ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ (Karnataka Politics) ಕೆಲವೊಂದು ಮಹತ್ವ ತೀರ್ಮಾನಗಳನ್ನು ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ತೆಗೆದುಕೊಳ್ಳುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಕನಿಷ್ಠ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಪಣ ತೊಟ್ಟಿರುವ ಕಾಂಗ್ರೆಸ್ ಆ ನಿಟ್ಟಿನಲ್ಲಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಯಾರು ಅಭ್ಯರ್ಥಿಯಾಗಬೇಕು ಎಂಬ ಬಗ್ಗೆ ಸಹ ಈಗಲೇ ಚರ್ಚೆ ಆಗುತ್ತಿದೆ. ಇನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪವೂ ಕೇಳಿಬಂದಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ರಾಜ್ಯದ ಪ್ರಮುಖ ನಾಯಕರಿಗೆ ಹೈಕಮಾಂಡ್‌ನಿಂದ ಕರೆ ಬಂದಿದ್ದು, ಬುಧವಾರ (ಆಗಸ್ಟ್ 2) ನವ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಹಲವರು ಭಾಗಿಯಾಗಲಿದ್ದಾರೆ. ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆ (Minister Priyank Kharge) ತಮ್ಮ ರಿಪೋರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಎರಡನೇ ತಿಂಗಳ ವರ್ಕ್ ರಿಪೋರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿರುವ ಅವರು, ಈ ಬಗ್ಗೆ ಟ್ವೀಟ್ ಮಾಡಿ ಬರೆದುಕೊಂಡಿದ್ದಾರೆ.
ಅವರ ಟ್ವೀಟ್‌ನಲ್ಲೇನಿದೆ?
“ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ, ಜನರಿಗೆ ಹೆಚ್ಚೆಚ್ಚು ಉತ್ತರದಾಯಿಯಾಗಲು ಕಳೆದ ತಿಂಗಳು ನಾನು ನನ್ನೆಲ್ಲ ಕೆಲಸಗಳನ್ನು ಒಳಗೊಂಡ ಮೊದಲ ತಿಂಗಳ ವರ್ಕ್ ರಿಪೋರ್ಟ್ ಬಿಡುಗಡೆ ಮಾಡಿದ್ದೆ. ಇಂದು ಎರಡನೇ ತಿಂಗಳ (ಜುಲೈ) ವರ್ಕ್ ರಿಪೋರ್ಟ್ ಬಿಡುಗಡೆಗೊಳಿಸುತ್ತಿದ್ದೇನೆ.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಈ ಅದ್ಭುತ ಜನಾದೇಶ ಸಮರ್ಥವಾಗಿ ಜನಪರ ಕೆಲಸ ಮಾಡುವಂತೆ ನಮಗೆ ಕೊಟ್ಟ ನಿರ್ದೇಶನ ಎಂದು ಭಾವಿಸಿ ನನ್ನ ಕೆಲಸಗಳನ್ನು ಕೇಂದ್ರೀಕರಿಸಿದ್ದೇನೆ.
ಆಡಳಿತ ಸ್ವೀಕರಿಸಿ ಎರಡೇ ತಿಂಗಳಾಗಿದ್ದರೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಇಲಾಖೆಗಳ ಕಾರ್ಯ ನಿರ್ವಹಣೆಯಲ್ಲಿ ಹಲವಾರು ಗಮನಾರ್ಹ ಬದಲಾವಣೆಗಳನ್ನು ತರುವತ್ತ ನಮ್ಮ ಪ್ರಯತ್ನ ಸಾಗಿದೆ. ನಮ್ಮ ಎರಡೂ ಇಲಾಖೆಯ ಅಧಿಕಾರಿಗಳು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ನನ್ನೊಂದಿಗೆ ಶ್ರಮ ವಹಿಸಿ ಜನಪರವಾಗಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ನಿರಂತರವಾಗಿ ಮುಂದುವರಿಸಿದ್ದಾರೆ. ನಿಮ್ಮ ಸಲಹೆ, ಸಹನೆ ಹಾಗೂ ಸಹಕಾರವು ಪ್ರಬುದ್ಧ ಕರ್ನಾಟಕವನ್ನು ನಿರ್ಮಿಸುವ ನಮ್ಮ ಪ್ರಯತ್ನಕ್ಕೆ ದೊಡ್ಡ ಪ್ರೇರಕ ಶಕ್ತಿ” ಎಂದು ಟ್ವೀಟ್‌ನಲ್ಲಿ ಪ್ರಿಯಾಂಕ್ ಖರ್ಗೆ ಬರೆದುಕೊಂಡಿದ್ದಾರೆ.
ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ, ಜನರಿಗೆ ಹೆಚ್ಚೆಚ್ಚು ಉತ್ತರದಾಯಿಯಾಗಲು ಕಳೆದ ತಿಂಗಳು ನಾನು ನನ್ನೆಲ್ಲಾ ಕೆಲಸಗಳನ್ನು ಒಳಗೊಂಡ ಮೊದಲ ತಿಂಗಳ ವರ್ಕ್ ರಿಪೋರ್ಟ್ ಬಿಡುಗಡೆ ಮಾಡಿದ್ದೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 1, 2023
ಇಂದು ಎರಡನೇ ತಿಂಗಳ (ಜುಲೈ) ವರ್ಕ್ ರಿಪೋರ್ಟ್ ಬಿಡುಗಡೆಗೊಳಿಸುತ್ತಿದ್ದೇನೆ.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಈ ಅದ್ಭುತ… pic.twitter.com/obow3fd5kq
ಇದನ್ನೂ ಓದಿ: Karnataka politics : ಕೈ ಹೈಕಮಾಂಡ್‌ಗೆ ಸರ್ಕಾರದ ವರ್ಗಾವಣೆ ದಂಧೆ ರಿಪೋರ್ಟ್ ಕೊಟ್ಟ ಬಿ.ಕೆ. ಹರಿಪ್ರಸಾದ್!
ಈ ಮಧ್ಯೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ಅವರ ಮೇಲೂ ಆರೋಪಗಳು ಕೇಳಿ ಬಂದಿದ್ದವು. ಅವರು ನಿಗದಿತ ಅವಧಿ ಮೀರಿ ವರ್ಗಾವಣೆ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ನಡುವೆ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರು ಬರೆದಿದ್ದ ಅಸಮಾಧಾನದ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳ ಬಗ್ಗೆ ಉಲ್ಲೇಖಿಸಲಾಗಿತ್ತು. ಕಲಬುರಗಿ ಜಿಲ್ಲೆಗೆ ಪ್ರಿಯಾಂಕ್ ಖರ್ಗೆ ಅವರೇ ಉಸ್ತುವಾರಿ ಸಚಿವರಾಗಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಪ್ರಿಯಾಂಕ್ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರರೂ ಆಗಿದ್ದಾರೆ. ಇಷ್ಟಿದ್ದರೂ ಅವರು ತಮ್ಮ ರಿಪೋರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡುವ ಮೂಲಕ ತಾವು ಪಾರದರ್ಶಕವಾಗಿ ಇದ್ದೇನೆ ಎಂಬುದನ್ನು ತೋರಿಸಿಕೊಂಡಿದ್ದಾರೆ.