Site icon Vistara News

PSI Scam: ಪಿಎಸ್‌ಐ ನೇಮಕಾತಿ ಅಕ್ರಮ; ಮತ್ತೊಬ್ಬ ಅಭ್ಯರ್ಥಿ ಬಂಧನ

PSI Scam

#image_title

ಕಲಬುರಗಿ: 545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ (PSI Scam) ಮತ್ತೊಬ್ಬ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸಂಜೀವ್‌ ಕುಮಾರ್ ಮುರಡಿ (29) ಬಂಧಿತ ಅಭ್ಯರ್ಥಿ. ಕಲಬುರಗಿ ನಗರದ ರೇಷ್ಮೆ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಈತ ಪರೀಕ್ಷೆ ಬರೆದಿದ್ದ. ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಎಸಗಿದ್ದ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ 14ನೇ ರ‍್ಯಾಂಕ್ ಪಡೆದಿದ್ದ ಸಂಜೀವ್‌ ಕುಮಾರ್, ಜೇವರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರೂಪ್ ಡಿ ನೌಕರನಾಗಿದ್ದ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Theft Case: ಮಗಳ ಮದುವೆಗಾಗಿ ಖರೀದಿಸಿದ್ದ ಚಿನ್ನ ಕಳ್ಳರ ಪಾಲು; ಎಲೆಕ್ಟ್ರಿಕಲ್‌ ಅಂಗಡಿಗೆ ಕನ್ನ ಹಾಕಿದ ಕಳ್ಳರು

Exit mobile version