World Egg Day: ಪಶು ವೈದ್ಯಕೀಯ ಕಾಲೇಜುಗಳ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಕೆಶಿ - Vistara News

ಕರ್ನಾಟಕ

World Egg Day: ಪಶು ವೈದ್ಯಕೀಯ ಕಾಲೇಜುಗಳ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಕೆಶಿ

World Egg Day: ರೈತರಿಗೆ ಕೃಷಿಯ ಜತೆಗೆ ಕೋಳಿ ಸಾಕಾಣಿಕೆಯನ್ನು ಉಪ ಕಸುಬಾಗಿ ಬೆಳೆಸಲು ಯೋಜನೆ ರೂಪಿಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ.‌ ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೋಳಿ ಉದ್ಯಮ ಸಂಕಷ್ಟದಲ್ಲಿದ್ದು, ಮೊಟ್ಟೆ ಹಾಗೂ ಕೋಳಿಯ ಬೆಲೆ (World Egg Day) ಸಾಕಷ್ಟು ಏರಿಳಿತ ಕಾಣುತ್ತಿದೆ. ಈ ಸಮಸ್ಯೆಗಳ ಜತೆಗೆ ಪಶುವೈದ್ಯಕೀಯ ಕಾಲೇಜುಗಳ ಸಮಸ್ಯೆಗಳ ಪರಿಹಾರಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಹೆಬ್ಬಾಳದ ಪಶುವೈದ್ಯಕೀಯ ಪರಿಷತ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಮೊಟ್ಟೆ ದಿನಾಚರಣೆ (World Egg Day) ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಪಶು ವೈದ್ಯರ ಸಂಖ್ಯೆ ಕಡಿಮೆ ಇದೆ. ಆದ ಕಾರಣ ಪಶುವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿ ಎಂದು ಖಾಸಗಿಯವರ ಬಳಿ ಮನವಿ ಮಾಡಿದ್ದೆ, ಅವರು ನೂರಾರು ಕೋಟಿ ಬೇಕಾಗುತ್ತದೆ ಎಂದರು. ಈ ಸಮಸ್ಯೆಯನ್ನು ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು. ಪಶುವೈದ್ಯರಿಗೆ ಸಾಕಷ್ಟು ಬೇಡಿಕೆ ಇದ್ದು, ನೀವು ಭರವಸೆ ಕಳೆದುಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಭರವಸೆಯ ಮಾತುಗಳನ್ನಾಡಿದರು.

ಇಲ್ಲಿಗೆ ಬಂದ ಒಂದಷ್ಟು ಜನ ರೈತರನ್ನು ಮಾತನಾಡಿಸಿದೆ. ಅನೇಕರು 20,000 ದಿಂದ 50,000 ತನಕ ಕೋಳಿ ಸಾಕಾಣಿಕೆ ಮಾಡುತ್ತಿರುವುದಾಗಿ ತಿಳಿಸಿದರು. ಕೋಳಿ ಆಹಾರದ ಬೆಲೆಯು ಈಗ ಹೆಚ್ಚಳವಾಗುತ್ತಿದೆ, ಒಂದೆರಡು ದಿನ ಆರೈಕೆ ಕಡಿಮೆಯಾದರೆ ತೂಕದಲ್ಲಿ ವ್ಯತ್ಯಾಸವಾಗುತ್ತದೆ, ಈ ಕ್ಷೇತ್ರದ ಬಗ್ಗೆ ನನಗೆ ಅರಿವಿರುವ ಕಾರಣ ಇಷ್ಟೆಲ್ಲಾ ಅಂಶಗಳನ್ನು ನಾನು ಉಲ್ಲೇಖಿಸುತ್ತಿದ್ದೇನೆ. ರೈತರಿಗೆ ಕೃಷಿಯ ಜತೆಗೆ ಉಪ ಕಸುಬಾಗಿ ಇದು ಬೆಳೆಯುವ ರೀತಿ ಯೋಜನೆ ರೂಪಿಸೋಣ ಎಂದರು.

ಇದನ್ನೂ ಓದಿ | Load Shedding : ರಾಜ್ಯದಲ್ಲಿ 1500 ಮೆಗಾ ವ್ಯಾಟ್ ಕೊರತೆ; ಇಂಧನ ಖರೀದಿಗೆ ಮುಂದಾಗಿದ್ದೇವೆಂದ ಜಾರ್ಜ್

