Private Schools: ಖಾಸಗಿ ಶಾಲೆಗಳಿಂದ 100 ಕೋಟಿ ವಸೂಲಿ; ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ ನೀಡಿದ ಕೃಪಾ - Vistara News

ಕರ್ನಾಟಕ

Private Schools: ಖಾಸಗಿ ಶಾಲೆಗಳಿಂದ 100 ಕೋಟಿ ವಸೂಲಿ; ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ ನೀಡಿದ ಕೃಪಾ

Private Schools: ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬಿಬಿಎಂಪಿ ಸಂವಿಧಾನ ಬಾಹಿರವಾಗಿ ತೆರಿಗೆ ವಸೂಲಿ ಮಾಡಿದೆ. ಸುಮಾರು 100 ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ, ಈಗ ಕಟ್ಟಿಸಿಕೊಂಡಿರುವ ದುಡ್ಡು ವಾಪಸ್ ಕೊಡಿ. ಇಲ್ಲವಾದಲ್ಲಿ ನಾವು ಕೋರ್ಟ್ ಮೆಟ್ಟಿಲು ಹತ್ತುತ್ತೇವೆ ಎಂದು ಕೃಪಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Private Schools
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖಾಸಗಿ ಶಾಲೆಗಳ (Private Schools) ಮಾನ್ಯತೆ ನವೀಕರಣ ಸಂಬಂಧ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ. ಪ್ರತಿ ವರ್ಷ ಹೊಸ ಹೊಸ ನಿಯಮಗಳನ್ನು ಜಾರಿ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ 100 ಕೋಟಿ ಲೂಟಿ ಮಾಡಿದ್ದಾರೆ. ಖಾಸಗಿ ಶಾಲಾ ಶಿಕ್ಷಕರ ಹಣದಲ್ಲಿ ಸರ್ಕಾರಿ ಶಿಕ್ಷಕರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ಮೂಲಕ ಖಾಸಗಿ ಶಾಲಾ ಶಿಕ್ಷಕರ ಕಲ್ಯಾಣ ನಿಧಿ ದುರ್ಬಳಕೆ ಆಗುತ್ತಿದ್ದು, ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ (ಕೃಪಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಅಳುವಂತಹ ಸರ್ಕಾರ ಭ್ರಷ್ಟ ಸರ್ಕಾರ ಆಗಿ ಕಾಣುತ್ತಿದೆ. ಇದನ್ನು ವಿರೋಧಿಸಿ ಮುಂದಿನ ಸೋಮವಾರದಿಂದ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುತ್ತೇವೆ. 1995ರಿಂದ ಇಲ್ಲಿವರೆಗೆ ಕನ್ನಡ ರಕ್ಷಣೆ ಹೆಸರಲ್ಲಿ ಅನ್ಯಾಯ ಮಾಡಲಾಗುತ್ತಿದೆ. ಶೈಕ್ಷಣಿಕ ಅಭಿವೃದ್ಧಿ ಏನು ಆಗುತ್ತಿದೆ ಅಂತ ಸರ್ಕಾರ ಸ್ಪಷ್ಟಪಡಿಸಬೇಕು. ಉತ್ತಮ ಶಿಕ್ಷಕ ಪ್ರಶಸ್ತಿ ಕೇವಲ ಸರ್ಕಾರಿ ಶಿಕ್ಷಕರಿಗೆ ಏಕೆ? ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಇಲ್ಲವೇ? ಬಿಬಿಎಂಪಿ ಕಮಿಷನರ್ ಸಂವಿಧಾನ ಬಾಹಿರವಾಗಿ ತೆರಿಗೆ ವಸೂಲಿ ಮಾಡಿದ್ದಾರೆ. ಸುಮಾರು 100 ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ, ಈಗ ಕಟ್ಟಿಸಿಕೊಂಡಿರುವ ದುಡ್ಡು ವಾಪಸ್ ಕೊಡಿ. ಇಲ್ಲವಾದಲ್ಲಿ ನಾವು ಕೋರ್ಟ್ ಮೆಟ್ಟಿಲು ಹತ್ತುತ್ತೇವೆ. ಆರ್‌ಟಿಇ ದುರ್ಬಲ ಮಾಡುವ ಹುನ್ನಾರ ನಡೆಯುತ್ತಿದೆ, ಆರ್‌ಟಿಇ ಮೊದಲು ಹೇಗೆ ಇತ್ತೋ ಹಾಗೆ ಮರು ಅನುಷ್ಠಾನ ಮಾಡಬೇಕ ಎಂದು ಶಿಕ್ಷಣ ಇಲಾಖೆಯನ್ನು ಒತ್ತಾಯ ಮಾಡಿದರು.

