Site icon Vistara News

Protest at Belagavi | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು, ಗ್ರಾಪಂ ನೌಕರರ ಪ್ರತಿಭಟನೆ

Protest at Belagavi

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸುವರ್ಣ ವಿಧಾನಸೌಧ ಸಮೀಪ ರೈತರು ಹಾಗೂ ಪಂಚಾಯಿತಿ ನೌಕರರು ಸೋಮವಾರ ಪ್ರತಿಭಟನೆ (Protest at Belagavi) ನಡೆಸಿದರು.

ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು. ಬೆಳೆಗಳ ಬೆಂಬಲ‌ ಬೆಲೆಯನ್ನು ಹೆಚ್ಚಳ ಮಾಡಬೇಕು. ಬಾಕಿ ಇರುವ ಬೆಳೆಹಾನಿ ಪರಿಹಾರ, ಬೆಳೆ ವಿಮೆ ಪರಿಹಾರ ಕೊಡಬೇಕು. ಕಬ್ಬಿನ ಬೆಳೆಗೆ ಏಕರೂಪದ ದರವನ್ನು ರಾಜ್ಯ ಸರ್ಕಾರ ನಿಗದಿಪಡಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಸುವರ್ಣಸೌಧದ ಸಮೀಪದ ಕೊಂಡಸಕೊಪ್ಪದಲ್ಲಿ ಹೋರಾಟ ನಡೆಸಿದರು.

ಮತ್ತೊಂದೆಡೆ ಗ್ರಾಮ ಪಂಚಾಯಿತಿ ನೌಕರರು ಕೂಡ ಪ್ರತಿಭಟನೆ ನಡೆಸಿದ್ದು ಕಂಡುಬಂತು. ಸಿ ಮತ್ತು ಡಿ ದರ್ಜೆಗೆ ಮುಂಬಡ್ತಿ ನೀಡುವುದು, ಭವಿಷ್ಯ ನಿಧಿ ಹಾಗೂ ಆರೋಗ್ಯ ಭದ್ರತೆ ಒದಗಿಸವುದು, ವೇತನ ಶ್ರೇಣಿ ನಿಗದಿಪಡಿವುಸು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಗ್ರಾಮ ಪಂಚಾಯಿತಿ ನೌಕರರು ಸರ್ಕಾರಕ್ಕೆ ಆಗ್ರಹಿಸಿದರು. ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ೩ ಸಾವಿರಕ್ಕೂ ಅಧಿಕ ಗ್ರಾಮ ಪಂಚಾಯಿತಿ ನೌಕರರು ಧರಣಿಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾ ಸ್ಥಳಕ್ಕೆ ಬರುವ ಪ್ರತಿಯೊಬ್ಬರನ್ನೂ ಪೊಲೀಸರು ತಪಾಸಣೆ ನಡೆಸಿದರು. ಈ ವೇಳೆ ಕೆಎಸ್‌ಆರ್‌ಟಿಸಿ ಸಿಬ್ಬಂದಿಯೊಬ್ಬರ ಬ್ಯಾಗ್‌ನಲ್ಲಿ ಪೆಟ್ರೋಲ್ ಮತ್ತು ಮದ್ಯದ ಬಾಟಲಿ ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ | Border Dispute | ಎಂಇಎಸ್ ಮಹಾಮೇಳಾವ್‌‌ಗೆ ರಾಜ್ಯ ಸರ್ಕಾರ ಬ್ರೇಕ್; ನಿಪ್ಪಾಣಿ ಗಡಿಗೆ ಬಂದಿದ್ದ ಮಹಾ ನಾಯಕರ ಹಿಮ್ಮೆಟ್ಟಿದ ಪೊಲೀಸರು

Exit mobile version