ಮಾಂಸ ತಿನ್ನುವುದನ್ನು ಬಿಟ್ಟಿದ್ದೇನೆ

ನಾನು ನಂಬಿದ ದೈವ ನೀವು ಸಸ್ಯಹಾರಿಯಾಗಿರಬೇಕು ಎಂದು ಹೇಳಿದ ಕಾರಣ ಮಾಂಸ ತಿನ್ನುವುದನ್ನು ಬಿಟ್ಟಿದ್ದೇನೆ. ಆದರೆ, ಈ ದೇಶದ ಬಹುತೇಕ ಜನರ ಆಹಾರ ಕ್ರಮವನ್ನು ಗೌರವಿಸುತ್ತೇನೆ ಎಂದ ಅವರು, ನನ್ನ ವ್ಯಾವಹಾರಿಕ ಜೀವನ ಪ್ರಾರಂಭವಾಗಿದ್ದೇ ಕೋಳಿ ಫಾರಂನಿಂದ. ಪಿಯು ರಜೆ ವೇಳೆಯಲ್ಲಿ ಇದೇ ಸಂಸ್ಥೆಯಲ್ಲಿ 15 ದಿನಗಳ ಕಾಲ ಕೋಳಿ ಸಾಕಾಣಿಕೆಯ ಬಗ್ಗೆ ತರಬೇತಿ ಪಡೆದಿದ್ದೆ ಎಂದು ಹಳೆಯ ನೆನಪಿಗೆ ಡಿಸಿಎಂ ಜಾರಿದರು.

ತರಬೇತಿ ಪಡೆದ ನಂತರ ಬ್ಯಾಂಕ್‌ನಲ್ಲಿ ಸಾಲ ಪಡೆದು ಸುಂಕದಕಟ್ಟೆ- ಹೆಗ್ಗನಹಳ್ಳಿಯಲ್ಲಿ ಕೋಳಿ ಫಾರಂ ಸ್ಥಾಪಿಸಿದೆ. ಅದರಲ್ಲಿ ನಷ್ಟವಾಯಿತು. ಅದಕ್ಕೆ ಆ ವ್ಯವಹಾರ ಬಿಟ್ಟುಬಿಟ್ಟೆ. ಆನಂತರ ನಮ್ಮ ತಂದೆ- ತಾಯಿ ಊರಿನ ಜಮೀನಿನಲ್ಲಿ ಐದು ಶೆಡ್‌ಗಳನ್ನು ನಿರ್ಮಾಣ ಮಾಡಿದ್ದರು, ನಾನು ನನ್ನ ತಮ್ಮ ಕೆಲಸದ ಒತ್ತಡದ ನಡುವೆ ನೋಡಿಕೊಳ್ಳಲು ಹೋಗಲಿಲ್ಲ. ನನಗೂ ಹಾಗೂ ಈ ಕೋಳಿ ವ್ಯವಹಾರಕ್ಕೂ ಅವಿನಾಭಾವ ಸಂಬಂಧವಿದೆ ಜೀವನದ ಘಟನೆಗಳನ್ನು ಸ್ಮರಿಸಿಕೊಂಡರು.

ಮೊಟ್ಟೆಯನು ತಿನ್ನುವವನು ಜಟ್ಟಿಯಂತಾಗುವನು

ಹಿಟ್ಟನ್ನು (ಮುದ್ದೆ) ಉಂಬುವನು ಬೆಟ್ಟವನು ಎತ್ತುವನು, ಜೋಳವನು ತಿನ್ನುವವನು, ತೋಳದಂತಾಗುವನು. ಅದೇ ರೀತಿ ಮೊಟ್ಟೆಯನು ತಿನ್ನುವವನು ಜಟ್ಟಿಯಂತಾಗುವನು ಎಂದು ಹಿರಿಯರು ಹೇಳುತ್ತಾ ಇದ್ದರು. ಅಂದರೆ ನಮ್ಮ ಆಹಾರದಂತೆ ಆರೋಗ್ಯ ಇರುತ್ತದೆ. ಒಂದೇ ನಾಣ್ಯದ ಎರಡು ಮುಖಗಳು ಇವು. ಯಾವುದನ್ನೂ ಕಡೆಗಣನೆ ಮಾಡಬಾರದು. ಕೋಳಿ, ಕುರಿ, ಮೇಕೆ ಸೇರಿ ಮಾಂಸಾಹಾರಕ್ಕೆ ನಮ್ಮ ಪ್ರೋತ್ಸಾಹ ಇದ್ದೇ ಇರುತ್ತದೆ‌. ಇದೆಲ್ಲಾ ಇರದೆ ಇದ್ದರೆ ಸಮೂಹತನ ಇರುವುದಕ್ಕೆ ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟರು.

