ಉತ್ತರ ಕನ್ನಡ
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
Honnavar News: ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ಅಪಘಾತ ನಡೆದಿದೆ. ಬಸ್ ಚಾಲಕ ಅಪಘಾತ ತಡೆಯಲು ಬ್ರೇಕ್ ಹಾಕಿದ್ದು, ಈ ವೇಳೆ ಕಾರಿಗೆ ಡಿಕ್ಕಿಹೊಡೆದು ಬಸ್ ಪಲ್ಟಿಯಾಗಿದೆ.
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ನಡೆದಿದೆ. ಅಪಘಾತದಲ್ಲಿ (Honnavar News) ಗಾಯಗೊಂಡಿರುವ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.
ಮಂಕಿ ಬಳಿ ಒಳರಸ್ತೆಗೆ ಕಾರು ತಿರುಗಿಸುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಹಿಂದಿನಿಂದ ಬಸ್ ಗುದ್ದಿದೆ. ಬಸ್ ಚಾಲಕ ಅಪಘಾತ ತಡೆಯಲು ಯತ್ನಿಸಿದನಾದರೂ ಕಾರಿಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು ಕಾರಿನಲ್ಲಿದ್ದ ಜಿಲ್ಲಾ ಪಂಚಾಯಿತಿ ಗುತ್ತಿಗೆದಾರ ಮೋಹನ್ ನಾಯ್ಕ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ | Theft Case: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮಹಿಳೆಯರ ತಲೆ ಒಡೆದು ದರೋಡೆ ಮಾಡಿದ ಕಿರಾತಕಿ
ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ; ಪಿಡಿಒ ಅಮಾನತು
ರಾಯಚೂರು: ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣದಲ್ಲಿ ನಿರ್ಲಕ್ಷ್ಯ ಆರೋಪದಲ್ಲಿ ಜಾಗೀರ ಜಾಡಲದಿನ್ನಿ ಪಿಡಿಒ ರೇಣುಕಾ ಎಂಬುವವರನ್ನು ಅಮಾನತು ಮಾಡಲಾಗಿದೆ.
ದೇವದುರ್ಗ ತಾಲೂಕು ರೇಕಲಮರಡಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಪೈಪ್‌ಲೈನ್ ಒಡೆದು ಕಲುಷಿತ ನೀರು ಸರಬರಾಜು ಆಗಿತ್ತು. ಆ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಒಬ್ಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಘಟನೆಗೆ ಪಿಡಿಒ ನಿರ್ಲಕ್ಷ್ಯ ಕಾರಣ, ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು. ದೇವದುರ್ಗ ಇಒ ನೀಡಿದ ವರದಿ ಆಧರಿಸಿ, ಇಲಾಖಾ ವಿಚಾರಣೆ ಕಾಯ್ದಿರಿಸಿ ಪಿಡಿಒ ರೇಣುಕಾ ಅವರನ್ನು ರಾಯಚೂರು ಜಿ.ಪಂ. ಸಿಇಒ ಶಶಿಧರ್ ಕುರೇರ್ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ
Sirsi News: ತಮಿಳುನಾಡಿಗೆ ಕಾವೇರಿ ನೀರು; ಆಡಳಿತ, ವಿರೋಧ ಪಕ್ಷಗಳ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ: ಬೇಕ್ರಿ ರಮೇಶ್
Sirsi News: ಜಲಾನಯನ ಪ್ರದೇಶದ ರೈತರ ಹಿತ ಬಲಿಕೊಟ್ಟು ರಾಜ್ಯ ಸರ್ಕಾರವು, ತಮಿಳುನಾಡಿಗೆ ನೀರು ಹರಿಬಿಟ್ಟಿದ್ದು, ಇಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿರಸಿ: ಜಲಾನಯನ ಪ್ರದೇಶದ ರೈತರ (Farmers) ಹಿತ ಬಲಿಕೊಟ್ಟು ರಾಜ್ಯ ಸರ್ಕಾರ (State Government) ತಮಿಳುನಾಡಿಗೆ (Tamilnadu) ನೀರು ಹರಿಬಿಟ್ಟಿದ್ದು, ಇಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾವೇರಿ ನಿಯಂತ್ರಣ ಮಂಡಳಿ ಹಾಗೂ ಪ್ರಾಧಿಕಾರವು ಸುಪ್ರೀಂ ಕೋರ್ಟ್‌ಗೆ ಕರ್ನಾಟಕದ ಸಂಕಷ್ಟ ಪರಿಸ್ಥಿತಿ ಮನವರಿಕೆ ಮಾಡಿಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಮಸ್ಯೆ ಬಗೆಹರಿಸಲು ಮುಂದಾಗಬೇಕು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು, ಸಂಸದರು, ಕಾವೇರಿ ವಿವಾದ ಬಗೆಹರಿಸಲು ವಿಫಲವಾಗಿದ್ದು, ಉನ್ನತ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ ಅವರು, ಕಾವೇರಿ ನೀರು ಸಂಕಷ್ಟ ಸೂತ್ರ ಮತ್ತು ರಾಷ್ಟ್ರೀಯ ವೈಜ್ಞಾನಿಕ ಜಲ ನೀತಿ ರೂಪಿಸುವಂತೆ ಮಧ್ಯಸ್ಥಿಕೆ ವಹಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: Venus Mission: ಇಸ್ರೋಗೆ ‘ಶುಕ್ರ’ದೆಸೆ; ಚಂದ್ರ, ಸೂರ್ಯನ ಬಳಿಕ ಶುಕ್ರನತ್ತ ಚಿತ್ತ; ಉಡಾವಣೆ ಯಾವಾಗ?
ಕಾವೇರಿ ವಿಷಯದಲ್ಲಿ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕಾವೇರಿ ನೀರು ಸಂಕಷ್ಟ ಸೂತ್ರ ರಚಿಸುವಂತೆ ಮಾಡಬೇಕಿದೆ. ಒಂದು ಎಕರೆಗೆ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕಿದೆ. ಕಾವೇರಿ, ಮಹದಾಯಿ, ಕೃಷ್ಣ ಪ್ರತಿಯೊಬ್ಬ ಕನ್ನಡಿಗನ ಹೃದಯಬಡಿತವಾಗಬೇಕು ಎಂದರು.
ಪ್ರಸಕ್ತ ವರ್ಷದಲ್ಲಿ ಮಳೆ ಕೊರತೆಯಿಂದ ಬೆಳೆ ಉಳಿಸಿಕೊಳ್ಳಲು ರೈತರು ಪರಿತಪಿಸುತ್ತಿದ್ದಾರೆ. ಕಾವೇರಿ ನೀರು ತಮಿಳುನಾಡಿಗೆ ಬಿಡುವುದರಿಂದ 8 ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕಾವೇರಿ ನಮ್ಮದು ಎಂಬ ದಿಟ್ಟ ನಿರ್ಧಾರ ಕೈಗೊಂಡು ನೀರು ಬಿಡುವುದನ್ನು ಸ್ಥಗಿತಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕಾವೇರಿ ನಿರ್ವಹಣಾ ಪ್ರಾಧಿಕಾರವು 18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲು ಸೂಚನೆ ನೀಡಿದೆ. ನಮ್ಮ ರಾಜ್ಯವು ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ನೀರು ಬಿಟ್ಟರೆ 2 ತಿಂಗಳಿನಲ್ಲಿ ಕಾವೇರಿ ಬರಿದಾಗುತ್ತದೆ. ಮುಂದು ಏನು ಎಂಬ ಭಯ ಕಾಡುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ರೈತರು ಸಂಕಷ್ಟಕ್ಕೆ ಸಿಲುಕಿರುವಾಗ ಕನ್ನಡ ಚಲನಚಿತ್ರರಂಗದ ನಟ-ನಟಿಯರು, ಕಿರುತೆರೆ ರಂಗದವರು ತಮಗೆ ಸಂಬಂಧಪಟ್ಟ ವಿಷಯವೇ ಅಲ್ಲ ಎಂದು ಮೌನವಾಗಿದ್ದಾರೆ. ಹೋರಾಟಕ್ಕೆ ಇಳಿಯಬೇಕು. ಇಲ್ಲದಿದ್ದರೆ ಚಿತ್ರರಂಗದವರು ಕನ್ನಡ ವಿರೋಧಿತನ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: World Cup 2023 : ವಿಶ್ವ ಕಪ್ ತಂಡದಲ್ಲಿ ಆರ್. ಅಶ್ವಿನ್ಗೆ ಸ್ಥಾನ? ಮತ್ತೆ ಸ್ಪಿನ್ನರ್ಗಳ ಆಯ್ಕೆ ಗೊಂದಲ
ಸುದ್ದಿಗೊಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಡಾ.ದೇವನಹಳ್ಳಿ ದೇವರಾಜ, ರಾಜ್ಯ ಸಂಚಾಲಕ ಮೋಹನದಾಸ ನಾಯಕ, ಜಿಲ್ಲಾ ಸಂಚಾಲಕ ಪುರಂದರ ನಾಯ್ಕ, ಮೈಸೂರು ಜಿಲ್ಲಾ ಸಮಿತಿ ಸದಸ್ಯ ಪುಟ್ಟಸ್ವಾಮಿ, ಮಂಡ್ಯ ಜಿಲ್ಲಾ ಸಮಿತಿ ಸದಸ್ಯ ಜೋಸೆಫ್ ರಾಮು ಇದ್ದರು.
