ಕರ್ನಾಟಕ
Property Tax: ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಡಿ.ಕೆ. ಶಿವಕುಮಾರ್ ಬಂಪರ್ ಗಿಫ್ಟ್ ಘೋಷಣೆ
ಬೆಂಗಳೂರಿನ ಅಭಿವೃದ್ಧಿ ಕುರಿತು ಚರ್ಚಿಸಲು ಸೋಮವಾರ ಬೆಂಗಳೂರಿನ ಎಲ್ಲ ಪಕ್ಷದ ಶಾಸಕರ ಸಭೆ ಕರೆಯುತ್ತಿದ್ದೇನೆ. ಆ ಮೇಲೆ ನಮ್ಮ ಪಕ್ಷದ ಶಾಸಕರ ಪ್ರತ್ಯೇಕ ಸಭೆ ಕರೆಯುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು: ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಹಿಸುದ್ದಿ ನೀಡಿದ್ದಾರೆ. ಅನೇಕ ದಿನಗಳಿಂದ ಬೆಂಗಳೂರಿನ ಆಸ್ತಿ ಮಾಲೀಕರ ಆಗ್ರಹವನ್ನು ಒಪ್ಪಿದ್ದಾರೆ.
ಇಡೀ ವರ್ಷದ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಕಟ್ಟುವವರಿಗೆ ಶೇ.5 ವಿನಾಯಿತಿಯನ್ನು ಮೇ 31ರವರೆಗೆ ಬಿಬಿಎಂಪಿ ನೀಡಿತ್ತು. ಆದರೆ ಈ ಸಮಯದಲ್ಲಿ ಚುನಾವಣೆ ಕಾವು ಇದ್ದಿದ್ದರಿಂದ ಅನೇಕರು ಆಸ್ತಿ ತೆರಿಗೆ ಪಾವತಿಸಿರಲಿಲ್ಲ.
ಹಾಗಾಗಿ ಮತ್ತೊಂದು ತಿಂಗಳು ಈ ಅವಕಾಶವನ್ನು ವಿಸ್ತರಿಸಬೇಕು ಎಂದು ಅನೇಕರು ಒತ್ತಾಯ ಮಾಡಿದ್ದರು. ಬಿಬಿಎಂಪಿ ಆಡಳಿತದ ಕುರಿತು ಕಾಂಗ್ರೆಸ್‌ನ ಮಾಜಿ ಮೇಯರ್‌ಗಳ ಜತೆಗೆ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ ನಂತರ ಈ ಕುರಿತು ಘೋಷಣೆ ಮಾಡಿದರು.
ಮೇ 31ರವರೆಗೆ ಇದ್ದ ತೆರಿಗೆ ವಿನಾಯಿತಿ ಅವಕಾಶವನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಎಲ್ಲ ಮಾಜಿ ಮೇಯರ್‌ಗಳು ಹೇಳಿದ್ದರಿಂದ ಈ ಘೋಷಣೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಬೆಂಗಳೂರಿನ ಮಾಜಿ ಮೇಯರ್ ಸಭೆ ನಡೆಸಿದ್ದೇನೆ. ಬೆಂಗಳೂರನ್ನ ಯಾವ ರೀತಿ ಅಭಿವೃದ್ಧಿ ಮಾಡಬಹುದು ಅಂತ ಸಲಹೆ ಕೇಳಿದ್ದೇನೆ. ರಿಂಗ್‌ರೋಡ್‌ಗಳಲ್ಲಿ ತ್ಯಾಜ್ಯ ರಸ್ತೆ ಬದಿ ಹಾಕುತ್ತಿದ್ದಾರೆ. ಕೆರೆಗಳಿಗೆ, ಚರಂಡಿಗಳಿಗೆ ಕಸ ಸೆಯುತ್ತಿದ್ದಾರೆ. ಸಂಬಂಧ ಅನೇಕ ಸಲಹೆ ಕೇಳಿದ್ದಾರೆ.