ಸಣ್ಣ ರೋಗದ ಸುದ್ದಿ ಹಬ್ಬಿದರೂ ಮೊದಲು ನಾಶ ಮಾಡುವುದೇ ಕೋಳಿಗಳನ್ನು. ಸರ್ಕಾರಕ್ಕೆ ಇದರ ಬಗ್ಗೆ ಅರಿವಿದೆ, ಎಲ್ಲರ ಜತೆ ಚರ್ಚೆ ಮಾಡಿ ಪರಿಹಾರ ಸೂತ್ರ ಕಂಡುಹಿಡಿಯಲಾಗುವುದು ಎಂದ ಅವರು, ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಕೊಬ್ಬು ಹೆಚ್ಚಿಲ್ಲದ ಮೊಟ್ಟೆ ಪ್ರಯೋಗ ನಡೆದಿತ್ತು. ಅದನ್ನು ಪರಿಚಯಿಸುವ ಸಭೆಯನ್ನು ಕರೆಯಲಾಗಿತ್ತು, ಆದರೆ ನನಗೆ ಆಗ ಅದರ ಬಗ್ಗೆ ಹೆಚ್ಚು ಜ್ಞಾನವಿರಲಿಲ್ಲ. ಇತ್ತೀಚೆಗೆ ನನ್ನ ಮಕ್ಕಳು ಗಿಡದಲ್ಲಿ ಮೊಟ್ಟೆ ಬೆಳೆಯುತ್ತಿದ್ದಾರೆ ಎಂದು ಒಂದು ವಿಡಿಯೋ ತೋರಿಸಿದರು‌. ಅದನ್ನು ನೋಡಿದ ನನಗೆ ಮನುಷ್ಯ ಪ್ರಕೃತಿಯ ವಿರುದ್ದ ಹೋಗುತ್ತಿದ್ದಾನಲ್ಲ ಎಂದು ಆಶ್ಚರ್ಯವಾಯಿತು. ಅದು ಎಷ್ಟು ನಿಜವೋ, ಸುಳ್ಳೋ ಗೊತ್ತಿಲ್ಲ ಎಂದರು.

ಇದನ್ನೂ ಓದಿ | IT Raid: ರಾಜಕೀಯ ಉದ್ದೇಶವಿಲ್ಲದೆ ಯಾವುದೇ ಐಟಿ ದಾಳಿ ನಡೆಯಲ್ಲ: ಡಿ.ಕೆ. ಶಿವಕುಮಾರ್

ಅಶ್ವಂ ನೈವ ಗಜಂ ನೈವ, ವ್ಯಾಘ್ರಂ ನೈವ ಚ ನೈವ ಚ. ಅಜಾ ಪುತ್ರಂ ಬಲಿಂ ದದ್ಯಾತ್, ದೇವೋ ದುರ್ಬಲ ಘಾತಕಃ ಅಂದರೆ ನಮ್ಮ ಊರಿನಲ್ಲಿ ಕಬ್ಬಾಳಮ್ಮ, ಬೇರೆ ಕಡೆ ಮಾರಮ್ಮ ದೇವರಿದ್ದಾವೆ. ಈ ದೇವರುಗಳು ಬಲಿ ತೆಗೆದುಕೊಳ್ಳುವಾಗ, ಹೆಚ್ಚು ದುರ್ಬಲ ಪ್ರಾಣಿಗಳನ್ನು ತೆಗೆದುಕೊಳ್ಳುತ್ತದೆಯೇ ಹೊರತು, ಆನೆಯಂತಹ ಶಕ್ತಿಶಾಲಿ ಪ್ರಾಣಿಗಳನ್ನು ಮುಟ್ಟುವುದಿಲ್ಲ ಎಂಬುದು ಇದರ ಅರ್ಥ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

Bitcoin Scam: ಬಿಟ್ ಕಾಯಿನ್ ಹಗರಣದಲ್ಲಿ ಆರೋಪಿ ಶ್ರೀಕಿಯನ್ನು ಅಕ್ರಮವಾಗಿ ಬಂಧಿಸಿ ಕ್ರಿಪ್ಟೊ ವ್ಯಾಲೆಟ್‌ನಿಂದ ಹಣ ಕಬಳಿಸಿದ ಆರೋಪದಲ್ಲಿ ಇನ್‌ಸ್ಪೆಕ್ಟರ್‌ ಬಂಧನವಾಗಿದೆ.

VISTARANEWS.COM


on

bitcoin scam
Koo

ಬೆಂಗಳೂರರು: ಬಿಟ್ ಕಾಯಿನ್ ಹಗರಣದಲ್ಲಿ (Bitcoin Scam) ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಎಸ್ಐಟಿ ಬಂಧಿಸಿದೆ. ಆರೋಪಿ ಶ್ರೀಕಿಯನ್ನು ಅಕ್ರಮವಾಗಿ ಬಂಧಿಸಿ ಕ್ರಿಪ್ಟೊ ವ್ಯಾಲೆಟ್‌ನಿಂದ ಹಣ ಕಬಳಿಸಿದ ಆರೋಪದಲ್ಲಿ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಪೆಕ್ಟರ್‌ ಬಂಧನವಾಗಿದೆ.