ಉಡುಪಿ
Weather report : ಇನ್ನೆರಡು ದಿನ ಉತ್ತರ ಕರ್ನಾಟಕದ 7 ಜಿಲ್ಲೆ ಸೇರಿ ಕರಾವಳಿಯಲ್ಲಿ ಭಾರಿ ಮಳೆ
Weather report : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು: ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಈ ಭಾಗದಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ. ಇದಲ್ಲದೆ, ಕರಾವಳಿ ಜಿಲ್ಲೆಗಳಲ್ಲಿ ಸಹ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ಹೇಳಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಇದನ್ನೂ ಓದಿ: Mandya Accident: ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಕಾರು; ನಾಲ್ವರು ಸ್ಥಳದಲ್ಲೇ ದುರ್ಮರಣ
ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ
ಬುಧವಾರ (ಸೆ. 27) ಮತ್ತು ಗುರುವಾರ (ಸೆ. 28) ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ. ಉಳಿದ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ. ಹೆಚ್ಚಿನ ಸಮಯ ಮೋಡ ಕವಿದ ವಾತಾವರಣ ಇರಲಿದೆ.
ಮಲೆನಾಡಲ್ಲೂ ಸಣ್ಣ ಮಳೆ
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಬಾರಿ ಭಾರಿ ಪ್ರಮಾಣದ ಮಳೆಯ ನಿರೀಕ್ಷೆ ಮಾಡುವಂತಿಲ್ಲ. ಇಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: Elephant Attack : ಹಾಲು ತರಲು ಹೋಗುತ್ತಿದ್ದ ವೃದ್ಧನ ಬೆನ್ನಟ್ಟಿ ದಾಳಿ ಮಾಡಿದ ಕಾಡಾನೆ ಹಿಂಡು, ಗಂಭೀರ ಗಾಯ
ಬೆಂಗಳೂರಿನಲ್ಲಿ ರಾತ್ರಿ ಮಳೆ ಭರ್ಜರಿ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮತ್ತು ಗುರುವಾರ ಬೆಳಗ್ಗೆ ಹೆಚ್ಚಿನ ಸಮಯ ಬಿಸಿಲಿದ್ದರೂ ನಂತರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯಂದು ಭಾರಿ ಪ್ರಮಾಣದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಹೀಗಾಗಿ ಸಂಜೆ ವೇಳೆಗೆ ಪ್ರಯಾಣ ಮಾಡುವವರು ಸೂಕ್ತ ತಯಾರಿ ಮಾಡಿಕೊಂಡಿರಲು ಸೂಚಿಸಲಾಗಿದೆ. ಇನ್ನು ಮಳೆ ವೇಳೆ ಸಂಚಾರ ದಟ್ಟಣೆ ಹೆಚ್ಚುವ ಸಂಭವವೂ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉತ್ತರ ಕನ್ನಡ
Uttara Kannada News: ಅನಿವಾರ್ಯವಿದ್ದಲ್ಲಿ ಮಾತ್ರ ಹೊಸ ಕಟ್ಟಡ ಕಾಮಗಾರಿ ಕೈಗೊಳ್ಳಿ; ರಿತೇಶ್ ಕುಮಾರ ಸಿಂಗ್
Uttara Kannada News: ಕಾರವಾರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿ.ಪಂ.ನ ಆಡಳಿತಾಧಿಕಾರಿ ರಿತೀಶ್ ಕುಮಾರ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.
