Site icon Vistara News

PSI Exam: ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟಿಸಿದ ಕೆಇಎ

KEA exams time table

ಬೆಂಗಳೂರು: 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ (PSI Exam) ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ತಾತ್ಕಾಲಿಕ ಕೀ ಉತ್ತರಗಳನ್ನು ಪಡೆಯಬಹುದಾಗಿದೆ.

ಕಳೆದ ಬಾರಿ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಬಾರಿ ಜ.23ರಂದು ಕಟ್ಟೆಚ್ಚರದಿಂದ ಪರೀಕ್ಷೆ ನಡೆಸಲಾಗಿತ್ತು. ಇದೀಗ ಮರು ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜ.30ರಿಂದ ಫೆ.05ರ ಸಂಜೆ 5 ಗಂಟೆಯೊಳಗೆ ಕೆಇಎ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್ ಬಳಸಿ ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಪಿಎಸ್‌ಐ ಮರು ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳು ಬುಕ್ಲೆಟ್‌ ಪ್ರಕಾರ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು. ಆಕ್ಷೇಪಣೆ ಸಲ್ಲಿಸುವಾಗ ಅಗತ್ಯ ಪೂರಕ ದಾಖಲೆಗಳ ಸ್ಕ್ಯಾನ್ ಕಾಪಿಯನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ.

545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದಿಂದ ಜ. 23ರಂದು ಮರು ಪರೀಕ್ಷೆ ನಡೆಸಲಾಗಿತ್ತು. ಇದೀಗ ಪಿಎಸ್‌ಐ ಮರು ಪರೀಕ್ಷೆಯ ಕೀ ಉತ್ತರ ಪ್ರಕಟವಾಗಿದ್ದು, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ | Job Alert: ಗುಡ್‌ ನ್ಯೂಸ್‌!: ಸದ್ಯವೇ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕ

5, 8, 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ; ಮಾದರಿ ಪ್ರಶ್ನೋತ್ತರ ಪತ್ರಿಕೆ ಬಿಡುಗಡೆ

Model paper

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲೆಗಳ 5, 8 ಮತ್ತು 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿಗೆ ಅನುಕೂಲವಾಗಲು ಮಾದರಿ ಪ್ರಶೋತ್ತರಗಳನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದೆ. ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ-2 (SA-2)ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ | SSLC, II PUC Exam: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ 5, 8 ಮತ್ತು 9ನೇ ತರಗತಿಯ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ದಿನಾಂಕ ಜ.26ರಂದು ಮಂಡಳಿಯ ವೆಬ್ ಸೈಟ್ https://kseeb.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಈ ಮಾದರಿ ಪ್ರಶೋತ್ತರಗಳನ್ನು ವಿದ್ಯಾರ್ಥಿಗಳು ನೋಡಿ ವ್ಯಾಸಂಗ ಮಾಡುವಂತೆ ಸೂಚಿಸಿದೆ.

Exit mobile version