ಚಂದ್ರಾಧರ್ ಬಂಧಿತ ಆರೋಪಿ. ಇದೇ ಪ್ರಕರಣದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಪ್ರಶಾಂತ್ ಬಾಬು, ಲಕ್ಷ್ಮೀಕಾಂತಯ್ಯ ಹಾಗೂ ಸೈಬರ್ ಎಕ್ಸಪರ್ಟ್ ಸಂತೋಷ್ ಎಂಬುವವನ್ನು ಈ ಹಿಂದೆ ಬಂಧಿಸಲಾಗಿದೆ. ಇನ್ನು ಆರೋಪಿಗಳನ್ನು ಅಕ್ರಮವಾಗಿ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್‌ಗಳ ವರ್ಗಾವಣೆ ಮತ್ತು ಪಾಸ್‌ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈಎಸ್‌ಪಿ ಶ್ರೀಧರ್ ಕೆ. ಪೂಜಾರ್‌ ಅವರ ವಿರುದ್ಧ ಘೋಷಿತ ಆರೋಪಿ ಆದೇಶವನ್ನು ಮೇ 2ರಂದು ಹೈಕೋರ್ಟ್ ರದ್ದುಪಡಿಸಿತ್ತು.

ಇದನ್ನೂ ಓದಿ | Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

ಬಿಟ್‌ ಕಾಯಿನ್‌ ಹಗರಣ ನಡೆದು ಬಂದ ಹಾದಿ

  1. 2020ರಲ್ಲಿ ಕೆಂಪೇಗೌಡ ನಗರ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಆರೋಪಿ ಸುಜಯ್ ಎಂಬಾತನನ್ನು ಬಂಧಿಸಿದ್ದರು.
  2. ಈತ ಡಾರ್ಕ್ ನೆಟ್ ನಲ್ಲಿ ಬಿಟ್ ಕಾಯಿನ್ ಮೂಲಕ ಡ್ರಗ್ಸ್ ಖರೀದಿ ಮಾಡಿದ್ದ ಮಾಹಿತಿ ಪಡೆದು ಜಾಲಾಡಿದಾಗ ಬಿಟ್‌ ಕಾಯಿನ್‌ ರೂವಾರಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿ ಸಿಕ್ಕಿಬಿದ್ದಿದ್ದ.
  3. ಶ್ರೀಕಿ ಆ್ಯಂಡ್ ಗ್ಯಾಂಗ್‌ ಸರ್ಕಾರಿ ವೆಬ್ ಸೈಟ್ ಸೇರಿದಂತೆ ಆನ್ ಲೈನ್ ಗೇಮಿಂಗ್ ಆ್ಯಪ್ ಗಳನ್ನು ಹ್ಯಾಕ್‌ ಮಾಡಿ ಕೋಟ್ಯಂತರ ರೂಪಾಯಿ ದೋಚಿದ್ದ.
  4. ಅಕ್ರಮ ಸಂಪಾದನೆ ಮಾಡಿರುವ ಬಗ್ಗೆ ಹೊರಬಂದ ಬೆನ್ನಲೇ‌ ಪ್ರಕರಣವನ್ನ ಸಿಸಿಬಿಗೆ ಹಸ್ತಾಂತರಿಸಲಾಗಿತ್ತು. ಸಿಸಿಬಿ ತನಿಖೆ ವೇಳೆ ದೊಡ್ಡ ಪ್ರಮಾಣದಲ್ಲಿ ವಂಚಿಸಿರುವುದಾಗಿ ತಿಳಿದುಬಂದಿತ್ತು.
  5. ಪ್ರಕರಣದ ಹಿಂದೆ ಹಿಂದಿನ ಸರ್ಕಾರದ ಕೆಲ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂದು ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಆರೋಪಿಸಿತ್ತು.
  6. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಟ್ ಕಾಯಿನ್ ಪ್ರಕರಣವನ್ನ ಮರುತನಿಖೆ ನಡೆಸಲು ಕಳೆದ ವರ್ಷ ಜುಲೈನಲ್ಲಿ ಎಸ್ಐಟಿ ರಚಿಸಿತ್ತು.
  7. ಹಿರಿಯ ಐಪಿಎಸ್ ಮನೀಶ್‌ ಕರ್ಬೀಕರ್ ನೇತೃತ್ವದ ತಂಡ ಶ್ರೀಕಿ ಸೇರಿದಂತೆ‌ ಇನ್ನಿತರ ಆರೋಪಿಗಳ ವಿಚಾರಣೆ ನಡೆಸಿತ್ತು ಹಾಗೂ ಆಗ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರನ್ನ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿತ್ತು.
  8. ಉದ್ದೇಶಪೂರ್ವಕವಾಗಿ ಸಾಕ್ಷ್ಯ ನಾಶಪಡಿಸಿರುವ ಬಗ್ಗೆ ಮಾಹಿತಿ ಇದ್ದು, ವಶಕ್ಕೆ ಪಡೆದ ಐವರು ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಲ್ಲಿ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
  9. ಡಿವೈಎಸ್‌ಪಿ ಶ್ರೀಧರ್ ಕೆ. ಪೂಜಾರ್‌ ಅವರ ವಿರುದ್ಧ ಘೋಷಿತ ಆರೋಪಿ ಆದೇಶವನ್ನು ಮೇ 2ರಂದು ಹೈಕೋರ್ಟ್ ರದ್ದುಪಡಿಸಿತ್ತು.
Continue Reading