ಸೋಮವಾರ ಬೆಂಗಳೂರಿನ ಎಲ್ಲ ಪಕ್ಷದ ಶಾಸಕರ ಸಭೆ ಕರೆಯುತ್ತಿದ್ದೇನೆ. ಆ ಮೇಲೆ ನಮ್ಮ ಪಕ್ಷದ ಶಾಸಕರ ಪ್ರತ್ಯೇಕ ಸಭೆ ಕರೆಯುತ್ತೇನೆ. ಎಲ್ಲರನ್ನ ವಿಶ್ವಾಸಕ್ಕೆ ಪಡೆಯಲು ಅದು ಆಂತರಿಕ ಸಭೆ ನಡೆಸುತ್ತೇನೆ. ಮಾಜಿ ಮೇಯರ್‌ಗಳು, ನಮ್ಮ ಸರ್ಕಾರ ಬಂದಿದೆ, ಬೆಂಗಳೂರಿನ ಜನತೆಗೆ ಏನಾದ್ರೂ ಗಿಫ್ಟ್ ಕೊಡಿ ಅಂದ್ರು. ಅದಕ್ಕಾಗಿ ಮೇ 30 ರವರೆಗೆ ಇದ್ದ ತೆರಿಗೆ ವಿನಾಯ್ತಿಯನ್ನ ಜೂನ್ 30 ರವರೆಗೆ ವಿಸ್ತರಣೆ ಮಾಡಿದ್ದೇವೆ. ಜೂನ್ 30 ರವರೆಗೆ ಟ್ಯಾಕ್ಸ್ ಪೇ 5% ಡಿಸ್ಕೌಂಟ್ ಎಂದರು.
ಇದನ್ನೂ ಓದಿ: BBMP Election: ಬಿಬಿಎಂಪಿ ಎಲೆಕ್ಷನ್‌ಗೆ ಸಿದ್ಧತೆ ಆರಂಭಿಸಿದ ಕಾಂಗ್ರೆಸ್; ಪೂರ್ವತಯಾರಿ ಸಮಿತಿ ರಚನೆ
ಉಡುಪಿ
karnataka weather forecast : ಮುಕ್ಕಾಲು ಜಿಲ್ಲೆಗೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ
Rain News : ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ (karnataka weather forecast) ನಿರೀಕ್ಷೆ ಇದೆ. ಉಳಿದಂತೆ ಒಣ ಹವೆ ಇರಲಿದೆ.
ಬೆಂಗಳೂರು: ಸಕ್ರಿಯವಾಗಿದ್ದ ಮುಂಗಾರು ರಾಜ್ಯದಲ್ಲಿ (karnataka weather forecast) ಮತ್ತೆ ದುರ್ಬಲಗೊಂಡಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇದೀಗ ವರುಣ ಕೈಕೊಟ್ಟಿದ್ದಾನೆ. ಮುಂದಿನ 24 ಗಂಟೆಯಲ್ಲಿ ಒಣ ಹವೆ ಇರಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಒಣಹವೆ ಮೇಲುಗೈ ಸಾಧಿಸುತ್ತದೆ. ಬೆಂಗಳೂರು ನಗರ ಪ್ರದೇಶದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಒಣಹವೆ ಇರಲಿದೆ.
ಇದನ್ನೂ ಓದಿ: Mangaluru News : ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಹಿಳೆ ಸಾವು
ಉತ್ತರ ಒಳನಾಡಲ್ಲಿ ಲಘು ಮಳೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಗುಡುಗು ಮಳೆ
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದ ಮಳೆ ಸುರಿಯಬಹುದು.
ಇನ್ನು ರಾಜ್ಯದಲ್ಲಿ ಸೋಮವಾರ ಕಲಬುರಗಿಯ ಅಡಕಿಯಲ್ಲಿ 3 ಸೆಂ.ಮೀ, ಮುಧೋಳದಲ್ಲಿ 2 ಸೆಂ.ಮೀ ಹಾಗೂ ಉತ್ತರ ಕನ್ನಡದ ಕದ್ರಾ, ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Kuruba Conference: ಬೆಳಗಾವಿಯಲ್ಲಿ ಬೃಹತ್ ಕುರುಬ ಸಮಾವೇಶದ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಶಕ್ತಿ ಪ್ರದರ್ಶನ
Kuruba Conference: ಬೆಳಗಾವಿಯಲ್ಲಿ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶ ಮಂಗಳವಾರ ನಡೆಯಿತು. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕುರುಬ ನಾಯಕರು, ಸ್ವಾಮೀಜಿಗಳು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.