ಕಾರವಾರ: ಜಿಲ್ಲಾ ಪಂಚಾಯಿತಿ (Zilla Panchayat) ಸೇರಿದಂತೆ ಜಿಲ್ಲೆಯ ಎಲ್ಲ ಇಲಾಖೆಗಳಲ್ಲಿ (Departments) ಅತ್ಯಂತ ತುರ್ತು ಮತ್ತು ಅನಿವಾರ್ಯತೆ ಇದ್ದಲ್ಲಿ ಮಾತ್ರ ಹೊಸ ಕಟ್ಟಡ ಕಾಮಗಾರಿಗಳನ್ನು (New Building Work) ಕೈಗೊಂಡು ಸರ್ಕಾರದ ಅನುದಾನ ಸದುಪಯೋಗ ಮಾಡಿ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿ.ಪಂ.ನ ಆಡಳಿತಾಧಿಕಾರಿ ರಿತೀಶ್ ಕುಮಾರ್ ಸಿಂಗ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಜಿ.ಪಂ. ಕ್ರಿಯಾ ಯೋಜನೆ ಸಿದ್ಧಪಡಿಸುವಾಗ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡದೇ, ಪ್ರಸ್ತುತ ಇರುವ ಕಟ್ಟಡಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಅದೇ ಕಟ್ಟಡದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಿ ಎಂದರು.
ಶಾಲೆ, ಅಂಗನವಾಡಿ ಮತ್ತು ಗ್ರಂಥಾಲಯಗಳಿಗೆ ಅಗತ್ಯವಿರುವ ಕಲಿಕೋಪಕರಣಗಳು, ಪುಸ್ತಕಗಳನ್ನು ಖರೀದಿಸಿ. ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ಇಲ್ಲದೇ ಇದ್ದಲ್ಲಿ ಸಮೀಪದ ಶಾಲೆಯ ಕಟ್ಟಡಕ್ಕೆ ಗ್ರಂಥಾಲಯವನ್ನು ಸ್ಥಳಾಂತರಿಸುವಂತೆ ತಿಳಿಸಿದರು.
ಇದನ್ನೂ ಓದಿ: Benefits Of Ajwain: ಅಜವಾನವೆಂಬ ಘಾಟುಮದ್ದಿನ ಬಗ್ಗೆ ನಿಮಗೆ ಗೊತ್ತಿದೆಯೆ?
ಜಿಲ್ಲೆಯ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಯ ಸೇರಿದಂತೆ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚನೆ ನೀಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಜಿಲ್ಲೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು, ಯಾವುದೇ ಅರ್ಹ ಫಲಾನುಭವಿ ಸೌಲಭ್ಯದಿಂದ ವಂಚಿತರಾಗಬಾರದು. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಗಮನಹರಿಸುವಂತೆ ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಎಲ್ಲ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆ ಆಗುವಂತೆ ನೋಡಿಕೊಳ್ಳಬೇಕು, ಬ್ಯಾಂಕ್ ಖಾತೆ ಜೋಡಣೆಯಲ್ಲಿ ಸಮಸ್ಯೆಗಳಿದ್ದಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳ ಜತೆಗೆ ಸಮನ್ವಯದೊಂದಿಗೆ ಸಮಸ್ಯೆ ಬಗೆಹರಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗೃಹಜ್ಯೋತಿ ಯೋಜನೆಯಡಿ ಕೂಡಾ ಎಲ್ಲ ಅರ್ಹರಿಗೆ ಸೌಲಭ್ಯ ದೊರಕಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ, ಶಿರಸಿ ತಾಲೂಕಿನ ದೊಡ್ನಳ್ಳಿ, ಹುಲೇಕಲ್, ಅಂಡಗಿ, ಯಲ್ಲಾಪುರ ತಾಲೂಕಿನ ಉಮ್ಮಚಗಿ ಹೊನ್ನಾವರ ತಾಲೂಕಿನ ಕಾಸರಕೋಡು, ಹೆರಾಂಗಡಿ, ಕಾರವಾರ ತಾಲೂಕಿನ ಕಡವಾಡ, ಸುಪಾ ವಿಭಾಗದ ಜೋಯಿಡಾ, ಹಳಿಯಾಳದ ಸಾಂಬ್ರಾಣಿ ಮತ್ತು ಆರ್ಲವಾಡ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಜಿಲ್ಲಾ ಮಟ್ಟದ ಮಾಸಿಕ ಉತ್ತಮ ಪಿಡಿಓ ಪ್ರಶಸ್ತಿ ಪಡೆದ ಹಿತ್ಲಳ್ಳಿ ಗ್ರಾ.ಪಂ. ಪಿಡಿಓ ಜಿ.ಜಿ. ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ: Namma Metro : ಮೆಟ್ರೋಗೆ ಚೀನಾದಿಂದ ಬರಲಿದೆ 12 ಬೋಗಿ; 2024ಕ್ಕೆ ಚಾಲಕ ರಹಿತ ಓಡಾಟ
ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಉತ್ತರ ಕನ್ನಡ
Uttara Kannada News: ಕಾರವಾರ ಬಳಿ ಹೆದ್ದಾರಿ ಸುರಂಗ ಮಾರ್ಗ ಶೀಘ್ರದಲ್ಲೇ ಸಂಚಾರಕ್ಕೆ ಲಭ್ಯವಾಗುವ ಸಾಧ್ಯತೆ
Uttara Kannada News ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾಗಿರುವ ಹೆದ್ದಾರಿ ಸುರಂಗ ಮಾರ್ಗ ಶೀಘ್ರದಲ್ಲೇ ಓಡಾಟಕ್ಕೆ ಲಭ್ಯವಾಗುವ ಲಕ್ಷಣಗಳು ಕಂಡುಬಂದಿದ್ದು, ಟನಲ್ ಮಾರ್ಗ ವಾಹನ ಸವಾರರಿಗೆ ಸುರಕ್ಷಿತವಾಗಿದೆ ಎನ್ನುವುದನ್ನು ಐಆರ್‌ಬಿ ಕಂಪನಿ ಮನವರಿಕೆ ಮಾಡಿದ ಬೆನ್ನಲ್ಲೇ ಟನಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿರುವ ಸಾಧ್ಯತೆಗಳಿವೆ.
ಕಾರವಾರ: ಮಳೆಗಾಲದಲ್ಲಿ ನೀರು ಸೋರಿಕೆಯಿಂದಾಗಿ ಬಂದ್ ಆಗಿದ್ದ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ (National Highway) 66ಕ್ಕೆ ನಿರ್ಮಿಸಲಾಗಿರುವ ಹೆದ್ದಾರಿ ಸುರಂಗ ಮಾರ್ಗ (Tunnel) ಶೀಘ್ರದಲ್ಲೇ ಓಡಾಟಕ್ಕೆ ಲಭ್ಯವಾಗುವ ಲಕ್ಷಣಗಳು ಕಂಡುಬಂದಿದೆ. ಟನಲ್ ಮಾರ್ಗ ವಾಹನ ಸವಾರರಿಗೆ ಸುರಕ್ಷಿತವಾಗಿದೆ ಎನ್ನುವುದನ್ನು ಐಆರ್‌ಬಿ ಕಂಪನಿ ಮನವರಿಕೆ ಮಾಡಿದ ಬೆನ್ನಲ್ಲೇ ಟನಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ (Green Signal) ಸಿಕ್ಕಿರುವ ಸಾಧ್ಯತೆಗಳಿವೆ.
ಕಳೆದ ಎರಡು ತಿಂಗಳಿನಿಂದ ಬಂದ್ ಆಗಿರುವ ಟನಲ್ ಮಾರ್ಗವನ್ನು ಸಂಚಾರಕ್ಕೆ ಮುಕ್ತಗೊಳಿಸಿಕೊಡುವಂತೆ ಸಾಕಷ್ಟು ಒತ್ತಡಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ ಇದೀಗ ಹೆದ್ದಾರಿ ಅಗಲೀಕರಣ ಗುತ್ತಿಗೆ ಕಂಪನಿ ಐಆರ್‌ಬಿ ಮಂಗಳವಾರ ಟನಲ್ ಎದುರು ಹಾಕಲಾಗಿದ್ದ ಜಲ್ಲಿ ಕಲ್ಲುಗಳನ್ನು ತೆರವುಗೊಳಿಸಿದ್ದು ಕೇವಲ ಬ್ಯಾರಿಕೇಡ್‌ಗಳನ್ನು ಮಾತ್ರ ಉಳಿಸಿರುವುದು ಯಾವುದೇ ಕ್ಷಣದಲ್ಲಿ ಹೆದ್ದಾರಿ ಟನಲ್ ಮಾರ್ಗದಲ್ಲಿ ಸಂಚಾರ ಆರಂಭವಾಗುವ ಮುನ್ಸೂಚನೆ ನೀಡಿದೆ.