ಇದನ್ನೂ ಓದಿ | NEET PG 2024 Result: ಬಹುನಿರೀಕ್ಷಿತ ನೀಟ್-ಪಿಜಿ ಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

ಶೀಘ್ರದಲ್ಲೇ ಏರಲಿದೆ ಬಸ್ ಟಿಕೆಟ್ ದರ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ!

Bus Fare Hike
Bus Fare Hike

ಬೆಂಗಳೂರು: ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ರಾಜ್ಯ ಸರ್ಕಾರ, ಇದೀಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್‌ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ ಎಂಬ ವಿಪಕ್ಷನಾಯಕ ಆರ್‌.ಅಶೊಕ್‌ ಅವರ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದು, ಟಿಕೆಟ್ ದರ (Bus Fare Hike) ಏರಿಕೆ ಏಕೆ ಅನಿವಾರ್ಯ ಎಂಬ ಬಗ್ಗೆ ವಿವರಣೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರು, ಅಶೋಕ್ ರವರೇ, ನೀವು ಸಾರಿಗೆ ಸಚಿವರಾಗಿದ್ದವರು, ಸಾರಿಗೆ ಸಂಸ್ಥೆಗಳ‌ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ ಶೇ.10.5 ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ? 2020ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ ಶೇ.12 ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ? ಆಗ ಯಾಕೆ ವಿರೋಧ ವ್ಯಕ್ತ ಪಡಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

2021ರ ನ.15ರಂದು ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆರ್ ಶ್ರೀನಿವಾಸಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಸಮಿತಿಯನ್ನು ತಮ್ಮದೇ ಬಿ.ಜೆ.ಪಿ ಸರ್ಕಾರ ರಚಿಸಿತ್ತು. ಅನೇಕ ಶಿಫಾರಸುಗಳೊಂದಿಗೆ ಪ್ರಮುಖವಾಗಿ, ಬಸ್ ಪ್ರಯಾಣ ದರವನ್ನು Institutional Arrangement for Revision of Bus Fares ಶೀರ್ಷಿಕೆಯಡಿಯಲ್ಲಿ KERC ಮಾದರಿಯಲ್ಲಿ ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು, ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ಸದರಿ ಸಮಿತಿಯು ವರದಿ ನೀಡಿದ್ದು, ನೀವು ಕ್ಯಾಬೆನೆಟ್ ಮಂತ್ರಿಯಾಗಿದ್ದಾಗ ಯಾಕೆ ಈ ವರದಿಯನ್ನು ತಿರಸ್ಕರಿಸಲಿಲ್ಲ. ತಮ್ಮದೇ ಸರ್ಕಾರ ಅಂಗೀಕಾರ ಮಾಡಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳಲು ಹೊರಟ್ಟಿದ್ದೀರಾ ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ಸರ್ಕಾರವು 2000ರ ಸೆ.30ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಎಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಮಾಹಿತಿಯೇ ತಮಗೆ ಇಲ್ಲವೇ? ತಮ್ಮದೇ ಬಿ.ಜೆ.ಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು 5900 ಕೋಟಿ ರೂ. ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | NEET PG 2024 Result: ಬಹುನಿರೀಕ್ಷಿತ ನೀಟ್-ಪಿಜಿ ಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

