Site icon Vistara News

ಬಕ್ರೀದ್‌ನಂದು ಸಾರ್ವಜನಿಕ ಸ್ಥಳಗಳಲ್ಲಿ ಖುರ್ಬಾನಿ ನಿಷೇಧ

ಹೊಸಪೇಟೆ: ಜುಲೈ 10ಕ್ಕೆ‌ ಬ್ರಕೀದ್ ಹಬ್ಬ ಆಚರಿಸಲಾಗುತ್ತಿದ್ದು, ಖುರ್ಬಾನಿಯನ್ನು (ಪ್ರಾಣಿ ಬಲಿದಾನ) ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ-ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧ ಮಾಡಲಾಗಿದೆ. ಜಿಲ್ಲಾಡಳಿತ/ಸ್ಥಳೀಯ ಆಡಳಿತ ಸಂಸ್ಥೆಗಳಿಂದ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿಯನ್ನು ನೆರವೇರಿಸತಕ್ಕದ್ದು ಎಂದು ಹೊಸಪೇಟೆ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.

ಜಿಲ್ಲಾದ್ಯಂತ ಬಕ್ರೀದ್ ಹಬ್ಬವನ್ನು ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯದೊಂದಿಗೆ ಆಚರಿಸಬೇಕು ಹೀಗಾಗಿ ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್-19 ನಿಯಂತ್ರಣಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳನ್ನು ಉಲ್ಲಂಘಿಸದಂತೆ ಖುರ್ಬಾನಿಯನ್ನು ನೇರವೇರಿಸಬೇಕು. ಅಲ್ಲದೆ, ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಬೇಕು ಎಂದು ಸೂಚನೆ ನೀಡಲಾಗಿದೆ.

ಜತೆಗೆ ಪ್ರಾಣಿ ತ್ಯಾಜ್ಯವನ್ನು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಇದಲ್ಲದೆ, ಪೋಲಿಸ್ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವುದು ಸೇರಿ ಬಕ್ರೀದ್ ಹಬ್ಬದ ಆಚರಣೆ ಕುರಿತು ರಾಜ್ಯ ಸರ್ಕಾರ/ವಿಜಯನಗರ ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಪೌರಾಯುಕ್ತರು ಮಾಹಿತಿ ನೀಡಿದರು.

ಇದನ್ನೂ ಓದಿ| Bakrid 2022 | ಜುಲೈ 10ರ ಬಕ್ರೀದ್ ಹಬ್ಬಕ್ಕೆ ಟರ್ಮ್ಸ್‌ & ಕಂಡೀಶನ್‌ ಅಪ್ಲೈ

Exit mobile version