ಬೆಳಗಾವಿ: ಕಾಂಗ್ರೆಸ್‌ನಲ್ಲಿ ಲಿಂಗಾಯತ ಸಿಎಂ ಮತ್ತು ಮೂವರು ಡಿಸಿಎಂಗಳನ್ನು ಮಾಡಬೇಕು ಎಂಬ ಕೂಗು ಎದ್ದಿರುವ ಹೊತ್ತಿನಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲಿ ಬೃಹತ್ ಕುರುಬ ಸಮಾವೇಶ (Kuruba Conference) ನಡೆಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಪಕ್ಷದಲ್ಲಿ ಒಳಬೇಗುದಿಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರಮುಖ ಕುರುಬ ನಾಯಕರಾಗಿರುವ ಸಿದ್ದರಾಮಯ್ಯ ಅವರ ರಾಜಕೀಯ ವಿರೋಧಿಗಳಿಗೆ ನೇರ ಸಂದೇಶ ರವಾನಿಸುವ ರೀತಿಯಲ್ಲಿ ಇಲ್ಲಿನ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಮಂಗಳವಾರ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶ ಆಯೋಜಿಸಲಾಗಿತ್ತು. ಇದರಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕುರುಬ ನಾಯಕರು, ಸ್ವಾಮೀಜಿಗಳು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಗಣ್ಯರು ಸನ್ಮಾನ ಮಾಡಿದರು.
ಕುರುಬ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಹೆಚ್ಚಳದ ಬೇಡಿಕೆ ಸಮಾವೇಶದ ಪ್ರಮುಖ ಉದ್ದೇಶವಾಗಿತ್ತು. ಇನ್ನು ಸಮಾವೇಶದಲ್ಲಿ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರು ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ | Caste Census Report : ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಬಿಡುಗಡೆ ಮಾಡಲಿ ಎಂದ ಬಿ.ಕೆ. ಹರಿಪ್ರಸಾದ್
ಸಭೆಯಲ್ಲಿ ಸರ್ಕಾರಕ್ಕೆ 7 ಬೇಡಿಕೆಗಳು
1) ಜಾತಿವಾರು ಜನಗಣತಿ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು.
2) ರಾಷ್ಟ್ರ ಮಟ್ಟದಲ್ಲಿ ಕುರುಬರ ಆರ್ಥಿಕ, ಸಮಾಜಿಕ ಸಮೀಕ್ಷೆ ನಡೆಸಬೇಕು.
3) ರಾಷ್ಟ್ರದಲ್ಲಿ ಇರುವ ಎಲ್ಲಾ ಕುರುಬರನ್ನು ಎಸ್‌ಟಿ ಸಮಾಜಕ್ಕೆ ಸೇರಿಸಬೇಕು.
4) ಕೇಂದ್ರ ಮಹಿಳಾ ಮೀಸಲಾತಿಗೆ ಸ್ವಾಗತ. ಹಿಂದುಳಿದ ಮಹಿಳೆಯರಿಗೆ ಒಳ ಮೀಸಲಾತಿ ನೀಡಬೇಕು.
5) ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ನಂದಗಡ ಗ್ರಾಮವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಮಾಡಬೇಕು.
6) ಕುರಿ ಮೇಯಿಸಲು ಕಂದಾಯ ಭೂಮಿಯನ್ನು ಕಾಯ್ದಿರಿಸಬೇಕು. ಸಂಚಾರಿ ಆಸ್ಪತ್ರೆ, ಸಂಚಾರಿ ಶಾಲೆಗಳನ್ನು ಆರಂಭಿಸಬೇಕು. ಹಾನಿಗೆ ಒಳಗಾದ ಕುರಿಗಳಿಗೆ ಪರಿಹಾರ ನೀಡಬೇಕು.
7) ಕುರಿ, ಮೇಕೆ ಮಹಾಮಂಡಳಕ್ಕೆ 100 ಕೋಟಿ ರೂಪಾಯಿ ಕೊಡಬೇಕು.