ನನಗೆ ರಾಜಕೀಯವೇ ಮುಖ್ಯ. ಸಾರಿಗೆ ಸಂಸ್ಥೆಗಳು ಉಳಿದರೇನು? ಮುಳುಗಿದರೆ ನನಗೇನು? ಅನ್ನುವ ಮನಸ್ಥಿತಿಯೇ ತಿಳಿಯದಾಗಿದೆ. ಅಶೋಕ್ ರವರೇ ತಾವು ಕೂಡ ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲಾ‌‌ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟ ಮೈಗೂಡಿಸಿಕೊಂಡು ಮೈತುಂಬ ಸಾಲ ಮಾಡಿಕೊಂಡಿದ್ದವನೊಬ್ಬ ಸಾಲ ತೀರಿಸಲು ಸರಗಳ್ಳತನಕ್ಕೆ ಇಳಿದು ಇದೀಗ ಸಿಕ್ಕಿಬಿದ್ದಿದ್ದಾನೆ. ಕತ್ರಿಗುಪ್ಪೆ ನಿವಾಸಿ ಕುಮಾರ್ ಬಂಧಿತ. ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಗೇಮ್ ಆಡುತ್ತಿದ್ದ ಆರೋಪಿ ಕುಮಾರ್ ಈ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದ. ಬೆಟ್ಟಿಂಗ್‌ ಕಾರಣಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಸಾಲ ತೋರಿಸಲು ಸರಗಳ್ಳತನಕ್ಕೆ ಇಳಿದಿದ್ದ.

VISTARANEWS.COM


on

Chain snatching Case
Koo

ಬೆಂಗಳೂರು: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದವರು ಹಣಕ್ಕಾಗಿ ಯಾವ ಅಡ್ಡ ದಾರಿಯನ್ನಾದರೂ ಹಿಡಿಯಲು ತಯಾರಿರುತ್ತಾರೆ ಎನ್ನುವುದಕ್ಕೆ ಈತನೇ ಉತ್ತಮ ನಿದರ್ಶನ. ಹೌದು, ಆನ್‌ಲೈನ್‌ ಬೆಟ್ಟಿಂಗ್ ಚಟ ಮೈಗೂಡಿಸಿಕೊಂಡು ಮೈತುಂಬ ಸಾಲ ಮಾಡಿಕೊಂಡಿದ್ದವನೊಬ್ಬ ಮಾಡಿದ ಸಾಲ ತೀರಿಸಲು ಸರಗಳ್ಳತನಕ್ಕೆ (Chain snatching case)  ಇಳಿದು ಇದೀಗ ಸಿಕ್ಕಿಬಿದ್ದಿದ್ದಾನೆ. ಕತ್ರಿಗುಪ್ಪೆ ನಿವಾಸಿ ಕುಮಾರ್ ಬಂಧಿತ ಆರೋಪಿ.

ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಗೇಮ್ ಆಡುತ್ತಿದ್ದ ಆರೋಪಿ ಕುಮಾರ್ ಈ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದ. ಬೆಟ್ಟಿಂಗ್‌ ಕಾರಣಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಹಣ ಸಾಲ ಕೊಟ್ಟವರು ವಾಪಾಸ್ ನೀಡುವಂತೆ ಕೇಳತೊಡಗಿದಾಗ ಕುಮಾರ್‌ ಸರಗಳ್ಳತನಕ್ಕೆ ಇಳಿದಿದ್ದ.

ವಿಳಾಸ ಕೇಳುವ ನೆಪ

ಸರಗಳ್ಳತನಕ್ಕೆ ಕುಮಾರ್‌ ಖತರ್ನಾಕ್‌ ಯೋಜನೆ ರೂಪಿಸಿದ್ದ. ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಸರಕಳವು ಮಾಡುತ್ತಿದ್ದ. ಗಿರಿನಗರದ ಬೈರಪ್ಪ ಲೇಔಟ್‌ನಲ್ಲಿ ಕೃತ್ಯ ಎಸಗಿದ್ದ ವೇಳೆ ಸಿಕ್ಕಿಬಿದ್ದಿದ್ದ. ಸದ್ಯ ಕುಮಾರ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರಿಂದ ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಕುಮಾರ್‌ ಮಾಡಿದ ಸಾಲ ತೀರಿಸಲು ಆಟೋವನ್ನೂ ಅಡವಿಟ್ಟಿದ್ದ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸಾಲದ ಸಂಗತಿ ಬೆಳೆಕಿಗೆ ಬಂದಿದ್ದು, ತನಿಖೆ ಮುಂದುವರಿದಿದೆ.

ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದವ ಬಂಧನ

ಬೆಂಗಳೂರು: ಸುಲಭವಾಗಿ ಹಣ ಮಾಡಲು ಖತರ್ನಾಕ್ ಪ್ಲ್ಯಾನ್‌ ಮಾಡಿದ್ದ ವಂಚಕನೊಬ್ಬ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದು ಕಾರು ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಜಮೀಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಖತರ್ನಾಕ್ ಪ್ಲ್ಯಾನ್‌?

