Site icon Vistara News

ಮುರುಘಾಶ್ರೀ ಪ್ರಕರಣ | ಶ್ರೀಗಳ ವಿರುದ್ಧ ಕಠಿಣ ಕ್ರಮ, ಸಿಬಿಐ ತನಿಖೆ ಆಗ್ರಹಿಸಿ ಪ್ರತಿಭಟನೆ

protest against

ಚಿಕ್ಕೋಡಿ/ಮಂಡ್ಯ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯದ ನಾನಾ ಕಡೆ ಪ್ರತಿಭಟನೆಗಳು ನಡೆದಿವೆ.

ಗೋಕಾಕದಲ್ಲಿ ದಲಿತ ಪರ ಸಂಘಟನೆಗಳು ಶ್ರೀಗಳ ವಿರುದ್ಧ ಧಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿದವು. ಇಲ್ಲಿನ ಬಸವರೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಶ್ರೀಗಳ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಪಡಿಸಲಾಯಿತು. ದಲಿತರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಆಯೋಜಿಸಿತ್ತು.

ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ ತಹಸೀಲ್ದಾರ್‌ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಮಂಡ್ಯದಲ್ಲಿಯೂ ಪ್ರತಿಭಟನೆ
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಯಿತು. ʻʻಶ್ರೀಗಳಿಗೆ ರಾಜಕೀಯ ಬೆಂಬಲವಿದೆ. ಈ ಪ್ರಕರಣದಿಂದ ತಪ್ಪಿಸಿಕೊಳ್ಳುವ ಹುನ್ನಾರ‌ ನಡೆಯುತ್ತಿದೆ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕುʼʼ ಎಂದು ತಹಸೀಲ್ದಾರರಿಗೆ ಮನವಿ ಮಾಡಿದರು.

Exit mobile version