ಜಾತಿ ರಾಜಕಾರಣ ಮಾಡಲ್ಲ, ಸಾಮಾಜಿಕ ನ್ಯಾಯ ನನ್ನ ಉಸಿರು: ಸಿದ್ದರಾಮಯ್ಯ
ಸಮಾಜದ ಎಲ್ಲಾ ಜಾತಿ-ವರ್ಗದ ಜನಗಳು ಸಂಘಟಿತರಾಗಿ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಬೇಕು. ನಾನು ಯಾವತ್ತೂ ಜಾತಿ ಮಾಡುವವನಲ್ಲ. ಸಾಮಾಜಿಕ ನ್ಯಾಯ ನನ್ನ ಉಸಿರು. ಅವಕಾಶ ವಂಚಿತ ಜಾತಿಗಳ ಜನ ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತ ಸಮಾವೇಶ ನಡೆಸುವುದು ತಪ್ಪಲ್ಲ ಎಂದು ಸಮಾಜವಾದಿ ನಾಯಕ ರಾಮಮನೋಹರ ಲೋಹಿಯಾ ಹೇಳಿದ್ದರು. ಅದರಂತೆ ಈ ಸಮಾವೇಷ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನಾನು ಈ ಜಾತಿ ವ್ಯವಸ್ಥೆಗೆ ಯಾವತ್ತಿದ್ದರೂ ವಿರುದ್ಧ. ಆದರೆ, ಅಶಕ್ತ ಜನ ಸಮುದಾಯಗಳು ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತರಾಗುವುದು ತಪ್ಪಲ್ಲ ಎಂದು ನಂಬಿದ್ದೇನೆ. ಅಶಕ್ತ ಸಮುದಾಯಗಳು ಸಂಘಟಿತರಾಗದೇ ಇರುವುದರಿಂದ ಮತ್ತು ತಮ್ಮಲ್ಲಿ ನಾಯಕತ್ವ ಬೆಳೆಸಿಕೊಳ್ಳದೇ ಇರುವುದರಿಂದ ಅವರ ಪಾಲಿನ ಹಕ್ಕುಗಳು ಮತ್ತು ರಾಜಕೀಯ ಅಧಿಕಾರದಿಂದ ವಂಚಿತವಾಗಿವೆ ಎಂದು ವಿವರಿಸಿದರು.
ನಮ್ಮ ಸಮುದಾಯಕ್ಕೆ ರಾಜಕೀಯ ಇತಿಹಾಸ ಇದೆ. ಸಾಂಸ್ಕೃತಿಕ ಭವ್ಯತೆ ಇದೆ. ಹಕ್ಕ ಬುಕ್ಕರಿಂದ ಹಿಡಿದು ಅಹಲ್ಯಾಬಾಯಿ ಹೋಳ್ಕರ್‌ವರೆಗೂ ನಮಗೊಂದು ಚರಿತ್ರೆ ಇದೆ. ಆದರೆ, ಸಂಘಟನೆ ಇಲ್ಲದಿದ್ದರಿಂದ ನಮಗೆ ಸಲ್ಲಬೇಕಾಗಿದ್ದು ಸಲ್ಲುತ್ತಿರಲಿಲ್ಲ. ಸಂಘಟನೆ ಇಲ್ಲದಿದ್ದರೆ ಕಾಗಿನೆಲೆ ಗುರುಪೀಠ, ಸಂಸ್ಥಾನ ಆಗುತ್ತಿರಲಿಲ್ಲ. ಕಾಗಿನೆಲೆ ಪೀಠ ಒಂದು ಜಾತಿಯ ಮಠ ಅಲ್ಲ. ಎಲ್ಲಾ ಶೋಷಿತ ಸಮುದಾಯಗಳಿಗೆ ಸೇರಿದ್ದು ಕಾಗಿನೆಲೆ ಪೀಠ ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ | Karnataka Politics : ಬಿಜೆಪಿಗೆ ಚಿಲುಮೆ ತಂದ ಸಂಕಟ! ರಾಜ್ಯ ಸರ್ಕಾರದಿಂದ ಮತ್ತೊಂದು ತನಿಖಾಸ್ತ್ರ
ಪ್ರತಿ ಸಮುದಾಯಗಳು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆದರೆ ಮಾತ್ರ ಸಮಸಮಾಜದ ನಿರ್ಮಾಣ ಸಾಧ್ಯ. ಎಲ್ಲರಿಗೂ ಅವರವರ ಪಾಲಿನ ಅಧಿಕಾರ, ಅವಕಾಶ ಸಿಗಬೇಕು. ಈ ಸಾಮಾನ್ಯ ಜ್ಞಾನ ನಮ್ಮನ್ನು ಟೀಕಿಸುವವರಿಗೆ ಇಲ್ಲವಾಗಿದೆ ಎಂದರು.
