Site icon Vistara News

Priyank Kharge : ಸುಳ್ಳು ದಾಖಲೆ, ಆಮಿಷಗಳಿಂದ ಗೆಲುವು ಆರೋಪ; ಪ್ರಿಯಾಂಕ ಖರ್ಗೆಗೆ ಹೈಕೋರ್ಟ್‌ ಸಮನ್ಸ್‌

priyank Kharge

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಶಾಸಕ (Chittapura MLA), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್‌ ಸಚಿವ (Rural development and Panchayatraj Minister) ಪ್ರಿಯಾಂಕ್‌ ಖರ್ಗೆ (Priyank Kharge) ಅವರಿಗೆ ರಾಜ್ಯ ಹೈಕೋರ್ಟ್‌ (Karnataka High court) ಸಮನ್ಸ್‌ ಜಾರಿ ಮಾಡಿದೆ. ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಚುನಾವಣೆ ಆಯೋಗಕ್ಕೆ (Election Commission) ಸುಳ್ಳು ಜಾತಿ ಪ್ರಮಾಣ ಪತ್ರ (Fake Caste Certificate) ಹಾಗೂ ಶೈಕ್ಷಣಿಕ ದಾಖಲೆಗಳನ್ನು (Fake educational documents) ನೀಡಿದ್ದಾರೆ. ಉಚಿತ ಗ್ಯಾರಂಟಿಗಳ (Congress guarantee) ಮೂಲಕ ಮತದಾರರಿಗೆ ಆಮಿಷವೊಡ್ಡಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿ ಸಂಬಂಧ ಈ ನೋಟಿಸ್‌ (summons to Priyank Kharge) ಜಾರಿಯಾಗಿದೆ.

Chittapura MLA Rural development and Panchayatraj Minister Priyank Kharge Karnataka High court Karnataka Assembly Elections 2023 Fake Caste Certificate Election Commission Fake Caste Certificate Congress guarantee Fake educational documents summons to Priyank Kharge

ಸೆಪ್ಟೆಂಬರ್‌ 5ರಂದು ಹಾಜರಾಗಲು ಸೂಚನೆ

ಪ್ರಿಯಾಂಕ್ ಖರ್ಗೆಯವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದವರು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕು ನಿವಾಸಿ ಅಶ್ವತ್ಥರಾಮ ರಾಠೋಡ್ ಅವರು. ಈ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ಸಂಬಂಧ ಸೆಪ್ಟೆಂಬರ್‌ 5ಕ್ಕೆ ವಿಚಾರಣೆಗೆ ಹಾಜರಾಗುವಂತೆ ಪ್ರಿಯಾಂಕ್ ಖರ್ಗೆ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಅರ್ಜಿದಾರರ ಪರ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸಿದರು.

ಪ್ರಿಯಾಂಕ ಖರ್ಗೆ ವಿರುದ್ಧ ದೂರುಗಳು ಏನೇನು?

  1. 2023ರ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಿಯಾಂಕ್ ಖರ್ಗೆ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
  2. ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಅದೂ ಸಹ 2021ರ ಪ್ರಮಾಣ ಪತ್ರವಾಗಿದೆ.
  3. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆಯೂ ಅಸಮರ್ಪಕ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ.
  4. ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಪ್ರಿಯಾಂಕ್ ಖರ್ಗೆ ಮತದಾರರಿಗೆ ಆಮಿಷ ಒಡ್ಡಿದ್ದು, ಇದು ಲಂಚ ಹಾಗೂ ಭ್ರಷ್ಟಾಚಾರಕ್ಕೆ ಸಮವಾಗಿದೆ.
  5. ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧ.
  6. ಗ್ಯಾರಂಟಿ ಯೋಜನೆಗಳು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ.
  7. ಮತದಾರರಿಗೆ ಆಮಿಷವೊಡ್ಡುವುದು ಪ್ರಜಾಪ್ರತಿನಿಧಿ ಕಾಯಿದೆಯ ಅನ್ವಯ ಅಪರಾಧ ಹಾಗೂ ಚುನಾವಣಾ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ವರುಣಾ ಕ್ಷೇತ್ರದ ಮತದಾರರೊಬ್ಬರು ಕೋರ್ಟ್‌ಗೆ ಮೊರೆ ಹೋಗಿದ್ದು ಈ ಪ್ರಕರಣವೂ ವಿಚಾರಣೆಯಲ್ಲಿದೆ.

ಇದನ್ನೂ ಓದಿ : CM Siddaramaiah : ಗ್ಯಾರಂಟಿ ಮೂಲಕ ಆಮಿಷ ಆರೋಪ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ ನೋಟಿಸ್‌

Exit mobile version