ಕರ್ನಾಟಕ

Prajwal Revanna Case: ಚೇತನ್‌, ನವೀನ್ ಗೌಡಗೆ ಮೂರು ದಿನ ಎಸ್‌ಐಟಿ ಕಸ್ಟಡಿ

Prajwal Revanna Case: ಜೂನ್ 1 ರವರೆಗೆ ನವೀನ್ ಹಾಗೂ ಚೇತನ್ ಎಸ್ಐಟಿ ಕಸ್ಟಡಿಗೆ ನೀಡಿ ಹಾಸನದ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಅಶ್ಲೀಲ ವಿಡಿಯೊ ವೈರಲ್‌ ಮಾಡಿದ ಆರೋಪದಲ್ಲಿ ಈ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಅಶ್ಲೀಲ ವಿಡಿಯೊ ವೈರಲ್‌ ಮಾಡಿದ ಆರೋಪದಲ್ಲಿ ಬಂಧನವಾಗಿರುವ ನವೀನ್ ಗೌಡ ಹಾಗೂ ಚೇತನ್‌ನನ್ನು ಮೂರು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಜೂನ್ 1 ರಂದು ಶನಿವಾರ ಸಂಜೆ 4.30ಕ್ಕೆ ಆರೋಪಗಳನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸಲು ಸೂಚಿಸಲಾಗಿದೆ.

ಇಂದಿನಿಂದ ಜೂನ್ 1 ರವರೆಗೆ ನವೀನ್ ಹಾಗೂ ಚೇತನ್ ಎಸ್ಐಟಿ ಕಸ್ಟಡಿಗೆ ನೀಡಿ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.

ಪೆನ್ ಡ್ರೈವ್ ಹಂಚಿಕೆ ಪ್ರಕರಣದ (Prajwal Revanna Case) ಆರೋಪಿಗಳಾದ ಚೇತನ್, ನವೀನ್ ಗೌಡನನ್ನು ಎಸ್ಐಟಿ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದರು. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇದ್ದ ಕಾರಣ ಹೈಕೋರ್ಟ್‌ಗೆ ಬಂದಿದ್ದ ಇಬ್ಬರನ್ನೂ ವಶಕ್ಕೆ ಪಡೆಯಲಾಗಿತ್ತು. ಹೈಕೋರ್ಟ್‌ನಿಂದ ಹೊರಗೆ ಬರುತ್ತಿದ್ದಂತೆ ಪಾರ್ಕಿಂಗ್‌ ಲಾಟ್‌ ಬಳಿ ಚೇತನ್, ನವೀನ್ ಗೌಡ ಸಿಕ್ಕಿಬಿದ್ದಿದ್ದರು.

ಇದನ್ನೂ ಓದಿ | Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Prajwal Revanna Case

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರವರೆಗೆ ತೀರ್ಪು ಕಾಯ್ದಿರಿಸಿದೆ. ಮೇ 31ರಂದು ನ್ಯಾಯಾಲಯವು ಆದೇಶ ಹೊರಡಿಸಿದ್ದು, ಅಲ್ಲಿಯವರೆಗೆ ಭವಾನಿ ರೇವಣ್ಣ ಕಾಯಬೇಕಿದೆ. ಇನ್ನು, ಮೇ 31ರಂದು ಆಗಮಿಸಲಿರುವ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನೂ ಮೇ 31ಕ್ಕೆ ನಡೆಸುವುದಾಗಿ ಕೋರ್ಟ್‌ ತಿಳಿಸಿದೆ. ಹಾಗಾಗಿ, ಮೇ 31 ತಾಯಿ-ಮಗನಿಗೆ ಪ್ರಮುಖ ದಿನವಾಗಿದೆ.

ಮೇ 31ರಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಈಗಾಗಲೇ ಪ್ರಜ್ವಲ್‌ ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ವಕೀಲ ಅರುಣ್‌ ಅವರು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 31ರಂದು ವಿಚಾರಣೆ ನಡೆಸುವುದಾಗಿ ಕೋರ್ಟ್‌ ತಿಳಿಸಿದೆ. ಇನ್ನು ಮೇ 31ರಂದೇ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ಆದೇಶವನ್ನು ಹೊರಡಿಸುವುದಾಗಿ ಕೋರ್ಟ್‌ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ. ಮೂರೂ ಅರ್ಜಿಗಳ ಕುರಿತು ಕೋರ್ಟ್‌ ನೀಡುವ ತೀರ್ಪಿನ ಎಚ್‌.ಡಿ.ರೇವಣ್ಣ ಕುಟುಂಬದ ಭವಿಷ್ಯ ನಿಂತಿದೆ.