ನಮ್ಮದು ಹೇಳಿ ಕೇಳಿ ಜಾತಿ ಮತ್ತು ತಾರತಮ್ಯದಿಂದ ಕೂಡಿರುವ ಸಮಾಜ. ಹೀಗಾಗಿ ಅವಕಾಶಗಳ ಹಂಚಿಕೆಯಲ್ಲೂ ತಾರತಮ್ಯ ಇರುತ್ತದೆ. ಇವನ್ನೆಲ್ಲಾ ಸರಿದೂಗಿಸಬೇಕಾದರೆ ಸಂಘಟನೆ, ಸಮಾವೇಶಗಳು ಅಗತ್ಯ ಎಂದ ಅವರು, ನಾನು ರೂಪಿಸಿದ ಐದು ಗ್ಯಾರಂಟಿ ಯೋಜನೆಗಳು ಒಂದು ಸಮಾಜಕ್ಕೆ, ಒಂದು ಧರ್ಮಕ್ಕೆ, ಒಂದು ಜಾತಿಗೆ ಸೀಮಿತವಾದವುಗಳಲ್ಲ. ಸರ್ವ ಜಾತಿ ಜನಗಳ ಬದುಕಿಗೆ ಅನುಕೂಲ ಕಲ್ಪಿಸುತ್ತಿವೆ ಎಂದು ಮುಖ್ಯಮಂತ್ರಿಗಳು ಉದಾಹರಿಸಿದರು.
ಕಾಗಿನೆಲೆ ಕನಕ ಗುರು ಪೀಠದ ಶ್ರೀ ನಿರಂಜನಾನಂದ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಸಿದ್ದರಾಮಾನಂದಪುರಿ ಸ್ವಾಮೀಜಿ ಹಾಗೂ ಅರ್ಜುನಾಭಾಯಿಪುರಿ ಸ್ವಾಮೀಜಿಯವರುಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.
ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಮಾವೇಷ ಉದ್ಘಾಟಿಸಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್‌ನ ಅಧ್ಯಕ್ಷ ಮಾಜಿ ಮಂತ್ರಿ ಎಚ್.ವಿಶ್ವನಾಥ್ ಅವರು ವಹಿಸಿದ್ದರು.
ಇದನ್ನೂ ಓದಿ | Lingayat CM : ರಾಜ್ಯದಲ್ಲಿ 3 ಲಿಂಗಾಯತ ಡಿಸಿ, 7 ಎಸ್ಪಿ ಇದಾರೆ; ಶಾಮನೂರು ಹೇಳಿಕೆ 100% ತಪ್ಪು ಎಂದ ರಾಯರೆಡ್ಡಿ
ಮುಖ್ಯ ಅತಿಥಿಗಳಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿಯ ರಾಜ್ಯ ಸಚಿವ ಫಗ್ಗಾನ್ ಸಿಂಗ್ ಕುಲಾಸ್ತೆ, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗೋವಾ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಚಂದ್ರಕಾಂತ್ ಬಾಬು ಕಾವಲೇಕರ್, ಮಹಾರಾಷ್ಟ್ರ ರಾಜ್ಯದ ಮಾಜಿ ಸಚಿವ ಮಹದೇವ್ ಜನಕಾರ್, ದತ್ತಾತ್ರೇಯ ಭರ್ನೆ, ರಾಮ ಶಂಕರ್ ಶಿಂದೆ, ಶೆಫರ್ಡ್ ಇಂಟರ್ ನ್ಯಾಷನಲ್ ಉಪಾಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಆಂಧ್ರ. ಪ್ರದೇಶ ರಾಜ್ಯದ ಸಚಿವೆ ಕೆ.ವಿ.ಉಷಾಶ್ರೀ ಚರಣ್, ಮಾತಾ ಅಹಿಲ್ಯಾಬಾಯಿ ಹೋಳ್ಕರ್ ಅವರ ಮೊಮ್ಮಗ ಭೂಷಣ್ ರಾಜೆ ಹೋಳ್ಕರ್, ಗುಜರಾತ್ ರಾಜ್ಯದ ಮುಖಂಡರಾದ ಸಾಗರ್ ರಾಯ್ಕ ಸೇರಿ 60ಕ್ಕೂ ಹೆಚ್ಚು ಮಂದಿ ನಾನಾ ರಾಜ್ಯಗಳ ಕುರುಬ ಮತ್ತು ಗೋಪಾಲಕ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು.
