Site icon Vistara News

PSI Exam : ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆಗೆ ಡೇಟ್‌ ಫಿಕ್ಸ್‌; ಅ.3ಕ್ಕೆ ಪರೀಕ್ಷೆ ನಡೆಸಲು ಕೆಇಎ ತೀರ್ಮಾನ

PSI Exam 2024

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಪರೀಕ್ಷೆಯನ್ನು (PSI Exam) ಅಕ್ಟೋಬರ್ 3ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. ಈ ಹಿಂದೆ ಸೆ.22ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆ ದಿನಾಂಕದಂದೇ ಯುಪಿಎಸ್ಸಿ ಮುಖ್ಯ ಪರೀಕ್ಷೆ ಇದ್ದ ಕಾರಣ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

Police sub-inspector exam to be held on October 3

ಸರ್ಕಾರ ಇತ್ತೀಚೆಗೆ ‌ಬಿ ಮತ್ತು‌ ಸಿ ವರ್ಗದ ಹುದ್ದೆಗಳ ನೇಮಕ ಸಂದರ್ಭದಲ್ಲಿ ಅರ್ಜಿ ಸಲ್ಲಿಸಲು ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿರುವ ಕಾರಣ ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆ.19ರಿಂದ ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಪ್ರಸನ್ನ ವಿವರಿಸಿದ್ದಾರೆ.

ವಯೋಮಿತಿ ಸಡಿಲಿಕೆಯ ಲಾಭ ಪಡೆಯುವವರು ಸೇರಿ ಇತರ ಅರ್ಹರು ಸೆ.28ರವರೆಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಗೆ ಸೆ.29 ಕೊನೆ ದಿನ. ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಆದರೆ ಈ ಹುದ್ದೆಗಳಿಗೆ ಈ ಹಿಂದೆ ನಿಗದಿಪಡಿಸಿದ್ದ ದಿನಾಂಕಗಳಂದೇ ಪರೀಕ್ಷೆ ನಡೆಯಲಿದೆ. ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಅ.26 ರಂದು ನಡೆಸಲಾಗುತ್ತದೆ. ಅದರ ನಂತರ ಎಲ್ಲರಿಗೂ ಅ.27ರಂದು ಪತ್ರಿಕೆ- 1 ಮತ್ತು 2ರ ಪರೀಕ್ಷೆ ನಡೆಯಲಿದೆ ಎಂದರು.

ಇನ್ನು ಕೆ-ಸೆಟ್ ಮತ್ತು ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನವೆಂಬರ್ 24ರಂದು ಪ್ರತ್ಯೇಕ ಪರೀಕ್ಷೆಗಳನ್ನು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version