Site icon Vistara News

ತೇಜಸ್ವಿ ಸೂರ್ಯ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ವಕ್ತಾರ ಡಾ.ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು ಬಂಧನ

congress protest

ಬೆಂಗಳೂರು: ಸಂಸದ, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ “ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಾಗಿತ್ತು” ಎಂಬ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದ ಕೆಪಿಸಿಸಿ ವಕ್ತಾರ ಡಾ.ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು ಮತ್ತು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, “ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಾಗಿತ್ತು” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಖಂಡಿಸಿರುವ ಕಾಂಗ್ರೆಸ್​, ತೇಜಸ್ವಿ ಸೂರ್ಯ ಅವರ ಗೃಹ ಕಚೇರಿಗೆ ಹೋಗಿ ಕಲ್ಲು ಮತ್ತು ಹೂಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಶಾಂತಿಯುತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ಇದರ ನೇತೃತ್ವ ವಹಿಸಿದ್ದ ಕೆಪಿಸಿಸಿ ವಕ್ತಾರ ಡಾ. ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಅವರನ್ನು ಮಾರ್ಗ ಮಧ್ಯದಲ್ಲೆ ಪೊಲೀಸರು ತಡೆದು ವಶಕ್ಕೆ ತೆಗೆದುಕೊಂಡಿದ್ದಾರೆ.

ಪೊಲೀಸರು ವಶಕ್ಕೆ ಪಡೆದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೆಪಿಸಿಸಿ ವಕ್ತಾರ ಡಾ. ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು, “ನಾವು ಶಾಂತಿಯುತವಾಗಿ ಪ್ರತಿಭಟನೆಗೆ ಮುಂದಾಗಿದ್ದವು. ಆದರೆ ನಮ್ಮನ್ನು ದಾರಿ ನಡುವೆಯೇ ಬಂಧಿಸಿದ್ದಾರೆ. ಹಾಗೇ ನಮ್ಮ ಪ್ರತಿಭಟನೆಯನ್ನು ತಡೆದಿದ್ದಾರೆ. ಇದೇ ರೀತಿಯ ಎಚ್ಚರಿಕೆಯನ್ನು ನೀವು ಮಂಗಳೂರಲ್ಲಿ ಮಾಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಆದರೂ ನಿಮ್ಮ ಕೆಲಸವನ್ನು ನೀವು ಮಾಡಿ, ಪ್ರಜಾಪ್ರಭುತ್ವದ ರಕ್ಷಣೆ ಕೆಲಸವನ್ನು ನಾವು ಮಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನು ಓದಿ| ಕಲ್ಲು ಹೊಡೆಯಬಹುದಿತ್ತು ಎಂದಿದ್ದ ತೇಜಸ್ವಿ ಸೂರ್ಯಗೆ ಹೂವು ಕೊಡಲು ಬಂದ ಕಾಂಗ್ರೆಸ್ಸಿಗರು ವಶಕ್ಕೆ

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದ ತೇಜಸ್ವಿ ಸೂರ್ಯ ಅವರು ಬೇಜವಾಬ್ದಾರಿಯುತ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಕದಡುವಂತೆ ಪ್ರಚೋದನೆ ನೀಡಿದ್ದಾರೆ. ಇದನ್ನು ಪ್ರಶ್ನೆ ಮಾಡಿ, ಶಾಂತಿಯುತ ಪ್ರತಿಭಟನೆ ಮಾಡಿದವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡಲಿಲ್ಲ. ಇದು ಯಾವ ನ್ಯಾಯ? ಬೇಜವಾಬ್ದಾರಿಯುತ ಹೇಳಿಕೆಯನ್ನು ಪ್ರಶ್ನೆ ಮಾಡುವ ಅಧಿಕಾರವೂ ನಮ್ಮಗಿಲ್ಲವೇ? ಆದರೂ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಡಾ. ಶಂಕರ ಗುಹಾ ದ್ವಾರಕನಾಥ್ ಗುಹಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲರಿಗೂ ರಕ್ಷಣೆ ನೀಡಲು ಸಾಧ್ಯವೇ ಎಂದು ಹೇಳಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಇಂದು ತನ್ನ ಮತ್ತು ಶಾಸಕ ರವಿ ಸುಬ್ರಮಣ್ಯ ಅವರ ಗೃಹ ಕಚೇರಿ ಮುಂದೆ 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿಕೊಂಡಿದ್ದು ಯಾಕೆ? ಇಷ್ಟೊಂದು ಭಯವೇ ನಿಮಗೆ? ನಿಮಗೆ ಮಾತ್ರ ರಕ್ಷಣೆ ಬೇಕು. ಜನಸಾಮಾನ್ಯರಿಗೆ ಮಾತ್ರ ರಕ್ಷಣೆ ಬೇಡವೇ ? ಓರ್ವ ಜನಪ್ರತಿನಿಧಿಯಾಗಿ ಎಚ್ಚರಿಕೆಯಿಂದ ಹೇಳಿಕೆ ನೀಡಬೇಕು ಅನ್ನುವ ಸಾಮಾನ್ಯ ಜ್ಞಾನವೂ ನಿಮಗಿಲ್ಲವೇ ಎಂದು ಅವರು ತೇಜಸ್ವಿ ಸೂರ್ಯ ವಿರುದ್ಧ ಗುಡುಗಿದ್ದಾರೆ.

ಇದನ್ನು ಓದಿ| Audio Leak | ಕಾಂಗ್ರೆಸ್ ಸರ್ಕಾರ ಆಗಿದ್ರೆ ಕಲ್ಲು ಹೊಡೆಯಬಹುದಿತ್ತು ಎಂದ ತೇಜಸ್ವಿ!

Exit mobile version