ಹಾಗಾದರೆ ಈತ ಮಾಡುತ್ತಿದ್ದ ಖತರ್ನಾಕ್ ಕೆಲಸ ಏನು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಕಾರು ಚಾಲಕರೇ ಈತನ ಟಾರ್ಗೆಟ್. ಕಾರಿಗೆ ಬೇಕಂದೇ ಬೈಕ್ ಟಚ್ ಮಾಡಿ ಹಣ ಕೀಳುತ್ತಿದ್ದ. ʼʼಕಾರು ಹೋಗುವಾಗ ಜಮೀಲ್‌ ತನ್ನ ಬೈಕ್‌ ಅನ್ನು ಬೇಕಂತಲೇ ಟಚ್ ಮಾಡುತ್ತಿದ್ದ. ಬಳಿಕ ದೂರು ಕೊಡುತ್ತೇನೆ ಎಂದು ಬೆದರಿಸಿ ಚಾಲಕರಿಂದ ಹಣ ಕೀಳುತ್ತಿದ್ದʼʼ ಎಂದು ಪೊಲೀಸರು ತಿಳಿಸಿದ್ದಾರೆ. ʼʼಕಾರು ಟಚ್ ಅಗಿದೆ ಎಂದು ಮಧ್ಯ ರಸ್ತೆಯಲ್ಲಿ ಅಡ್ಡ ಹಾಕುತ್ತಿದ್ದ. ಡ್ಯಾಮೇಜ್ ಸರಿಪಡಿಸಲು ದುಡ್ಡು ಕೊಡಿ ಎಂದು ಬಲ ಪ್ರಯೋಗ ಮಾಡುತ್ತಿದ್ದ. ದುಡ್ಡು ಕೊಡದೆ ಹೋದ್ರೆ ದೂರು ಕೊಡ್ತೀನಿ ಎಂದು ಹೆದರಿಸುತ್ತಿದ್ದʼʼ ಎಂದು ಹೇಳಿದ್ದಾರೆ.

ಈತನ ಮೇಲೆ ಇದುವರೆಗೆ ಒಟ್ಟು 17 ಪ್ರಕರಣ ದಾಖಲಾಗಿದೆ. ರಾಜ್ಯದ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ವಿವಿಧ ಪ್ರಕರಣಗಳಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಕ್ಕಿ ಬಿದ್ದಿದ್ದು ಹೇಗೆ?

ಜಯನಗರ ಠಾಣಾ ವ್ಯಾಪ್ತಿಯಲ್ಲೂ ಕೂಡ ಇದೇ ರೀತಿ ಮಾಡಿ 30,000 ರೂ. ಪಡೆದಿದ್ದ ಜಮೀಲ್‌ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ಜಯನಗರ ಠಾಣೆಗೆ ಕಾರು ಚಾಲಕ ದೂರು ಕೊಟ್ಟಿದ್ದ. ಹೀಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Chain snatching Case : ಜಾಬ್‌ಗೆ ಹೋಗುವ ಹೆಣ್ಮಕ್ಕಳೇ ಟಾರ್ಗೆಟ್‌‌ ; ಸರಗಳ್ಳರ ಗ್ಯಾಂಗ್‌ಗೆ ಸಖತ್ ಗೂಸಾಇದನ್ನೂ ಓದಿ:

Continue Reading

ಕರ್ನಾಟಕ

Polluted Water: ಕಲುಷಿತ ನೀರಿಗೆ ಮತ್ತೊಂದು ಬಲಿ; ಚಿಕಿತ್ಸೆ ಫಲಿಕಾರಿಯಾಗದೆ ಮಹಿಳೆ ಸಾವು

Polluted Water: ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟದಲ್ಲಿ ನಡೆದಿದೆ. ಚಂದ್ರಮ್ಮ (60) ಮೃತ ಮಹಿಳೆ. ಕಲುಷಿತ ನೀರು ಸೇವಿಸಿ ತೀವ್ರ ಆಸ್ಪಸ್ಥರಾಗಿದ್ದ ಚಂದ್ರಮ್ಮ ಅವರನ್ನು ಆಗಸ್ಟ್‌ 21ರಂದು ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಆಗಸ್ಟ್‌ 25) ಮೃತಪಟ್ಟಿದ್ದಾರೆ.