ಜುಲೈ 8 ರಂದು ವಿಸ್ತಾರ ನ್ಯೂಸ್‌ನ ವೆಬ್‌ಸೈಟ್‌ನಲ್ಲಿ ಟನಲ್ ಸೋರಿಕೆಯಾಗುತ್ತಿರುವ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಇದಾದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಸ್ಥಳೀಯ ಶಾಸಕ ಸತೀಶ ಸೈಲ್ ಟನಲ್ ಅವ್ಯವಸ್ಥೆ ಹಿನ್ನೆಲೆಯಲ್ಲಿ ಸಂಚಾರ ಬಂದ್ ಮಾಡಿ ಫಿಟ್ನೆಸ್ ಸರ್ಟಿಫಿಕೇಟ್ ನೀಡುವಂತೆ ಸೂಚನೆ ನೀಡಿದ್ದರು. ಇದಾದ ಬಳಿಕ ತಿಂಗಳು ಕಳೆದರೂ ಟನಲ್ ಸಂಚಾರ ಆರಂಭವಾಗದ್ದರಿಂದ ಕಾರವಾರದಿಂದ ಬಿಣಗಾ ಭಾಗಕ್ಕೆ ಸುಮಾರು 4 ಕಿ.ಮೀ ಹೆಚ್ಚುವರಿಯಾಗಿ ಸುತ್ತುವರಿದು ತೆರಳುವಂತಾಗಿದ್ದು ಪ್ರತಿನಿತ್ಯ ಪ್ರಯಾಣಿಸುವ ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಗಿತ್ತು. ಅಲ್ಲದೇ ಟನಲ್ ಸುಸ್ಥಿತಿಯಲ್ಲಿದ್ದರೂ ಸಹ ಸಂಚಾರ ಆರಂಭಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿತ್ತು.
ಇದನ್ನೂ ಓದಿ: Benefits Of Ajwain: ಅಜವಾನವೆಂಬ ಘಾಟುಮದ್ದಿನ ಬಗ್ಗೆ ನಿಮಗೆ ಗೊತ್ತಿದೆಯೆ?
ಈಗಾಗಲೇ ಪುಣೆಯ ಟೆಕ್ನಾಲಜಿ ಯುನಿವರ್ಸಿಟಿ ಟನಲ್‌ನ್ನು ಪರಿಶೀಲಿಸಿ ಸುರಂಗ ಮಾರ್ಗ ಸುರಕ್ಷಿತವಾಗಿದೆ ಎಂದು ವರದಿ ಸಲ್ಲಿಸಿದೆ ಎನ್ನಲಾಗಿದ್ದು ಆದರೂ ಸಂಚಾರ ಆರಂಭಿಸದಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ವಾರದೊಳಗಾಗಿ ಟನಲ್ ಸಂಚಾರ ಆರಂಭಿಸದಿದ್ದಲ್ಲಿ ಸೆ.29 ರಂದು ಒತ್ತಾಯಪೂರ್ವಕವಾಗಿ ಟನಲ್‌ನ್ನು ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಜಿಲ್ಲಾಡಳಿತಕ್ಕೆ ಟನಲ್‌ನ ಫಿಟ್ನೆಸ್ ಕುರಿತ ವರದಿ ತಲುಪಿದೆ ಎನ್ನಲಾಗಿದ್ದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸುರಂಗ ಮಾರ್ಗ ತೆರೆಯಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಸಹ ಟನಲ್ ಸುರಕ್ಷಿತವಾಗಿದೆ ಎನ್ನುವ ಭರವಸೆಯನ್ನು ಐಆರ್‌ಬಿ ಕಂಪನಿ ನೀಡಿದಲ್ಲಿ, ಜಿಲ್ಲಾಡಳಿತದ ಅನುಮತಿ ಪಡೆದು ಸುರಂಗವನ್ನು ಸಂಚಾರಕ್ಕೆ ಮುಕ್ತಗೊಳಿಸಲಿ ಎಂದು ತಿಳಿಸಿದ್ದಾರೆ. ಫಿಟ್ನೆಸ್ ಪ್ರಮಾಣಪತ್ರವನ್ನು ಜಿಲ್ಲಾಧಿಕಾರಿಗಳಿಗೇ ಸಲ್ಲಿಕೆ ಮಾಡಿದರೂ ಸಹ ಯಾವುದೇ ಆಕ್ಷೇಪ ಇಲ್ಲವಾಗಿದ್ದು, ಜನರ ಜೀವದ ಸುರಕ್ಷತೆ ಕುರಿತು ಭರವಸೆ ನೀಡಿದಲ್ಲಿ ಸಂಚಾರ ಆರಂಭಿಸಬಹುದು ಎಂದು ಜನತಾದರ್ಶನದ ವೇಳೆ ಮಾಧ್ಯಮಗಳಿಗೆ ತಿಳಿಸಿದ್ದರು.