.
ಕರ್ನಾಟಕ
Shivamogga Violence : ಎನ್‌ಕೌಂಟರ್ ಸುದ್ದಿ ಸುಳ್ಳು, ಮುಸ್ಲಿಮರು ಬಳಸಿದ್ದು ಆಟಿಕೆ ತಲವಾರ್ ಎಂದ ಎಸ್ಪಿ
Shivamogga Violence : ಶಿವಮೊಗ್ಗದಲ್ಲಿ ಪೊಲೀಸ್ ಎನ್‌ಕೌಂಟರ್ ನಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಆರೋಪಿ ಮೇಲೆ ಪೊಲೀಸರು ಎಫ್‌ಐಆರ್ ಹಾಕಿದ್ದಾರೆ. ಜತೆಗೆ ಈದ್ ಮಿಲಾದ್ ಮೆರವಣಿಗೆಯಲ್ಲಿ ಬಳಸಿದ್ದು ಒರಿಜಿನಲ್ ತಲವಾರು ಅಲ್ಲ ಎಂದಿದ್ದಾರೆ.
ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸರು ಎನ್‌ಕೌಂಟರ್ (Police Encounter) ಮಾಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು (Fake News) ಹರಡಿಸಲಾಗುತ್ತಿದೆ. ನಮ್ಮಲ್ಲಿ ಯಾವುದೇ ಎನ್‌ಕೌಂಟರ್ ನಡೆದಿಲ್ಲ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ (Shivamogga SP Mithun Kumar) ಸ್ಪಷ್ಟಪಡಿಸಿದ್ದಾರೆ. ಈ ರೀತಿಯಾದ ಸುಳ್ಳು ಸುದ್ದಿಯನ್ನು ಫಾರ್ವರ್ಡ್ ಮಾಡಿ ಸಮಾಜದಲ್ಲಿ ಅಶಾಂತಿ ಹರಡಿಸುವ ಪ್ರಯತ್ನ ನಡೆಸಿದ ಅಜ್ಗರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ತಿಳಿಸಿದರು. ಇದೇ ವೇಳೆ ಮುಸ್ಲಿಮರ ಮೆರವಣಿಗೆಯಲ್ಲಿ (Muslims Procession) ಬಳಸಿದ್ದು ಆಟಿಕೆಯ ತಲವಾರ್ (Toy Talwar) ಎಂದು ಅವರು ಸ್ಪಷ್ಟಪಡಿಸಿದರು.