VISTARANEWS.COM


on

Polluted Water
Koo

ದಾವಣಗೆರೆ: ರಾಜ್ಯದಲ್ಲಿ ಕಲುಷಿತ ನೀರು (Polluted Water) ಸೇವಿಸಿ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕ ಸೃಷ್ಟಿಸಿದೆ. ಈ ಪಟ್ಟಿಗೆ ದಾವಣಗೆರೆಯ ಮಹಿಳೆಯೊಬ್ಬರು ಸೇರಿದ್ದಾರೆ. ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟದಲ್ಲಿ ಈ ಘಟನೆ ನಡೆದಿದೆ.

ಕಲುಷಿತ ನೀರು ಕುಡಿದು ಗ್ರಾಮದ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಚಂದ್ರಮ್ಮ (60) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಕಲುಷಿತ ನೀರು ಸೇವಿಸಿ ತೀವ್ರ ಆಸ್ಪಸ್ಥರಾಗಿದ್ದ ಚಂದ್ರಮ್ಮ ಅವರನ್ನು ಆಗಸ್ಟ್‌ 21ರಂದು ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಆಗಸ್ಟ್‌ 25) ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಾಂತಿ ಬೇಧಿ, ಜ್ವರದಿಂದ ಬಳಲುತ್ತಿದ್ದ ಚಂದ್ರಮ್ಮ ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನುಳಿದ ಆರು ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಕುಡಿಯುವ ನೀರಿನ ಪೈಪು ಒಡೆದು ಚರಂಡಿ ನೀರು ಮಿಶ್ರಣವಾದ ಹಿನ್ನಲೆ ನೀರು ಕಲುಷಿತಗೊಂಡಿತ್ತು. ಘಟನೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಜಾಗೃತಿ ಮೂಡಿಸಿದ್ದರು.

ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ದುರಂತ

ಕೆಲವು ದಿನಗಳ ಹಿಂದೆಯಷ್ಟೇ ಕಲುಷಿತ ನೀರು ಸೇವಿಸಿ 6 ಮಂದಿ ಮೃತಪಟ್ಟ ಘಟನೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದಿತ್ತು. ಆ ದುರಂತ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಜೂನ್‌ನಲ್ಲಿ ಕಲುಷಿತ ನೀರು ಸೇವಿಸಿ ಕೋಲಾರ ಮತ್ತು ಬೆಳಗಾವಿಯಲ್ಲಿ ಇಬ್ಬರು ಮೃತಪಟ್ಟಿದ್ದರು. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದ ಹೊಳೆವ್ವಾ ಬಾಳಪ್ಪ ಧನದವರ (38) ಮತ್ತು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿಯ ವೆಂಕಟರಮಣಪ್ಪ (60) ಮೃತರು.

ಅದಕ್ಕೂ ಮುನ್ನ ಕಲುಷಿತ ನೀರು ಸೇವಿಸಿ ಉಂಟಾದ ಅಸ್ವಸ್ಥೆಯಿಂದ ಒಂದೇ ಗ್ರಾಮದಲ್ಲಿ ನಾಲ್ವರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ವರದಿಯಾಗಿತ್ತು. ವೀರಪ್ಪಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಿಂದ ನಾಲ್ವರು ಮೃತಪಟ್ಟಿದ್ದರು. ಅದೇ ರೀತಿ ವೀರಾಪುರ ಗ್ರಾಮದಲ್ಲಿಯೂ ‌ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಗಂಗಮ್ಮ (70) ಮುನಿನಾರಾಯಣಮ್ಮ (74), ಲಕ್ಷ್ಮಮ್ಮ (70). ನರಸಿಂಹಪ್ಪ (75) ಎಂಬವರು ಮೃತಪಟ್ಟಿದ್ದರು.

