಮರಳಿ ಬೆಂಗಳೂರಿಗೆ ಹೋಗುವಾಗ ಅಪಘಾತ ನಡೆದಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder Case: ಸಂಸಾರದಲ್ಲಿ ವೈಮನಸ್ಸು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ ಪತಿ

Exit mobile version