Site icon Vistara News

Private Schools: ಖಾಸಗಿ ಶಾಲೆಗಳಿಂದ 100 ಕೋಟಿ ವಸೂಲಿ; ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ ನೀಡಿದ ಕೃಪಾ

Private Schools

ಬೆಂಗಳೂರು: ಖಾಸಗಿ ಶಾಲೆಗಳ (Private Schools) ಮಾನ್ಯತೆ ನವೀಕರಣ ಸಂಬಂಧ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ. ಪ್ರತಿ ವರ್ಷ ಹೊಸ ಹೊಸ ನಿಯಮಗಳನ್ನು ಜಾರಿ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ 100 ಕೋಟಿ ಲೂಟಿ ಮಾಡಿದ್ದಾರೆ. ಖಾಸಗಿ ಶಾಲಾ ಶಿಕ್ಷಕರ ಹಣದಲ್ಲಿ ಸರ್ಕಾರಿ ಶಿಕ್ಷಕರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ಮೂಲಕ ಖಾಸಗಿ ಶಾಲಾ ಶಿಕ್ಷಕರ ಕಲ್ಯಾಣ ನಿಧಿ ದುರ್ಬಳಕೆ ಆಗುತ್ತಿದ್ದು, ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ (ಕೃಪಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಅಳುವಂತಹ ಸರ್ಕಾರ ಭ್ರಷ್ಟ ಸರ್ಕಾರ ಆಗಿ ಕಾಣುತ್ತಿದೆ. ಇದನ್ನು ವಿರೋಧಿಸಿ ಮುಂದಿನ ಸೋಮವಾರದಿಂದ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುತ್ತೇವೆ. 1995ರಿಂದ ಇಲ್ಲಿವರೆಗೆ ಕನ್ನಡ ರಕ್ಷಣೆ ಹೆಸರಲ್ಲಿ ಅನ್ಯಾಯ ಮಾಡಲಾಗುತ್ತಿದೆ. ಶೈಕ್ಷಣಿಕ ಅಭಿವೃದ್ಧಿ ಏನು ಆಗುತ್ತಿದೆ ಅಂತ ಸರ್ಕಾರ ಸ್ಪಷ್ಟಪಡಿಸಬೇಕು. ಉತ್ತಮ ಶಿಕ್ಷಕ ಪ್ರಶಸ್ತಿ ಕೇವಲ ಸರ್ಕಾರಿ ಶಿಕ್ಷಕರಿಗೆ ಏಕೆ? ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಇಲ್ಲವೇ? ಬಿಬಿಎಂಪಿ ಕಮಿಷನರ್ ಸಂವಿಧಾನ ಬಾಹಿರವಾಗಿ ತೆರಿಗೆ ವಸೂಲಿ ಮಾಡಿದ್ದಾರೆ. ಸುಮಾರು 100 ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ, ಈಗ ಕಟ್ಟಿಸಿಕೊಂಡಿರುವ ದುಡ್ಡು ವಾಪಸ್ ಕೊಡಿ. ಇಲ್ಲವಾದಲ್ಲಿ ನಾವು ಕೋರ್ಟ್ ಮೆಟ್ಟಿಲು ಹತ್ತುತ್ತೇವೆ. ಆರ್‌ಟಿಇ ದುರ್ಬಲ ಮಾಡುವ ಹುನ್ನಾರ ನಡೆಯುತ್ತಿದೆ, ಆರ್‌ಟಿಇ ಮೊದಲು ಹೇಗೆ ಇತ್ತೋ ಹಾಗೆ ಮರು ಅನುಷ್ಠಾನ ಮಾಡಬೇಕ ಎಂದು ಶಿಕ್ಷಣ ಇಲಾಖೆಯನ್ನು ಒತ್ತಾಯ ಮಾಡಿದರು.

ಇದನ್ನೂ ಓದಿ | NEET PG 2024 Result: ಬಹುನಿರೀಕ್ಷಿತ ನೀಟ್-ಪಿಜಿ ಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

ಶೀಘ್ರದಲ್ಲೇ ಏರಲಿದೆ ಬಸ್ ಟಿಕೆಟ್ ದರ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ!

ಬೆಂಗಳೂರು: ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ರಾಜ್ಯ ಸರ್ಕಾರ, ಇದೀಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್‌ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ ಎಂಬ ವಿಪಕ್ಷನಾಯಕ ಆರ್‌.ಅಶೊಕ್‌ ಅವರ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದು, ಟಿಕೆಟ್ ದರ (Bus Fare Hike) ಏರಿಕೆ ಏಕೆ ಅನಿವಾರ್ಯ ಎಂಬ ಬಗ್ಗೆ ವಿವರಣೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರು, ಅಶೋಕ್ ರವರೇ, ನೀವು ಸಾರಿಗೆ ಸಚಿವರಾಗಿದ್ದವರು, ಸಾರಿಗೆ ಸಂಸ್ಥೆಗಳ‌ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ ಶೇ.10.5 ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ? 2020ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ ಶೇ.12 ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ? ಆಗ ಯಾಕೆ ವಿರೋಧ ವ್ಯಕ್ತ ಪಡಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

2021ರ ನ.15ರಂದು ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆರ್ ಶ್ರೀನಿವಾಸಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಸಮಿತಿಯನ್ನು ತಮ್ಮದೇ ಬಿ.ಜೆ.ಪಿ ಸರ್ಕಾರ ರಚಿಸಿತ್ತು. ಅನೇಕ ಶಿಫಾರಸುಗಳೊಂದಿಗೆ ಪ್ರಮುಖವಾಗಿ, ಬಸ್ ಪ್ರಯಾಣ ದರವನ್ನು Institutional Arrangement for Revision of Bus Fares ಶೀರ್ಷಿಕೆಯಡಿಯಲ್ಲಿ KERC ಮಾದರಿಯಲ್ಲಿ ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು, ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ಸದರಿ ಸಮಿತಿಯು ವರದಿ ನೀಡಿದ್ದು, ನೀವು ಕ್ಯಾಬೆನೆಟ್ ಮಂತ್ರಿಯಾಗಿದ್ದಾಗ ಯಾಕೆ ಈ ವರದಿಯನ್ನು ತಿರಸ್ಕರಿಸಲಿಲ್ಲ. ತಮ್ಮದೇ ಸರ್ಕಾರ ಅಂಗೀಕಾರ ಮಾಡಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳಲು ಹೊರಟ್ಟಿದ್ದೀರಾ ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ಸರ್ಕಾರವು 2000ರ ಸೆ.30ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಎಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಮಾಹಿತಿಯೇ ತಮಗೆ ಇಲ್ಲವೇ? ತಮ್ಮದೇ ಬಿ.ಜೆ.ಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು 5900 ಕೋಟಿ ರೂ. ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | NEET PG 2024 Result: ಬಹುನಿರೀಕ್ಷಿತ ನೀಟ್-ಪಿಜಿ ಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

ನನಗೆ ರಾಜಕೀಯವೇ ಮುಖ್ಯ. ಸಾರಿಗೆ ಸಂಸ್ಥೆಗಳು ಉಳಿದರೇನು? ಮುಳುಗಿದರೆ ನನಗೇನು? ಅನ್ನುವ ಮನಸ್ಥಿತಿಯೇ ತಿಳಿಯದಾಗಿದೆ. ಅಶೋಕ್ ರವರೇ ತಾವು ಕೂಡ ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲಾ‌‌ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ ಎಂದು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

Exit mobile version