ಗ್ರಾಮ ಪಂಚಾಯತ್‌ ವತಿಯಿಂದ ಪೂರೈಸಿದ್ದ ನೀರು ಕಲುಷಿತಗೊಂಡಿದ್ದ ಕಾರಣ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಆರೂಪಿಸಿದ್ದ ಗ್ರಾಮಸ್ಥರು ನೀರು ಸರಬರಾಜು ಮಾಡಿರುವ ಕೋಟಗಲ್ ಗ್ರಾಮ ಪಂಚಾಯತ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಒಂದೇ ವಾರದಲ್ಲಿ ಗ್ರಾಮದಲ್ಲಿ ನಾಲ್ಕು ಸರಣಿ ಸಾವಾದರೂ ಪಿಡಿಒ ಎಚ್ಚೆತ್ತುಕೊಂಡಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದರು. ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ವಾಸನೆ ಬರುತ್ತಿವೆ. ಅದನ್ನೆಲ್ಲ ರಿಪೇರಿ ಮಾಡದ ಕಾರಣ ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುತ್ತಿದೆ. ಅದರಿಂದಾಗಿಯೇ ಸಮಸ್ಯೆ ಎದುರಾಗಿದೆ ಎಂದೂ ದೂರಿದ್ದರು.

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Continue Reading

ಕರ್ನಾಟಕ

Wild Animals Attack: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

Wild Animals Attack: ರಾಜ್ಯದ ವಿವಿಧ ಭಾಗಗಳಲ್ಲಿ ಕಾಡಾನೆ ದಾಳಿ ಹೆಚ್ಚಾಗಿದ್ದು, ಇದೀಗ ಶಿವಮೊಗ್ಗದಲ್ಲಿ ರೈತರೊಬ್ಬರು ಬಲಿಯಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಆಲದೇವರಹೊಸೂರು ಗ್ರಾಮದ ಹನುಮಂತಪ್ಪ (40) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಅಡಿಕೆ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ.

VISTARANEWS.COM


on

Wild Animals Attack
ಸಾಂದರ್ಭಿಕ ಚಿತ್ರ
Koo

ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಕಾಡಾನೆ ದಾಳಿ ಹೆಚ್ಚಾಗಿದ್ದು, ಇದೀಗ ಶಿವಮೊಗ್ಗದಲ್ಲಿ ರೈತರೊಬ್ಬರು ಬಲಿಯಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಆಲದೇವರಹೊಸೂರು ಗ್ರಾಮದ ಹನುಮಂತಪ್ಪ (40) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ (Wild Animals Attack).

ಅಡಿಕೆ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಈ ವೇಳೆ ಹನುಮಂತಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶೆಟ್ಟಿಹಳ್ಳಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಟ್ಯಾಂಕರ್-ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

ಕೊಡಗು: ಟ್ಯಾಂಕರ್ ಹಾಗೂ ಲಾರಿ ನಡುವೆ ಶನಿವಾರ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾರೆ. ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿ ಅಪಘಾತ ಸಂಭವಿಸಿದ್ದು, ಲಾರಿಯಲ್ಲಿದ್ದ ಸುಂಟಿಕೊಪ್ಪ ನಿವಾಸಿ ಲೋಡರ್ ರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯಲ್ಲಿದ್ದ ಮತ್ತೋರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಕುಶಾಲನಗರ ಕಡೆಯಿಂದ ಸುಂಟಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಮತ್ತು ಮಡಿಕೇರಿ ಕಡೆಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಪರಸ್ಪರ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಲಾರಿ ಚಾಲಕ 7ನೇ ಹೊಸಕೋಟೆಯ ಜಬ್ಬಾರ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇವರನ್ನು ಕುಶಾಲನಗರ ಸರ್ಕಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ, ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿನಲ್ಲಿ ಈ ಅಪಘಾತ ನಡೆದಿದೆ.

ಸರಗಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ

ಮಂಡ್ಯ: ಹಾಡಹಗಲೇ ಸರಗಳ್ಳತನಕ್ಕೆ ಯತ್ನಿಸಿ ಸರಗಳ್ಳನೊಬ್ಬ ಸಿಕ್ಕಿಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಕೆ‌.ಆರ್‌.ಪೇಟೆ ಪಟ್ಟಣದಲ್ಲಿ ನಡೆದಿದೆ. ಕೃಷ್ಣಾಪುರ ಗ್ರಾಮದ ಶ್ರೀನಿವಾಸ ಸಿಕ್ಕಿ ಬಿದ್ದ ಸರಗಳ್ಳ‌. ಅಂಗಡಿಗೆ ಸಿಗರೇಟ್ ಕೊಳ್ಳುವ ನೆಪದಲ್ಲಿ ಬಂದಿದ್ದ ಶ್ರೀನಿವಾಸ ಸರಗಳ್ಳತನಕ್ಕೆ ಯತ್ನಿಸಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಅಂಗಡಿಯಲ್ಲಿದ್ದ ಮಹಿಳೆ ಕತ್ತಿನಿಂದ ಸರ ಕದ್ದ ಶ್ರೀನಿವಾಸ ಪರಾರಿಗೆ ಯತ್ನಿಸಿದ್ದ. ಈ ವೇಳೆ ಮಹಿಳೆಯ ಚೀರಾಟ ಕೇಳಿ ಸ್ಥಳದಲ್ಲಿದ್ದ ಜನರು ಸಹಾಯಕ್ಕೆ ಧಾವಿಸಿದರು. ಬಳಿಕ ಪರಾರಿಗೆ ಯತ್ನಿಸುತ್ತಿದ್ದ ಕಳ್ಳನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಸಿಕ್ಕಿಬಿದ್ದ ಸರಗಳ್ಳನಿಗೆ ಗೂಸಾ ಕೊಟ್ಟು ಪೊಲೀಸರ ವಶಕ್ಕೆ ನೀಡಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಡಿಕೇರಿಯಲ್ಲಿ ಕಾರು-ಬಸ್‌ ಡಿಕ್ಕಿ

ಕೊಡಗು: ಮಡಿಕೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ 275ರ ಬೋಯಿಕೇರಿಯಲ್ಲಿ ಅಪಘಾತ (Road Accident) ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು‌ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ ಮಗುವಿಗೆ ಗಾಯವಾಗಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣಿಕರನ್ನು ಹೊತ್ತು ಮೈಸೂರಿನಿಂದ ಮಡಿಕೇರಿಗೆ ಬರುತ್ತಿತ್ತು. ಇತ್ತ ಕಾರಿನಲ್ಲಿ ಒಟ್ಟು ಆರು ಮಂದಿ ಕೇರಳದಿಂದ ಊಟಿಗೆ ತೆರಳುತ್ತಿದ್ದರು. ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿದ್ದು, ಕಾರು ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: Wild Animals Attack : ಅತ್ತೆ ಮನೆಗೆ ಬಂದ ಅಳಿಯನ ಅಟ್ಟಾಡಿಸಿದ ಕಾಡಾನೆ! ಮುಂದೇನಾಯ್ತು

Continue Reading

ಪ್ರಮುಖ ಸುದ್ದಿ

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Unified pension scheme: ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

VISTARANEWS.COM


on

unified pension scheme
Koo


ಬೆಂಗಳೂರು: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಹೊಸ ಯುಪಿಎಸ್ ಪಿಂಚಣಿ ಯೋಜನೆ(Unified pension scheme)ಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ(Karnataka government employees) ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ತೃಪ್ತಿಕರವಲ್ಲ ಎಂದು ಈ ಸಂಘಗಳು ಅಭಿಪ್ರಾಯಪಟ್ಟಿವೆ

ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಮತ್ತೊಮ್ಮೆ ಪುನರ್ ಪರಿಶೀಲಿಸಿ ಶೇಕಡ 100ರಷ್ಟು ಪಿಂಚಣಿ ನೀಡಲು ಆಗ್ರಹಿಸುತ್ತೇವೆ ಎಂದು ಷಡಾಕ್ಷರಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಪೂರ್ಣವಾಗಿ ವಿರೋಧಿಸುತ್ತದೆ ಎಂದು ಈ ಸಂಘದ ಅಧ್ಯಕ್ಷ ಶಾಂತಾರಾಮ್ ಅವರು ಹೇಳಿಕೆ ನೀಡಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

ಏನಿದು ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆ?:

ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ. UPS ಅಡಿಯಲ್ಲಿ, ನಿಗದಿತ ಪಿಂಚಣಿಯು ಕಳೆದ 12 ತಿಂಗಳುಗಳ ಅವಧಿಯಲ್ಲಿ ಪಡೆದ ಸರಾಸರಿ ಮೂಲ ವೇತನದ 50 ಪ್ರತಿಶತದಷ್ಟಿರುತ್ತದೆ.ಇದು ಖಚಿತವಾದ ಕುಟುಂಬ ಪಿಂಚಣಿಯನ್ನು ಸಹ ಹೊಂದಿರುತ್ತದೆ, ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತವಾಗಿದೆ. ನೌಕರನ ಮರಣದ ಸಂದರ್ಭದಲ್ಲಿ ಅದನ್ನು ತಕ್ಷಣವೇ ನೀಡಲಾಗುವುದು. ಕನಿಷ್ಠ 10 ವರ್ಷಗಳ ಸೇವೆಯ ನಂತರ ನಿವೃತ್ತಿಯ ಸಂದರ್ಭದಲ್ಲಿ, UPS ತಿಂಗಳಿಗೆ 10,000 ರೂ.ಗಳ ಖಚಿತವಾದ ಕನಿಷ್ಠ ಪಿಂಚಣಿಯನ್ನು ಒದಗಿಸುತ್ತದೆ.

ಯುಪಿಎಸ್‌ಗೆ ಯಾರು ಸೇರಬಹುದು?

“ಕೇಂದ್ರ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯಲ್ಲಿ (ಎನ್‌ಪಿಎಸ್) ಉಳಿಯಲು ಅಥವಾ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಸೇರಲು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತಾರೆ” ಎಂದು ವೈಷ್ಣವ್ ಹೇಳಿದರು. ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ ನಿಯೋಜಿತ ಟಿ ವಿ ಸೋಮನಾಥನ್ ಅವರು, “ಇದು ಈಗಾಗಲೇ ಎನ್‌ಪಿಎಸ್ ಅಡಿಯಲ್ಲಿ 2004 ರಿಂದ ನಿವೃತ್ತರಾದ ಎಲ್ಲರಿಗೂ ಅನ್ವಯಿಸುತ್ತದೆ. ಹೊಸ ಯೋಜನೆಯು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆಯಾದರೂ, NPS ಪ್ರಾರಂಭವಾದ ಸಮಯದಿಂದ ನಿವೃತ್ತರಾದ ಪ್ರತಿಯೊಬ್ಬರೂ ಮತ್ತು ಮಾರ್ಚ್ 31, 2025 ರವರೆಗೆ ನಿವೃತ್ತರಾದವರು ಸೇರಿದಂತೆ, UPS ನ ಈ ಎಲ್ಲಾ ಐದು ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: NPS v/s UPS: ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು NPSಗಿಂತ ಹೇಗೆ ಭಿನ್ನ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Continue Reading
Advertisement
Rohit Sharma
ಕ್ರೀಡೆ32 mins ago

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Chain snatching Case
ಕ್ರೈಂ43 mins ago

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Polluted Water
ಕರ್ನಾಟಕ1 hour ago

Polluted Water: ಕಲುಷಿತ ನೀರಿಗೆ ಮತ್ತೊಂದು ಬಲಿ; ಚಿಕಿತ್ಸೆ ಫಲಿಕಾರಿಯಾಗದೆ ಮಹಿಳೆ ಸಾವು

Wild Animals Attack
ಕರ್ನಾಟಕ2 hours ago

Wild Animals Attack: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

unified pension scheme
ಪ್ರಮುಖ ಸುದ್ದಿ4 hours ago

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Sunita Williams
ದೇಶ4 hours ago

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

karnataka weather forecast
ಮಳೆ4 hours ago

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರ ಬಹು ದಿನಗಳ ಕನಸು ನನಸು; ಕುಟುಂಬದ ಆಪ್ತರಿಂದ ಶುಭ ಸುದ್ದಿ

Rahul Gandhi
ದೇಶ10 hours ago

Rahul Gandhi: ಮಿಸ್‌ ಇಂಡಿಯಾ ಪಟ್ಟಿಯಲ್ಲಿ ದಲಿತ, ಬುಡಕಟ್ಟು, ಒಬಿಸಿ ಮಹಿಳೆಯರು ಇಲ್ಲವೇ ಇಲ್ಲ-ರಾಹುಲ್‌ ಗಾಂಧಿ ಹೊಸ ಆರೋಪ

Sudha Murthy
ಬೆಂಗಳೂರು11 hours ago

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ19 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