ಇದಕ್ಕೂ ಮೊದಲು ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲ ಸಂದೇಶ ಚೌಟ, “ಎಫ್ಐಆರ್ ದಾಖಲಿಸಿ 27 ದಿನಗಳಾದರೂ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ನಂತರ ಬೆಟ್ಟದಷ್ಟು ದಾಖಲೆ ಇವೆ ಎನ್ನುತ್ತಿದ್ದಾರೆ. ಹಾಗಿದ್ದರೆ ಇದುವರೆಗೂ ಏಕೆ ವಿಚಾರಣೆಗೆ ಕರೆಯಲಿಲ್ಲ? ತನಿಖೆಗೆ ಸಹಕರಿಸುವುದಾಗಿ ಈ ಹಿಂದೆಯೇ ಎಸ್ಐಟಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಭವಾನಿಗೆ ನಿರೀಕ್ಷಣಾ ಜಾಮೀನು ನೀಡಬೇಕು” ಎಂದರು.

ಎಸ್‌ಪಿಪಿ ವಾದವೇನಿತ್ತು?

ಮಗನ ರಕ್ಷಣೆಗಾಗಿ ಭವಾನಿ ರೇವಣ್ಣ ಒಳಸಂಚು ರೂಪಿಸಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣದ ಹಿಂದೆ ಇವರ ಕೈವಾಡವಿದೆ. ಸಂತ್ರಸ್ತ ಮಹಿಳೆಗೆ ಊಟ ನೀರು, ಸರಿಯಾಗಿ ಕೊಟ್ಟಿಲ್ಲ‌. ಆಕೆಗೆ ಬಟ್ಟೆ ಸೀರೆಯನ್ನು ಕೊಟ್ಟಿಲ್ಲ. ಆರೋಪಿ ಸತೀಶ್ ಬಾಬಣ್ಣ ಜತೆ ಭವಾನಿ ಮಾತನಾಡಿದ್ದಾರೆ. ಆರೋಪಿ ಸತೀಶ್ ಬಾಬಣ್ಣ ಕೇಳಿದಾಗ ಭವಾನಿಯವರು ಆಯ್ತು 150 ರೂಪಾಯಿ ಅಥವಾ 200 ರೂಪಾಯಿ ಸೀರೆ ಕೊಡ್ಸು ಎಂಬುದಾಗಿ ಸೂಚಿಸಿದ್ದಾರೆ” ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. ಕೊನೆಗೆ ನ್ಯಾಯಾಲಯವು ತೀರ್ಪನ್ನು ಮೇ 31ರವರೆಗೆ ಕಾಯ್ದಿರಿಸಿತು.

ನಾಳೆಯೇ ವಿಚಾರಣೆ ಸಾಧ್ಯವಿಲ್ಲ ಎಂದ ಕೋರ್ಟ್‌

ಪ್ರಜ್ವಲ್‌ ರೇವಣ್ಣ ಅವರು ಮೇ 31ರಂದು ಭಾರತಕ್ಕೆ ಆಗಮಿಸಲಿದ್ದು, ನಾಳೆ ಅಂದರೆ ಮೇ 30ರಂದೇ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕು ಎಂದು ವಕೀಲ ಅರುಣ್‌ ಮನವಿ ಮಾಡಿದ್ದಾರೆ. ಆದರೆ, ನಾಳೆಯೇ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್‌, ಈ ಕುರಿತು ಪ್ರತಿಕ್ರಿಯಿಸುವಂತೆ ಎಸ್‌ಐಟಿಗೆ ನೋಟಿಸ್‌ ಜಾರಿಗೊಳಿಸಿದೆ. ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಮೂರೂ ಪ್ರಕರಣಗಳಲ್ಲಿ ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ಬೇಕು. ಹಾಗಾಗಿ, ಮೇ 31ರಂದು ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್‌ ತಿಳಿಸಿತು.

ಇದನ್ನೂ ಓದಿ: Prajwal Revanna Case: ಕೆ ಆರ್‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌; ಭವಾನಿ ರೇವಣ್ಣ ಕಾರು ಚಾಲಕನಿಗೆ‌ SIT ಸಮನ್ಸ್

4 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಜೂ.3ಕ್ಕೆ ವಿಚಾರಣೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ನವೀನ್‌ ಗೌಡ, ಎಚ್.ಪಿ. ಪುಟ್ಟರಾಜು, ಕಾರ್ತಿಕ್‌ ಹಾಗೂ ಚೇತನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂನ್ 3 ಕ್ಕೆ ಮುಂದೂಡಲಾಗಿದೆ.

Continue Reading

ಮಳೆ

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Karnataka Weather: ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಸಂಜೆ ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆ (Rain News) ಹಾಗೂ ಅಲ್ಲಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ (Karnataka Weather) ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 72 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ, ನಂತರ ರಾಜ್ಯದಾದ್ಯಂತ 2-3 ° C ರಷ್ಟು ಕ್ರಮೇಣ ಕುಸಿಯುತ್ತದೆ.

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇಲೆ ಮಾರುತಗಳು ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು.
ರಾಜ್ಯದ ಮಳೆ/ಗುಡುಗಿನ ಮುನ್ಸೂಚನೆ 0830 ಗಂಟೆಗಳ IST ವರೆಗೆ ಮಾನ್ಯವಾಗಿರುತ್ತದೆ.

Continue Reading

ಕರ್ನಾಟಕ

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Bhavani Revanna: ಮೇ 31ರಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಈಗಾಗಲೇ ಪ್ರಜ್ವಲ್‌ ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಇನ್ನು ಮೇ 31ರಂದೇ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ಆದೇಶವನ್ನು ಹೊರಡಿಸುವುದಾಗಿ ಕೋರ್ಟ್‌ ತಿಳಿಸಿದೆ. ಹಾಗಾಗಿ, ತಾಯಿ-ಮಗನಿಗೆ ಮೇ 31 ಮಹತ್ವದ ದಿನವಾಗಿದೆ.

VISTARANEWS.COM


on

Bhavani Revanna
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರವರೆಗೆ ತೀರ್ಪು ಕಾಯ್ದಿರಿಸಿದೆ. ಮೇ 31ರಂದು ನ್ಯಾಯಾಲಯವು ಆದೇಶ ಹೊರಡಿಸಿದ್ದು, ಅಲ್ಲಿಯವರೆಗೆ ಭವಾನಿ ರೇವಣ್ಣ ಕಾಯಬೇಕಿದೆ. ಇನ್ನು, ಮೇ 31ರಂದು ಆಗಮಿಸಲಿರುವ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನೂ ಮೇ 31ಕ್ಕೆ ನಡೆಸುವುದಾಗಿ ಕೋರ್ಟ್‌ ತಿಳಿಸಿದೆ. ಹಾಗಾಗಿ, ಮೇ 31 ತಾಯಿ-ಮಗನಿಗೆ ಪ್ರಮುಖ ದಿನವಾಗಿದೆ.

ಮೇ 31ರಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಈಗಾಗಲೇ ಪ್ರಜ್ವಲ್‌ ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ವಕೀಲ ಅರುಣ್‌ ಅವರು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 31ರಂದು ವಿಚಾರಣೆ ನಡೆಸುವುದಾಗಿ ಕೋರ್ಟ್‌ ತಿಳಿಸಿದೆ. ಇನ್ನು ಮೇ 31ರಂದೇ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ಆದೇಶವನ್ನು ಹೊರಡಿಸುವುದಾಗಿ ಕೋರ್ಟ್‌ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ. ಮೂರೂ ಅರ್ಜಿಗಳ ಕುರಿತು ಕೋರ್ಟ್‌ ನೀಡುವ ತೀರ್ಪಿನ ಎಚ್‌.ಡಿ.ರೇವಣ್ಣ ಕುಟುಂಬದ ಭವಿಷ್ಯ ನಿಂತಿದೆ.

Prajwal Revanna Case

ಇದಕ್ಕೂ ಮೊದಲು ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲ ಸಂದೇಶ ಚೌಟ, “ಎಫ್ಐಆರ್ ದಾಖಲಿಸಿ 27 ದಿನಗಳಾದರೂ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ನಂತರ ಬೆಟ್ಟದಷ್ಟು ದಾಖಲೆ ಇವೆ ಎನ್ನುತ್ತಿದ್ದಾರೆ. ಹಾಗಿದ್ದರೆ ಇದುವರೆಗೂ ಏಕೆ ವಿಚಾರಣೆಗೆ ಕರೆಯಲಿಲ್ಲ? ತನಿಖೆಗೆ ಸಹಕರಿಸುವುದಾಗಿ ಈ ಹಿಂದೆಯೇ ಎಸ್ಐಟಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಭವಾನಿಗೆ ನಿರೀಕ್ಷಣಾ ಜಾಮೀನು ನೀಡಬೇಕು” ಎಂದರು.

ಎಸ್‌ಪಿಪಿ ವಾದವೇನಿತ್ತು?