ಶಿವಮೊಗ್ಗ ಪೊಲಿಸರು ಒಬ್ಬ ಆರೋಪಿಯನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಹೇಳುವ ಚಿತ್ರ, ವರದಿ, ವಿಡಿಯೊಗಳು ಬೆಳಗ್ಗಿನಿಂದ ಹರಿದಾಡುತ್ತಿದ್ದವು. ಇದು ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಲ್ಲೂ ಸದ್ದು ಮಾಡಿತ್ತು. ಕೂಡಲೇ ಎಚ್ಚೆತ್ತುಕೊಂಡ ಶಿವಮೊಗ್ಗ ಪೊಲೀಸರು ಶಿವಮೊಗ್ಗದಲ್ಲಿ ಈ ಫೋಟೊ ಮತ್ತು ಸುದ್ದಿ ಹರಡಲು ಯಾರು ಕಾರಣ ಎಂದು ಹುಡುಕಾಡಿದರು. ಕೊನೆಗೆ ಈ ಚಿತ್ರ ಮತ್ತು ವರದಿಯನ್ನು ಫಾರ್ವರ್ಡ್ ಮಾಡಿದ್ದು ಅಜ್ಗರ್ ಎಂಬಾತ ಎಂದು ತಿಳಿದುಬಂತು. ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಇಷ್ಟು ಮಾತ್ರವಲ್ಲ, ಯಾರೆಲ್ಲ ಈ ಸುಳ್ಳು ಸುದ್ದಿಯನ್ನು ಫಾರ್ವರ್ಡ್ ಮಾಡಿದ್ದಾರೋ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದರು. ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಯಾರೂ ವದಂತಿಗಳಿಗೆ ಕಿವಿಗೊಡಬೇಡಿ ಎಂದ ಎಸ್ಪಿ
ʻʻಶಿವಮೊಗ್ಗದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದೆ. ಸಹಜ ಸ್ಥಿತಿ ಮರುಕಳಿಸಿದೆ. ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ 24 ಕೇಸು ದಾಖಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಎಲ್ಲೆಡೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಯಾರೂ ಕೂಡ ವದಂತಿಗೆ ಕಿವಿಗೊಡಬೇಡಿ. ಸಾರ್ವಜನಿಕರು ಸುಳ್ಳು ಸುದ್ದಿ ನಂಬಬೇಡಿʼʼ ಎಂದು ವಿನಂತಿಸಿರುವ ಎಸ್‌ಪಿ ಮಿಥುನ್ ಕುಮಾರ್ ಅವರು, ಇನ್ನೂ ಹಲವರನ್ನು ಬಂಧಿಸಲಿದ್ದೇವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆ ಇಲ್ಲ. ಹೊರಗಿನಿಂದ ಬಂದವರ ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿವೆ. ಯಾರು ಕಾರಣಕರ್ತರಿದ್ದಾರೆ ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಯಾರು ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆʼʼ ಎಂದು ವಿವರಿಸಿದ್ದಾರೆ.
ಇದನ್ನೂ ಓದಿ: Shivamogga Violence : ಶಿವಮೊಗ್ಗ ಗಲಭೆ ವೇಳೆ ಕಾಣಿಸಿಕೊಂಡ ಹೊರ ಜಿಲ್ಲೆ ಕಾರುಗಳ ರಹಸ್ಯ ಬಯಲು
ಮೆರವಣಿಗೆಯಲ್ಲಿ ಜಳಪಿಸಿದ ಕತ್ತಿ ಒರಿಜಿನಲ್ ಅಲ್ಲ, ಆಟಿಕೆ
ಮಚ್ಚು, ಲಾಂಗ್ ತೋರಿಸಿದವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು, ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದು ಬಂದಿದೆ. ಆಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ತಿಳಿಸುತ್ತೇನೆ. ಆದರೆ, ಯಾವುದೇ ಸುಳ್ಳು ಸುದ್ದಿ ವಿಡಿಯೋಗಳನ್ನು ನಂಬಬೇಡಿ ಎಂದು ಅವರು ಹೇಳಿದರು.
ʻʻರಾಗಿಗುಡ್ಡದಲ್ಲಿ ಮೆರವಣಿಗೆ ದಿನ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗುವುದುʼʼ ಎಂದು ಕೂಡಾ ಎಚ್ಚರಿಕೆ ನೀಡಿದರು.
ಕರ್ನಾಟಕ
Lecturer Death : ಬಿಜಿಎಸ್ ಕಾಲೇಜಿನ ಉಪನ್ಯಾಸಕ ನೇಣಿಗೆ ಶರಣು; ಸಾವಿನ ಸುತ್ತ ಅನುಮಾನದ ಹುತ್ತ
Lecturer Death : ಅನುಮಾನಾಸ್ಪದ ರೀತಿಯಲ್ಲಿ ಉಪನ್ಯಾಸಕರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ: ಇಲ್ಲಿನ ಅವಲಗುರ್ಕಿ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಉಪನ್ಯಾಸಕರೊಬ್ಬರು (Lecturer Death) ಮೃತಪಟ್ಟಿದ್ದಾರೆ. ಸುದರ್ಶನ್ (25) ಮೃತ ಉಪನ್ಯಾಸಕ.
