ಹಾಸನ: ಗೋಮಾಳವನ್ನು ಗ್ರಾಮಕ್ಕೆ ಮೀಸಲಿಡುವಂತೆ ಒತ್ತಾಯಿಸಿ ಕೌಶಿಕ ಗ್ರಾಮದ ಗ್ರಾಮಸ್ಥರು ಕಳೆದ ಹದಿನೆಂಟು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸ್ಪಂದಿಸದ ಕಾರಣ, ಎತ್ತಿನಗಾಡಿ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಹಾಸನದ ಕೌಶಿಕಿ ಗ್ರಾಮಸ್ಥರು ಎತ್ತಿನಗಾಡಿ, ಜಾನುವಾರುಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶವನ್ನು ಹೊರಹಾಕಿದ್ದಾರೆ. ಹಾಸನದ ಹೊಸ ಬಸ್ ನಿಲ್ದಾಣ ಬಳಿ ಎತ್ತಿನಗಾಡಿ ಹಾಗೂ ಜಾನುವಾರುಗಳು ಬರುತ್ತಿದ್ದಾಗ ಪೊಲೀಸರು ಅವರನ್ನು ತಡೆದಿದ್ದಾರೆ. ಆದಾಗ್ಯೂ ಗ್ರಾಮಸ್ಥರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಎತ್ತಿನಗಾಡಿಗಳನ್ನು ಅಲ್ಲಿಯೇ ಬಿಟ್ಟ ಗ್ರಾಮಸ್ಥರು ಕಾಲ್ನಡಿಗೆಯಲ್ಲಿ ಜಿಲ್ಲಾ ಪಂಚಾಯಿತಿಗೆ ಆಗಮಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಡಿಸಿ, ಎಸ್ಪಿ ಹಾಗೂ ಶಾಸಕರು ಜಿಲ್ಲಾ ಪಂಚಾಯಿತಿಯಲ್ಲಿ ಸಭೆ ನಡೆಸುತ್ತಿದ್ದ ವೇಳೆ ಪ್ರತಿಭಟನೆ ನಡೆದಿದೆ.
ಇದನ್ನೂ ಓದಿ: ಸಾ.ರಾ.ಮಹೇಶ್ ವಿರುದ್ಧ ಭೂ ಅಕ್ರಮ ದಾಖಲೆ ಬಿಡುಗಡೆ ಮಾಡಿದ ಆರ್‌ಟಿಐ ಕಾರ್ಯಕರ್ತ ಗಂಗರಾಜು