ಮಗನ ರಕ್ಷಣೆಗಾಗಿ ಭವಾನಿ ರೇವಣ್ಣ ಒಳಸಂಚು ರೂಪಿಸಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣದ ಹಿಂದೆ ಇವರ ಕೈವಾಡವಿದೆ. ಸಂತ್ರಸ್ತ ಮಹಿಳೆಗೆ ಊಟ ನೀರು, ಸರಿಯಾಗಿ ಕೊಟ್ಟಿಲ್ಲ‌. ಆಕೆಗೆ ಬಟ್ಟೆ ಸೀರೆಯನ್ನು ಕೊಟ್ಟಿಲ್ಲ. ಆರೋಪಿ ಸತೀಶ್ ಬಾಬಣ್ಣ ಜತೆ ಭವಾನಿ ಮಾತನಾಡಿದ್ದಾರೆ. ಆರೋಪಿ ಸತೀಶ್ ಬಾಬಣ್ಣ ಕೇಳಿದಾಗ ಭವಾನಿಯವರು ಆಯ್ತು 150 ರೂಪಾಯಿ ಅಥವಾ 200 ರೂಪಾಯಿ ಸೀರೆ ಕೊಡ್ಸು ಎಂಬುದಾಗಿ ಸೂಚಿಸಿದ್ದಾರೆ” ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. ಕೊನೆಗೆ ನ್ಯಾಯಾಲಯವು ತೀರ್ಪನ್ನು ಮೇ 31ರವರೆಗೆ ಕಾಯ್ದಿರಿಸಿತು.

ನಾಳೆಯೇ ವಿಚಾರಣೆ ಸಾಧ್ಯವಿಲ್ಲ ಎಂದ ಕೋರ್ಟ್‌

ಪ್ರಜ್ವಲ್‌ ರೇವಣ್ಣ ಅವರು ಮೇ 31ರಂದು ಭಾರತಕ್ಕೆ ಆಗಮಿಸಲಿದ್ದು, ನಾಳೆ ಅಂದರೆ ಮೇ 30ರಂದೇ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕು ಎಂದು ವಕೀಲ ಅರುಣ್‌ ಮನವಿ ಮಾಡಿದ್ದಾರೆ. ಆದರೆ, ನಾಳೆಯೇ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್‌, ಈ ಕುರಿತು ಪ್ರತಿಕ್ರಿಯಿಸುವಂತೆ ಎಸ್‌ಐಟಿಗೆ ನೋಟಿಸ್‌ ಜಾರಿಗೊಳಿಸಿದೆ. ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಮೂರೂ ಪ್ರಕರಣಗಳಲ್ಲಿ ಎಸ್‌ಐಟಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ಬೇಕು. ಹಾಗಾಗಿ, ಮೇ 31ರಂದು ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್‌ ತಿಳಿಸಿತು.

4 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಜೂ.3ಕ್ಕೆ ವಿಚಾರಣೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ನವೀನ್‌ ಗೌಡ, ಎಚ್.ಪಿ. ಪುಟ್ಟರಾಜು, ಕಾರ್ತಿಕ್‌ ಹಾಗೂ ಚೇತನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂನ್ 3 ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: Prajwal Revanna Case: ಕೆ ಆರ್‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌; ಭವಾನಿ ರೇವಣ್ಣ ಕಾರು ಚಾಲಕನಿಗೆ‌ SIT ಸಮನ್ಸ್

Continue Reading
Advertisement
bitcoin scam
ಪ್ರಮುಖ ಸುದ್ದಿ56 seconds ago

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

Dinesh Karthik
ಕ್ರೀಡೆ26 mins ago

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Prajwal Revanna Case
ಕರ್ನಾಟಕ37 mins ago

Prajwal Revanna Case: ಚೇತನ್‌, ನವೀನ್ ಗೌಡಗೆ ಮೂರು ದಿನ ಎಸ್‌ಐಟಿ ಕಸ್ಟಡಿ

Forbes World Billionaires List
ವಾಣಿಜ್ಯ49 mins ago

Forbes World Billionaires List: ವಿಶ್ವದ ಶ್ರೀಮಂತ ಮಹಿಳೆಯರು; ಭಾರತದ ಸಾವಿತ್ರಿ ಜಿಂದಾಲ್‌ಗೆ ಎಷ್ಟನೇ ಸ್ಥಾನ?

Cannes 2024 Sandalwood Actress Interview
ಫ್ಯಾಷನ್51 mins ago

Cannes 2024 Sandalwood Actress Interview: ಕಾನ್‌ನಲ್ಲಿ ಹ್ಯಾಟ್ರಿಕ್‌ ವಾಕ್‌ ಮಾಡಿದ ಸ್ಯಾಂಡಲ್‌ವುಡ್‌ ನಟಿ ಇತಿ ಆಚಾರ್ಯ ಹೇಳಿದ್ದೇನು?

Delhi Temperature
ದೇಶ56 mins ago

Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Babar Azam
ವೈರಲ್ ನ್ಯೂಸ್1 hour ago

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Madhu Chopra on Priyanka Chopra-Nick Jonas' age gap
ಬಾಲಿವುಡ್1 hour ago

Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

Tamarind Fruit Benefits
ಆರೋಗ್ಯ1 hour ago

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

Karnataka Weather
ಮಳೆ2 hours ago

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ23 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