ಕಲಬುರಗಿ: ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ (Maratha Reservation) ಹಿಂಸಾಚಾರಕ್ಕೆ ತಿರುಗಿದೆ. ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಕೆ.ಎ-38 ಎಫ್-1201 ಬಸ್‌ಗೆ ಬೆಂಕಿ ಹಚ್ಚಿದ್ದರಿಂದ ಸುಟ್ಟು ಕರಕಲಾಗಿದೆ.
ಕಿಡಿಗೇಡಿಗಳು, ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಸ್ಥಳೀಯ ಪೊಲೀಸರ ಸಹಕಾರದಿಂದ ಬಸ್‌ನಲ್ಲಿದ್ದ 39 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನಂತರ ಪ್ರಯಾಣಿಕರಿಗೆ ಸುರಕ್ಷಿತವಾಗಿ ಅವರ ತಲುಪುವ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ | Lokayukta Raid: ರಾಜ್ಯದಲ್ಲಿ ಒಂದೇ ದಿನ 17 ಭ್ರಷ್ಟ ಅಧಿಕಾರಿಗಳ ಬೇಟೆ; ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ!
ಘಟನೆ ಹಿನ್ನೆಲೆಯಲ್ಲಿ ಕೆಕೆಆರ್‌ಟಿಸಿ, ಅಂತಾರಾಜ್ಯ ಬಸ್ ಸಂಚಾರ ಸ್ಥಗಿತಗೊಳಿಸಿದೆ. ಮಹಾರಾಷ್ಟ್ರಕ್ಕೆ ತಾತ್ಕಲಿಕವಾಗಿ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಮಾಹಿತಿ ನೀಡಿದ್ದಾರೆ. ಕಾರ್ಯಚರಣೆಯಲ್ಲಿರುವ ಬಸ್‌ಗಳನ್ನು ಹತ್ತಿರದ ಪೊಲೀಸ್ ಠಾಣೆ, ಬಸ್ ಡೀಪೋಗಳಲ್ಲಿ ಪಾರ್ಕ್ ಮಾಡಲು ಸಂಸ್ಥೆ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ.
ತಹಸೀಲ್ದಾರ್ ರಜೆ ನೀಡ್ತಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ ಎಸ್‌ಡಿಎ
ಹಾಸನ: ತಹಸೀಲ್ದಾರ್ ರಜೆ ನೀಡುತ್ತಿಲ್ಲ ಎಂದು ಬೇಸತ್ತು ಪೆಟ್ರೋಲ್ ಮೈ ಮೇಲೆ ಸುರಿದುಕೊಂಡು ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ (Hassan News) ಚನ್ನರಾಯಪಟ್ಟಣ ತಾಲೂಕು ಕಚೇರಿಯಲ್ಲಿ ನಡೆದಿದೆ.
ಮಹೇಶ್ ಆತ್ಮಹತ್ಯೆಗೆ ಯತ್ನಿಸಿದ ನೌಕರ. ರಜೆ ಪಡೆಯುವುದಾದರೆ ಬೇರೆಯವರಿಗೆ ಚಾರ್ಜ್ ನೀಡಿ ಹೋಗಿ ಎಂದಿದ್ದಕ್ಕೆ ಸಿಟ್ಟಿಗೆದ್ದು ಪೆಟ್ರೋಲ್ ಸುರಿದುಕೊಂಡು ನೌಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಮಹೇಶ್ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.
ಪರೀಕ್ಷಾ ಅಕ್ರಮ; 7 ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಾದಗಿರಿ: ಎಫ್‌ಡಿಎ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸೋಮವಾರ ಬಂಧನವಾಗಿದ್ದ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇವರಲ್ಲಿ ಓಂಕಾರ್ ಹಾಗೂ ನಾಮಕಾರ್ ಎಂಬ ಸಹೋದರೂ ಇದ್ದಾರೆ. ಪರೀಕ್ಷೆ ಬರೆಯುತ್ತಿದ್ದ ಓಂಕಾರನಿಗೆ ಹೊರಗಿನಿಂದ ಸಹಾಯ ಮಾಡಲು ಬಂದು ನಾಮಕಾರ್ ಸಿಕ್ಕಿಬಿದ್ದಿದ್ದ. ಮತ್ತೊಬ್ಬ ಆರೋಪಿ ಬಸವರಾಜ ಎಂಬಾತ ಯಾದಗಿರಿಯ ವಡಗೇರಾದಲ್ಲಿ ಎಫ್‌ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಈತನನ್ನು ಪರೀಕ್ಷೆ ಬರೆಯುತ್ತಿದ್ದವರಿಗೆ ಸಹಕಾರ ನೀಡುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿದೆ. ಈತ ಪಿಎಸ್‌ಐ ನೇಮಕಾತಿ ಅಕ್ರಮದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಸ್ವ ಗ್ರಾಮದ ಸೋನ್ನ ನಿವಾಸಿಐೂ ಆಗಿದ್ದಾನೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