ಇದನ್ನೂ ಓದಿ: Namma Metro : ಮೆಟ್ರೋಗೆ ಚೀನಾದಿಂದ ಬರಲಿದೆ 12 ಬೋಗಿ; 2024ಕ್ಕೆ ಚಾಲಕ ರಹಿತ ಓಡಾಟ
ಈ ನಿಟ್ಟಿನಲ್ಲಿ ಟನಲ್‌ನ ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಂಡಿರುವ ಐಆರ್‌ಬಿ ಇದೀಗ ಜೆಸಿಬಿ ಮೂಲಕ ಎರಡೂ ಟನಲ್‌ಗಳ ಎದುರು ಹಾಕಿದ್ದ ಜೆಲ್ಲಿ ಕಲ್ಲುಗಳನ್ನು ತೆರವುಗೊಳಿಸಿ ರಸ್ತೆಯನ್ನು ಸ್ವಚ್ಛಗೊಳಿಸಿದೆ. ಸದ್ಯ ಬ್ಯಾರಿಕೇಡ್‌ಗಳನ್ನು ಮಾತ್ರ ಟನಲ್ ಎದುರು ಇರಿಸಿದ್ದು ಯಾವುದೇ ಕ್ಷಣದಲ್ಲಿ ಹೆದ್ದಾರಿ ಸುರಂಗ ಮಾರ್ಗ ಸಂಚಾರಕ್ಕೆ ಲಭ್ಯವಾಗುವ ಸಾಧ್ಯತೆಗಳಿವೆ.
-
ಪ್ರಮುಖ ಸುದ್ದಿ22 hours ago
Iraq Fire Accident: ಮದುವೆ ಮನೆಯಲ್ಲಿ ಅಗ್ನಿ ದುರಂತ; ಮದುಮಕ್ಕಳು ಸೇರಿ 114 ಜನರ ಸಾವು!
-
ಪ್ರಮುಖ ಸುದ್ದಿ12 hours ago
German Shepherd: ಸೀಕ್ರೆಟ್ ಸರ್ವಿಸ್ ಏಜೆಂಟ್ನಿಗೆ ಕಚ್ಚಿದ ಅಮೆರಿಕ ಅಧ್ಯಕ್ಷ ಬೈಡನ್ ಅವರ ‘ಕಮಾಂಡರ್’!
-
ವಿದೇಶ13 hours ago
Most expensive wedding: ಜಗತ್ತಿನ ದುಬಾರಿ ವಿವಾಹ ಯಾವುದು ಗೊತ್ತೆ? ಖರ್ಚಾಗಿದ್ದು ಇಷ್ಟು ಕೋಟಿ ರೂ.
-
ಸುವಚನ1 hour ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕ್ರೈಂ17 hours ago
ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!
-
ಕರ್ನಾಟಕ13 hours ago
Car Accident: ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವು
-
ದೇಶ14 hours ago
Venus Mission: ಇಸ್ರೋಗೆ ‘ಶುಕ್ರ’ದೆಸೆ; ಚಂದ್ರ, ಸೂರ್ಯನ ಬಳಿಕ ಶುಕ್ರನತ್ತ ಚಿತ್ತ; ಉಡಾವಣೆ ಯಾವಾಗ?
-
ಕ್ರಿಕೆಟ್13 hours ago
IND vs AUS: ಅಂತಿಮ ಪಂದ್ಯದಲ್ಲಿ ತಿರುಗಿ ಬಿದ್ದ ಆಸೀಸ್; ಭಾರತಕ್ಕೆ ಬೃಹತ್ ಮೊತ್ತದ ಗುರಿ