ಸುದರ್ಶನ್ ಬಾಗೇಪಲ್ಲಿ ಮೂಲದ ನಿವಾಸಿ ಆಗಿದ್ದಾರೆ. ಬಿಜಿಎಸ್ ಕಾಲೇಜಿನಲ್ಲಿ ಗಣಿತ ವಿಭಾಗದ ಉಪನ್ಯಾಸಕನಾಗಿದ್ದರು. ಕಾಲೇಜು ಸಮೀಪದ ಆವಲಗುರ್ಕಿ ಗ್ರಾಮದಲ್ಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದೇ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವು ಪತ್ತೆಯಾಗಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ: Namma Metro: ಮೆಟ್ರೋ ಟ್ರ್ಯಾಕ್‌ನಲ್ಲಿ ಲಾಕ್ ಆದ ಮೆಂಟೈನ್ಸ್ ವೆಹಿಕಲ್! ಮೇಲೆತ್ತಲು ಕ್ರೇನ್ ಬಳಕೆ
ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದ ಮಹಿಳೆ ಸಾವು
ಮಂಗಳೂರು: ಇಲ್ಲಿನ ಸುಳ್ಯ ಬೆಳ್ಳಾರೆ ಸಮೀಪದ ಶೇಣಿ ಎಂಬಲ್ಲಿ ವಿಷಕಾರಿ ಹಣ್ಣಿನ (Poison juice) ಜ್ಯೂಸ್ ಕುಡಿದು ಅಸ್ವಸ್ಥಗೊಂಡಿದ್ದ ಮಹಿಳೆಯೊಬ್ಬರು (Mangaluru News) ಮೃತಪಟ್ಟಿದ್ದಾರೆ. ಶೇಣಿಯ ಕುಳ್ಳಾಜೆ ನಿವಾಸಿ ಲೀಲಾವತಿ (35) ಮೃತ ದುರ್ದೈವಿ.
ಲೀಲಾವತಿ ವಾರದ ಹಿಂದೆ ಮೈರೋಲ್ ಎಂಬ ಕಾಡಿನ ಹಣ್ಣು ತಂದಿದ್ದರು. ಆದರೆ ಅದು ಮೈರೋಲ್ ಹಣ್ಣಿನಂತೇ ಹೋಲುವ ವಿಷದ ಹಣ್ಣಾಗಿತ್ತು. ಇದು ತಿಳಿಯದೆ ಆ ಹಣ್ಣಿನಲ್ಲಿ ಜ್ಯೂಸ್ ಮಾಡಿ ಲೀಲಾವತಿ ಹಾಗೂ ಆಕೆ ತಂದೆ ಕುಡಿದಿದ್ದರು. ಜ್ಯೂಸ್ ಕುಡಿಯುತ್ತಿದ್ದಂತೆ ಅಸ್ವಸ್ಥಗೊಂಡಿದ್ದರು.
ವಾಂತಿ, ಭೇದಿಯಾಗಿ ಸುಸ್ತು, ಆಯಾಸದಿಂದ ಬಳಲುತ್ತಿದ್ದ ಲೀಲಾವತಿಯನ್ನು ಕೂಡಲೇ ಸುಳ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಜೀವ ಬಿಟ್ಟಿದ್ದಾಳೆ. ಜ್ಯೂಸ್ ಕುಡಿದಿದ್ದ ಲೀಲಾವತಿ ತಂದೆಯವರು ಚೇತರಿಸಿಕೊಳ್ಳುತ್ತಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ದೇಶ18 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ದೇಶ22 hours ago
Plane Crash: ಜಿಂಬಾಬ್ವೆಯಲ್ಲಿ ವಿಮಾನ ಪತನ, ಭಾರತದ ಉದ್ಯಮಿ ಹಾಗೂ ಅವರ ಪುತ್ರ ದುರ್ಮರಣ
-
ಪ್ರಮುಖ ಸುದ್ದಿ14 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಟಾಪ್ 10 ನ್ಯೂಸ್21 hours ago
VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು
-
ದೇಶ20 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕ್ರಿಕೆಟ್21 hours ago
ICC World Cup 2023 : ಭಾರತದ ಮಾಜಿ ಆಟಗಾರ ಅಫಘಾನಿಸ್ತಾನ ತಂಡದ ಮೆಂಟರ್
-
ದೇಶ9 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
South Cinema24 hours ago
Ragini Dwivedi: ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ಸಾಂಗ್ಗೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ!